ಶಿಕ್ಷಕರ ಭಡ್ತಿ: ತಾತ್ಕಾಲಿಕ ಅರ್ಹತಾ ಪಟ್ಟಿ ಪ್ರಕಟ
ಉಡುಪಿ, ಜು.11: ಸರಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಂದ ಪ್ರೌಢ ಶಾಲಾ ಸಹ ಶಿಕ್ಷಕ ಗ್ರೇಡ್-2 ವೃಂದಕ್ಕೆ ಭಡ್ತಿ ನೀಡುವ ಕುರಿತು 2018ರ ಜ.1ರಲ್ಲಿರುವಂತೆ ವಿಷಯವಾರು ಶಿಕ್ಷಕರ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ಸಿದ್ಧಪಡಿಸಿ ಪ್ರಕಟಿಸಲಾಗಿದೆ. ಈ ಪಟ್ಟಿ ಇಲಾಖಾ ವೆಬ್‌ಸೈಟ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಲಭ್ಯವಿದೆ.
ಈ ಪಟ್ಟಿಗೆ ಸಂಬಂಧಿಸಿ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಬಾಧಿತ ಶಿಕ್ಷಕರು ಸೂಕ್ತ ದಾಖಲೆಗಳೊಂದಿಗೆ ಲಿಖಿತ ಆಕ್ಷೇಪಣೆಯನ್ನು ಜು.20ರೊಳಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಸೂಚಿಸಲಾಗಿದೆ. ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





