ಮೈಸೂರು: ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಕಾರು; ಮೂವರಿಗೆ ಗಾಯ
ಮೈಸೂರು,ಜು.11: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮೈಸೂರಿನ ಮೇಗಳಾಪುರ ಗ್ರಾಮದ ಬಳಿ ನಡೆದಿದೆ.
ಮೈಸೂರು ಟಿ. ನರಸೀಪುರ ರಸ್ತೆಯಲ್ಲಿರುವ ಮೇಗಳಾಪುರ ಗ್ರಾಮದ ಬಳಿ ಬರುತ್ತಿದ್ದಂತೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಗುದ್ದಿದೆ. ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದು, ಮತ್ತೋರ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ಸಂಬಂಧ ಮೇಗಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story