ಉ.ಪ್ರದೇಶ: ರಸ್ತೆ ಅಪಘಾತಕ್ಕೆ 8 ಬಲಿ

ಲಕ್ನೊ, ಜು.11: ಲಕ್ನೊ- ಆಗ್ರಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟಿದ್ದು ಮೂವರು ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಉತ್ತರಪ್ರದೇಶದ ಯಾತ್ರಾಸ್ಥಳವಾದ ನೈಮಿಸಾರಣ್ಯಂನಲ್ಲಿರುವ ವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸಾಗುತ್ತಿದ್ದ ರಾಜಸ್ತಾನದ ಅಲ್ವಾರ್ ಜಿಲ್ಲೆಯ ನಿವಾಸಿಗಳಿದ್ದ ವಾಹನ ಬುಧವಾರ ಬೆಳಿಗ್ಗಿನ ಜಾವ ಲಾರಿಯೊಂದಕ್ಕೆ ಢಿಕ್ಕಿ ಹೊಡೆದಿದೆ. ಮೃತಪಟ್ಟವರ ವಿವರ ಲಭ್ಯವಾಗಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಎಸ್ಪಿ ಕೇಶವಚಂದ್ರ ಗೋಸ್ವಾಮಿ ತಿಳಿಸಿದ್ದಾರೆ.
Next Story





