ಅಪರಾಧ ಕಾನೂನು ತಿದ್ದುಪಡಿ ಮಸೂದೆ ಮುಂಗಾರು ಅಧಿವೇಶನದಲ್ಲಿ ಮಂಡನೆ

ಹೊಸದಿಲ್ಲಿ,ಜು.10: 12 ವರ್ಷಕ್ಕಿಂತ ಕಡಿಮೆ ಪ್ರಾಯದ ಬಾಲಕಿಯರ ಅತ್ಯಾಚಾರಿಗಳಿಗೆ ಮರಣ ದಂಡನೆ ಸೇರಿದಂತೆ ಕಠಿಣ ಶಿಕ್ಷೆಗಳನ್ನು ವಿಧಿಸಲು ಅವಕಾಶ ಕಲ್ಪಿಸುವ ಕ್ರಿಮಿನಲ್ ಕಾನೂನು(ತಿದ್ದುಪಡಿ) ಮಸೂದೆ,2018ನ್ನು ಜು.18ರಿಂದ ಆರಂಭಗೊಳ್ಳುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾಗುವುದು.
ಮಸೂದೆಯು ಸಂಸತ್ತಿನಲ್ಲಿ ಅಂಗೀಕಾರಗೊಂಡ ಬಳಿಕ ಎ.21ರಂದು ಘೋಷಿಸಲಾಗಿದ್ದ ಕ್ರಿಮಿನಲ್ ಕಾನೂನು(ತಿದ್ದುಪಡಿ) ಅಧ್ಯಾದೇಶವು ರದ್ದುಗೊಳ್ಳಲಿದೆ.
ಜಮ್ಮು-ಕಾಶ್ಮೀರದ ಕಥುವಾದಲ್ಲಿ ಎಂಟರ ಹರೆಯದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಹಾಗೂ ಉತ್ತರ ಪ್ರದೇಶದ ಉನ್ನಾವೊದಲ್ಲಿ ಮಹಿಳೆಯೋರ್ವಳ ಅತ್ಯಾಚಾರ ಪ್ರಕರಣಗಳ ಬಳಿಕ ಸಾರ್ವಜನಿಕ ಆಕ್ರೋಶಗಳು ಭುಗಿಲೆದ್ದ ನಂತರ ಈ ಅಧ್ಯಾದೇಶವನ್ನು ಹೊರಡಿಸಲಾಗಿತ್ತು.
Next Story





