ಉಪ್ಪಳದಲ್ಲಿ ನಡೆದ ಭೀಕರ ಅಪಘಾತದ ಗಾಯಾಳು ಮಗು ಮೃತ್ಯು

ಮಂಗಳೂರು, ಜು.10: ರಾಷ್ಟ್ರೀಯ ಹೆದ್ದಾರಿ 66ರ ಉಪ್ಪಳ ಸಮೀಪದ ನಯಬಝಾರ್‌ನಲ್ಲಿ ಸೋಮವಾರ ಬೆಳಗ್ಗೆ ಲಾರಿ ಮತ್ತು ತೂಫಾನ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟು, 12 ಮಂದಿ ಗಾಯಗೊಂಡವರನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಈ ಪೈಕಿ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದೆ.
ಮೃತ ಮಗುವನ್ನು ಅಪಘಾತದಲ್ಲಿ ಮೃತಪಟ್ಟಿದ್ದ ನಸೀಮಾ ಎಂಬವರ ಪುತ್ರಿ ಫಾತಿಮಾ (1 ವರ್ಷ 6 ತಿಂಗಳು) ಎಂದು ಗುರುತಿಸಲಾಗಿದೆ.
ಗಾಯಗೊಂಡಿದ್ದ ಉಳಿದ 11 ಮಕ್ಕಳನ್ನು ವಾರ್ಡ್‌ಗೆ ದಾಖಲಿಸಲಾಗಿದೆ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರ ಮೂಲ ತಿಳಿಸಿವೆ. ಸಚಿವ ಯು.ಟಿ. ಖಾದರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
Next Story





