Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ವಿವಿ: ಅಧಿಕಾರಿಗಳ ವಿರುದ್ಧ...

ಮೈಸೂರು ವಿವಿ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಂಶೋಧಕರ ಸಂಘದ ವತಿಯಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ11 July 2018 11:04 PM IST
share
ಮೈಸೂರು ವಿವಿ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಂಶೋಧಕರ ಸಂಘದ ವತಿಯಿಂದ ಧರಣಿ

ಮೈಸೂರು,ಜು.11: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕಾನೂನು ಬಾಹಿರವಾಗಿ 124 ಬೋಧಕೇತರ ಸಿಬ್ಬಂದಿಗಳನ್ನು ನೇಮಕ ಮಾಡಿದ್ದಾರೆನ್ನಲಾದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಶಿಸ್ತುಕ್ರಮ ಜರುಗಿಸುವಂತೆ ಒತ್ತಾಯಿಸಿ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.

ವಿಶ್ವವಿದ್ಯಾನಿಲಯದ ಎದುರಿರುವ ಅಂಬೇಡ್ಕರ್ ಪ್ರತಿಮೆ ಬಳಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ,  ಮೈಸೂರು ವಿಶ್ವವಿದ್ಯಾನಿಲಯದ ಕಾನೂನು ಕಾಯ್ದೆ 2000ನ್ನು ಉಲ್ಲಂಘಿಸಿ 124 ಬೋಧಕೇತರ ಸಿಬ್ಬಂದಿಯನ್ನು ಅಕ್ರಮವಾಗಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿದ್ದ ಪ್ರೊ.ಕೆ.ಎಸ್.ರಂಗಪ್ಪ, ಆಡಳಿತಾಂಗ ಕುಲಸಚಿವರಾಗಿದ್ದ ಪ್ರೊ.ರಾಜಣ್ಣ ಮತ್ತು ಉಪಕುಲಸಚಿವರಾಗಿದ್ದ ಶ್ರೀಕಂಠ ಅವರು ನೇಮಕಾತಿ ಮಾಡಿದ್ದಾರೆ. ಈ ನೇಮಕಾತಿಯಲ್ಲಿ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಅನುಮತಿ ಪಡೆಯದೆ, ಮೀಸಲಾತಿಯನ್ನು ಅನುಸರಿಸದೆ, ಯಾವುದೇ ಅಧಿಸೂಚನೆಯನ್ನು ಹೊರಡಿಸದೆ, ಪತ್ರಿಕಾ ಜಾಹೀರಾತನ್ನು ನೀಡದೇ ತಮಗೆ ಮನಬಂದಂತೆ ಹುದ್ದೆ ಭರ್ತಿ ಮಾಡಿದ್ದಾರೆ. ಅನೇಕ ಕಡೆ ಹುದ್ದೆ ಸೃಷ್ಟಿಸಿದ್ದಾರೆ. ಅನುಪಯುಕ್ತ ಹುದ್ದೆಗಳನ್ನು ಸೃಷ್ಟಿಸಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಿದರು.

ಕರ್ನಾಟಕ ರಾಜ್ಯ ಹೈಕೋರ್ಟ್ ಪ್ರೊ.ರಾಜಣ್ಣ ಅವರನ್ನು ಕುಲಸಚಿವರನ್ನಾಗಿ ನೇಮಕ ಮಾಡಬಾರದು ಎಂದು ತೀರ್ಪು ನೀಡಿದೆ. ಆದರೂ ಸರ್ಕಾರ ಇವರನ್ನು ನೇಮಕ ಮಾಡಿ ನ್ಯಾಯಾಂಗ ನಿಂದನೆ ಎಸಗಿದೆ. ಸಾರ್ವಜನಿಕ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಭ್ರಷ್ಟಾಚಾರ ನಡೆಸುತ್ತಿರುವವರನ್ನು ರಕ್ಷಿಸುತ್ತಿರುವ ವಿವಿಯ ಕ್ರಮ ಸರಿಯಲ್ಲ. ಕೂಡಲೇ ಇವರನ್ನು ಕ್ರಿಮಿನಲ್ ಮೊಕದ್ದಮೆಗೊಳಪಡಿಸಿ ಅಕ್ರಮವಾಗಿ ನೇಮಕವಾದವರನ್ನು ಹುದ್ದೆಯಿಂದ ವಜಾಗೊಳಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಅಧ್ಯಕ್ಷ ಮಹದೇವಸ್ವಾಮಿ, ಗೌರವಾಧ್ಯಕ್ಷ ಗೋಪಾಲ್ ಎಸ್, ಪ್ರಧಾನ ಕಾರ್ಯದರ್ಶಿ ಮಹೇಶ್ ಸೋಸ್ಲೆ, ಕಾರ್ಯದರ್ಶಿ ನಾಗೇಂದ್ರ, ರಘು, ಪ್ರಕಾಶ್, ವಸಂತ ಕುಮಾರ್ ದೊಡ್ಡಮನಿ, ಸೌಮ್ಯ, ಮನೋಜ್ ಕುಮಾರ್, ಅಕ್ಷತಾ, ದಿವಾಕರ್ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X