Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಭಾಪತಿ ಸ್ಥಾನಕ್ಕೆ ಶೀಘ್ರ ಚುನಾವಣೆ...

ಸಭಾಪತಿ ಸ್ಥಾನಕ್ಕೆ ಶೀಘ್ರ ಚುನಾವಣೆ ನಡೆಸಲು ಬಿಗಿ ಪಟ್ಟು: ಪರಿಷತ್‌ನಲ್ಲಿ ಬಿಜೆಪಿ ಸಭಾತ್ಯಾಗ

ವಾರ್ತಾಭಾರತಿವಾರ್ತಾಭಾರತಿ10 July 2018 10:20 PM IST
share
ಸಭಾಪತಿ ಸ್ಥಾನಕ್ಕೆ ಶೀಘ್ರ ಚುನಾವಣೆ ನಡೆಸಲು ಬಿಗಿ ಪಟ್ಟು: ಪರಿಷತ್‌ನಲ್ಲಿ ಬಿಜೆಪಿ ಸಭಾತ್ಯಾಗ

ಬೆಂಗಳೂರು,ಜು. 10: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಶೀಘ್ರ ಚುನಾವಣೆ ನಡೆಸಿ ಸದನದಲ್ಲಿ ಸರಕಾರ ನೀಡಿದ್ದ ಭರವಸೆಯನ್ನು ಈಡೇರಿಸಿ ಎಂದು ಪ್ರತಿಪಕ್ಷ ಬಿಜೆಪಿ ಬಿಗಿ ಪಟ್ಟು ಹಿಡಿದು, ಚುನಾವಣೆಗೆ ಮೇಲಿಂದ ಮೇಲೆ ಆಗ್ರಹಿಸಿದ ಹಿನ್ನೆಲೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ನಡೆದ ಮಾತಿನ ಚಕಮಕಿ ಗದ್ದಲ-ಕೋಲಾಹಲಕ್ಕೆ ಕಾರಣವಾಯಿತು.

ಪ್ರತಿಪಕ್ಷಗಳ ಸದಸ್ಯರ ಆಗ್ರಹಕ್ಕೆ ಉತ್ತರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಭೈರೇಗೌಡ, ಸದನದಲ್ಲಿ ನೀಡಿದ್ದ ಹೇಳಿಕೆಯಂತೆ ಈ ಅಧಿವೇಶನ ಮುಗಿಯವುದರೊಳಗೆ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಸುತ್ತೇವೆ. ಈಗಲೇ ನಡೆಸಿ ಎಂದು ಒತ್ತಡ ಹೇರುವುದು ಸರಿಯಲ್ಲ. ಈ ಹಿಂದೆ ತಿಪ್ಪಣ್ಣ ಒಂದು ತಿಂಗಳು 4 ದಿನ ಹಂಗಾಮಿ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು. ಶೀಘ್ರ ಚುನಾವಣೆ ನಡೆಸುತ್ತೇವೆ ಎಂದರು.

ಇದರಿಂದ ಆಕ್ರೋಶಗೊಂಡ ಬಿಜೆಪಿ ಸದಸ್ಯರು ಸರಕಾರದ ವಿರುದ್ಧ ಹರಿಹಾಯ್ದರು. ಮತ್ತೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು, ಸರಕಾರ ತನ್ನ ನಿಲುವಿಗೆ ಅಂಟಿಕೊಂಡಿದ್ದರಿಂದ ಬಿಜೆಪಿ ಸದಸ್ಯರು ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಸಭಾತ್ಯಾಗ ಮಾಡಿದರು.

ಈ ಹಂತದಲ್ಲಿ ಕೆಲವು ಬಿಜೆಪಿ ಸದಸ್ಯರು ಮಾತನಾಡಲು ಮುಂದಾದರು. ಆಗ ಸಭಾಪತಿಗಳು ನಿಮ್ಮ ಪಕ್ಷ ಸದನದಿಂದ ಸಭಾತ್ಯಾಗ ಮಾಡಿದೆ. ಯಾರೂ ಮಾತನಾಡುವ ಆಗಿಲ್ಲ, ಹೊರ ನಡೆಯಿರಿ ಎಂದು ಸೂಚಿಸಿದರು. ಇದಕ್ಕೂ ಮುನ್ನ ಬಿಜೆಪಿ ಆಯನೂರು ಮಂಜುನಾಥ್ ಪ್ರಸ್ತಾಪಿಸಿದ ವಿಷಯಕ್ಕೆ ಆರಂಭಿಕವಾಗಿ ಮಾತನಾಡಲು ಸಭಾಪತಿ ಬಸವರಾಜಹೊರಟ್ಟಿ ಅನುವು ಮಾಡಿಕೊಟ್ಟರು. ಆಗ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಆಕ್ಷೇಪಿಸಿ ಯಾವ ರೂಪದಲ್ಲಿ ಚರ್ಚೆಗೆ ಅವಕಾಶ ನೀಡಿದ್ದೀರಿ. ನೋಟಿಸ್ ನೀಡದೆ ಚರ್ಚೆಗೆ ಅವಕಾಶ ನೀಡಬೇಡಿ ಎಂದು ಸಭಾಪತಿಗಳಿಗೆ ಮನವಿ ಮಾಡಿದರು.

ರೇವಣ್ಣ ಆಗ್ರಹಕ್ಕೆ ಆಡಳಿತ ಪಕ್ಷದ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಟಿ.ಎ. ಶರವಣ, ಭೋಜರಾಜು ಮತ್ತಿತರರು ಬೆಂಬಲ ಸೂಚಿಸಿದರು. ಆಗ ಪ್ರತಿಪಕ್ಷಗಳ ಸದಸ್ಯರಾದ ರಘುನಾಥರಾವ್ ಮಲ್ಕಾಪುರೆ ಸೇರಿದಂತೆ ಹಲವು ಸದಸ್ಯರು ಆಕ್ಷೇಪಿಸಿದರು. ಈ ಹಂತದಲ್ಲಿ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಯಾವುದೇ ನೋಟಿಸ್ ನೀಡಿಲ್ಲ. ಮಹತ್ವದ ವಿಷಯ ಪ್ರಸ್ತಾಪ ಮಾಡಬೇಕು ಎಂದರು, ಹೀಗಾಗಿ ಅವಕಾಶ ಮಾಡಿಕೊಟ್ಟಿದ್ದೇನೆ ಎಂದು ಹೇಳಿದರು.

ಮತ್ತೆ ರೇವಣ್ಣ, ನೋಟಿಸ್ ನೀಡದೆ ಮಾತನಾಡಲು ಅವಕಾಶ ನೀಡಬೇಡಿ ಸಂಪ್ರದಾಯ ಮುರಿಯುವುದು ಬೇಡ ಎಂದು ಮತ್ತೊಮ್ಮೆ ಮನವಿ ಮಾಡಿದರು. ಇದಕ್ಕೆ ದ್ವನಿಗೂಡಿಸಿದ ಕಾನೂನು ಸಚಿವ ಕೃಷ್ಣಭೈರೇಗೌಡ ಸದಸ್ಯರು ಮತ್ತು ಇತರ ಸಚಿವರು ಸದಸ್ಯರಿಗೆ ಯಾವ ರೂಪದಲ್ಲಿ ಮಾತನಾಡಲು ಅವಕಾಶ ನೀಡಿದ್ದೀರಿ ಎಂಬುದಷ್ಟೇ ಹೊರತು ಹಕ್ಕನ್ನು ಮೊಟಕುಗೊಳಿಸುವ ಉದ್ದೇಶವಲ್ಲ. ಎಲ್ಲರಿಗೂ ಒಂದೇ ನಿಯಮ, ಅದನ್ನು ಎಲ್ಲರೂ ಪಾಲಿಸಬೇಕು ಎಂದರು.

ಬಿಜೆಪಿಯ ಉಪನಾಯಕ ಕೆ.ಬಿ. ಶಾಣಪ್ಪ ಆಕ್ಷೇಪಿಸಲು ಮುಂದಾಗುತ್ತಿದ್ದಂತೆ, ಸಭಾಪತಿಗಳು ಸಚಿವರು ಮಾತನಾಡುತ್ತಿದ್ದಾರೆ. ಅವರು ಮಾತನಾಡಲು ಬಿಡಿ ಎಂದರು. ಮಾತು ಮುಂದುವರೆಸಿದ ಕೃಷ್ಣಭೈರೇಗೌಡ, ಪ್ರತಿಯೊಂದಕ್ಕೂ ಪದ್ಧತಿ ಇದೆ. ಕೆಲವು ಸಂದರ್ಭದಲ್ಲಿ ವಿನಾಯಿತಿ ನೀಡಿದ್ದು ಉಂಟು. ಸದನದಲ್ಲಿ ನಾವೇ ಮಾಡಿಕೊಂಡಿರುವ ನಿಯಮಗಳನ್ನು ಮುರಿಯುವುದು ಸರಿಯಲ್ಲ. ಸಭಾಪತಿಗಳ ಸಹೃದಯವನ್ನು ಬಿಜೆಪಿ ದುರುಪಯೋಗಪಡಿಸಿಕೊಳ್ಳುತ್ತಿದೆ. ಇದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಈ ಹಂತದಲ್ಲಿ ಸಭಾಪತಿಗಳು ಸರಿಯೋ ತಪ್ಪೊ ಬಿಜೆಪಿಯ ಆಯನೂರು ಮಂಜುನಾಥ್ ಅವರಿಗೆ ಮಾತನಾಡಲು ಅವಕಾಶ ನೀಡಿದ್ದೇನೆ. ಅವರು ಈ ಬಗ್ಗೆ ಪ್ರಸ್ತಾಪಿಸಲಿ, ಆ ನಂತರ ತಾವು ತಮ್ಮ ನಿರ್ಧಾರ ಪ್ರಕಟಿಸುತ್ತೇವೆ ಎಂದರು. ಅದರಂತೆ ಮಂಜುನಾಥ್, ಆಡಳಿತ ಪಕ್ಷದ ಸದಸ್ಯರು ತಾವು ಮಾತನಾಡುವ ಮುನ್ನವೇ ಆತಂಕಕ್ಕೊಳಗಾಗಿದ್ದಾರೆ ಎಂದು ಹೇಳಿದ್ದು ಮತ್ತೆ ಮಾತಿನ ಚಕಮಕಿಗೆ ಎಡೆ ಮಾಡಿಕೊಟ್ಟಿತು.

ಮತ್ತೆ ಮಾತು ಮುಂದುವರೆಸಿದ ಆಯನೂರು ಅವರು ಸಭಾಪತಿ ಸ್ಥಾನಕ್ಕೆ ಚುನಾವಣೆ ಮಾಡುತ್ತೇವೆ ಎಂದು ಸರಕಾರ ಭರವಸೆ ನೀಡಿ, ಈಗ ಅದನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಸದನದಲ್ಲಿ ಮಾಹಿತಿ ನೀಡಿ ಹಿಂದೆ ಸರಿಯುವುದು ಹಕ್ಕು ಚ್ಯುತಿಯಾಗಲಿದೆ. ನಾವು ಹಕ್ಕುಚ್ಯುತಿ ಮಂಡಿಸಬೇಕಾಗುತ್ತದೆ ಎಂದರು.

ಆಗ ಸಚಿವ ಕೃಷ್ಣಭೈರೇಗೌಡ, ನಾವೇನು ಭರವಸೆಯಿಂದ ಹಿಂದೆ ಸರಿಯುತ್ತಿಲ್ಲ. ಹಕ್ಕುಚ್ಯುತಿಯಾಗಿದ್ದರೆ ಮಂಡಿಸುವ ಅವಕಾಶವೂ ನಿಮಗಿದೆ. ಈ ಅಧಿವೇಶನ ಮುಗಿಯುವುದರೊಳಗೆ ಚುನಾವಣೆ ನಡೆಸುತ್ತೇವೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಈ ಹಂತದಲ್ಲಿ ಬಿಜೆಪಿ ಸದಸ್ಯರು ಸದನದಲ್ಲಿ ಸ್ಪಷ್ಟ ಬಹುಮತ ಇದ್ದರೂ ಚುನಾವಣೆ ನಡೆಸಲು ಏಕೆ ಹಿಂಜರಿಯುತ್ತಿದ್ದೀರಿ. ಶೀಘ್ರ ದಿನಾಂಕ ನಿಗದಿ ಮಾಡಿ ಎಂದು ಬಿಗಿಪಟ್ಟು ಮುಂದುವರೆಸಿದರು. ಈ ನಡುವೆಯೇ ಸಭಾಪತಿಗಳು ಗಮನ ಸೆಳೆಯುವ ಸೂಚನೆಯನ್ನು ಕೈಗೆತ್ತಿಕೊಳ್ಳುವಂತೆ ಬಿಜೆಪಿಯ ತೇಜಸ್ವಿನಿ ಅವರನ್ನು ಆಹ್ವಾನಿಸಿದರು. ಆಗ ಮತ್ತೆ ಬಿಜೆಪಿ ಸದಸ್ಯರು ಆಕ್ಷೇಪಿಸಿದರು. ಇದರಿಂದ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ಗದ್ದಲ ಉಂಟಾಯಿತು. ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ 'ಚುನಾವಣೆ ನಡೆಸಿ, ಅಂತಹ ತಾಕತ್ತು, ಗತ್ತು ಸರಕಾರಕ್ಕಿದೆಯೇ ಎಂದರು.

ಆಗ ಸಚಿವ ಕೃಷ್ಣಭೈರೇಗೌಡ, ತಾಕತ್ತು ನಿಮಗಿದ್ದರೆ ನಿಯಮಾವಳಿಗಳ ಪುಸ್ತಕಗಳನ್ನು ಓದಿ ಅರ್ಥ ಮಾಡಿಕೊಳ್ಳಿ ಎಂದು ತಿರುಗೇಟು ನೀಡಿದರು. ಈ ಹಂತದಲ್ಲಿ ಮಧ್ಯ ಪ್ರವೇಶಿಸಿದ ಸಭಾಪತಿಗಳು, ಪೂಜಾರಿ ಅವರೇ ವಿತಂಡ ವಾದ ಯಾಕೆ ಮಾಡುತ್ತೀರಿ. ನೋಟಿಸ್ ನೀಡದೆ ನೀವು ಮಾತನಾಡುತ್ತಿರುವುದು ತಪ್ಪು. ಸೌಜನ್ಯಕ್ಕಾಗಿ ನೀಡಿದ್ದ ಕ್ರಮವನ್ನು ಉಲ್ಲಂಘನೆ ಮಾಡಿಕೊಳ್ಳುವುದು ಸರಿಯಲ್ಲ ಎಂದು ಹೇಳಿದರು. ಆಗಲೂ ಬಿಜೆಪಿ ಸದಸ್ಯರು ಸಭಾಪತಿಗಳ ಮಾತು ಕೇಳುವ ಸ್ಥಿತಿಯಲ್ಲಿರದೇ ಚುನಾವಣೆ ನಡೆಸಿ ಎಂದು ತಮ್ಮ ಹಠಕ್ಕೆ ಜೋತು ಬಿದ್ದರು.

ಈ ಹಂತದಲ್ಲಿ ಬಿಜೆಪಿ ಸದಸ್ಯರು ಒಮ್ಮೆಲೆ ಎದ್ದು ನಿಂತು ಮಾತನಾಡಲು ಮುಂದಾಗುತ್ತಿದ್ದಂತೆಯೇ ಸಭಾಪತಿಗಳು ಒಬ್ಬರು ಮಾತನಾಡಿದರಷ್ಟೇ ಕಡತಕ್ಕೆ ಸೇರಿಸಿ ಎಂದು ಸೂಚನೆ ನೀಡಿದರು. ಈ ಹಂತದಲ್ಲಿ ಮತ್ತೆ ಮಾತಿನ ಚಕಮಕಿ ಗದ್ದಲ ಕೋಲಾಹಲ ನಡೆದು ಬಿಜೆಪಿ ಸದಸ್ಯರು ಶೀಘ್ರ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಸದನದಿಂದ ಹೊರ ನಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X