ಎಸೆಸೆಲ್ಸಿ, ಪಿಯುಸಿ; ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಮಂಗಳೂರು, ಜು.12: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
2017-18ನೇ ಸಾಲಿನಲ್ಲಿ ಕರ್ನಾಟಕ ಪ್ರೌಢಶಿಕ್ಷಣಾ ಪರೀಕ್ಷಾ ಮಂಡಳಿ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸಿರುವ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕ್ರಮವಾಗಿ ಶೇ.95 ಮತ್ತು ಶೇ.90ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಟಾಪ್ 250 ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹಧನವನ್ನು ನೀಡುವ ಯೋಜನೆ ಇದಾಗಿದ್ದು, 10 ಸಾವಿರ ಮತ್ತು 20 ಸಾವಿರ ರೂ. ಆರ್ಥಿಕ ನೆರವು ದೊರೆಯಲಿದೆ.
ಆನ್‌ಲೈನ್ ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್ ಸೈಟ್:www.gokdom.kar.nic.in ನಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆ.5 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಮಾಜ ಸೇವಾ ಘಟಕ, ಜಮಾಅತೆ ಇಸ್ಲಾಮೀ ಹಿಂದ್, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಬಂದರ್, ಮಂಗಳೂರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.







