ಜು.13: ಕನ್ನಡ ಸಾಧಕ ಪ್ರತಿಭಾ ಪುರಸ್ಕಾರ
ಮಂಗಳೂರು, ಜು.11: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಜು.13ರಂದು ಬೆಳಗ್ಗೆ 10:30ಕ್ಕೆ ದ.ಕ. ಜಿಪಂನ 'ನೇತ್ರಾವತಿ ಸಭಾಂಗಣ'ದಲ್ಲಿ ಕನ್ನಡ ಭಾಷಾ ಕಲಿಕೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಕನ್ನಡ ಸಾಧಕ 'ಪ್ರತಿಭಾ ಪುರಸ್ಕಾರ' ಪ್ರದಾನ ಕಾರ್ಯಕ್ರಮ ನಡೆಯಲಿದೆ.
2017-18ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸೆಸೆಲ್ಸಿ ಕನ್ನಡ ಭಾಷಾ ಮಾಧ್ಯಮದಲ್ಲಿ 125ರಲ್ಲಿ 125 ಆಂಕಗಳಿಸಿರುವ ವಿದ್ಯಾರ್ಥಿಗಳಿಗೆ, ಶೇ.100 ಫಲಿತಾಂಶ ಪಡೆದ ಕನ್ನಡ ಶಾಲೆಗಳಿಗೆೆ, ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ ಶೇ.100 ಅಂಕ ಗಳಿಸಿದ ಇದ್ಯಾರ್ಥಿಗಳಿಗೆ 'ಕನ್ನಡ ಸಾಧಕ ಪ್ರತಿಭಾ ಪುರಸ್ಕಾರ' ನೀಡಿ ಗೌರವಿಸಲಾಗುವುದು.
ಸುಮಾರು 800 ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಸ್ವೀಕರಿಸಲಿದ್ದಾರೆ. 11 ವಿದ್ಯಾಸಂಸ್ಥೆಗಳನ್ನು ಈ ಸಂದರ್ಭ ಅಭಿನಂದಿಸಲಾಗುತ್ತದೆ. ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರದೊಂದಿಗೆ ಕನ್ನಡ ರತ್ನಕೋಶ (ಕನ್ನಡ ನಿಘಂಟು) ವನ್ನು ಉಡುಗೊರೆಯಾಗಿ ನೀಡುವುದಾಗಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





