Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಲಿಂಗ ಕಾಮ ‘ಅಪರಾಧ ಹಣೆಪಟ್ಟಿ’ಯಿಂದ...

ಸಲಿಂಗ ಕಾಮ ‘ಅಪರಾಧ ಹಣೆಪಟ್ಟಿ’ಯಿಂದ ಕಳಚಿಕೊಂಡರೆ ಕಳಂಕದಿಂದಲೂ ಮುಕ್ತ: ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ12 July 2018 8:05 PM IST
share
ಸಲಿಂಗ ಕಾಮ ‘ಅಪರಾಧ ಹಣೆಪಟ್ಟಿ’ಯಿಂದ ಕಳಚಿಕೊಂಡರೆ ಕಳಂಕದಿಂದಲೂ ಮುಕ್ತ: ಸುಪ್ರೀಂ

  ಹೊಸದಿಲ್ಲಿ,ಜು.12: ಸಲಿಂಗ ಕಾಮಕ್ಕೆ ಅಪರಾಧ ಹಣೆಪಟ್ಟಿ ಅಂಟಿಕೊಂಡಿರುವದರಿಂದ ಸಲಿಂಗ ಕಾಮಿಗಳು ಮತ್ತು ಲೈಂಗಿಕ ಅಲ್ಪಸಂಖ್ಯಾತರ(ಎಲ್‌ಜಿಬಿಟಿ) ಸಮುದಾಯವು ಕೀಳರಿಮೆಯನ್ನು ಅನುಭವಿಸುತ್ತಿದೆ ಮತ್ತು ಈ ಹಣೆಪಟ್ಟಿಯು ಕಳಚಿಕೊಂಡರೆ ಈ ಕಳಂಕವು ಇರುವುದಿಲ್ಲ ಮತ್ತು ಅದು ತಾರತಮ್ಯದಿಂದ ಮುಕ್ತವಾಗುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಹೇಳಿದರು.

ಭಾರತದಲ್ಲಿ ಸಲಿಂಗ ಕಾಮದ ಮೇಲಿನ 150 ವರ್ಷಗಳಷ್ಟು ಹಳೆಯದಾದ ನಿಷೇಧವು ಮುಂದುವರಿಯಬೇಕೇ ಎನ್ನುವುದನ್ನು ನಿರ್ಧರಿಸಲು ನಡೆಯುತ್ತಿರುವ ವಿಚಾರಣೆಯ ಮೂರನೇ ದಿನವಾದ ಗುರುವಾರ ನ್ಯಾಯಾಲಯವು ನಿಸರ್ಗದಲ್ಲಿಯ ಸಲಿಂಗಕಾಮವನ್ನು ಉದಾಹರಿಸಿತು. ಈ ನಿಷೇಧವು ಶೀಘ್ರ ತೆರವಾಗಬಹುದು ಎಂಬ ಸುಳಿವನ್ನು ಮು.ನ್ಯಾ.ಮಿಶ್ರಾ ಅವರು ಬುಧವಾರ ನೀಡಿದ್ದರು.

ಈ ಎಲ್ಲ ವರ್ಷಗಳಲ್ಲಿ ನಾವು ಭಾರತೀಯ ಸಮಾಜದಲ್ಲಿ ಸೃಷ್ಟಿಸಿರುವ ವಾತಾವರಣವು ಪರಸ್ಪರ ಒಪ್ಪಿಗೆಯ ಮೇರೆಗೆ ಸಲಿಂಗ ಕಾಮದಲ್ಲಿ ತೊಡಗುವ ಜನರ ವಿರುದ್ಧ ಆಳವಾಗಿ ಬೇರೂರಿರುವ ತಾರತಮ್ಯಕ್ಕೆ ಕಾರಣವಾಗಿದೆ ಮತ್ತು ಇದು ಅವರ ಮಾನಸಿಕ ಆರೋಗ್ಯದ ಮೇಲೂ ಪರಿಣಾಮವನ್ನು ಬೀರಿದೆ ಎಂದು ಕಲಂ 377ರ ಸಾಂವಿಧಾನಿಕ ಸಿಂಧುತ್ವನ್ನು ನಿರ್ಧರಿಸಲು ವಿಚಾರಣೆ ನಡೆಸುತ್ತಿರುವ ಮು.ನ್ಯಾ.ಮಿಶ್ರಾ ನೇತೃತ್ವದ ಪಂಚ ನ್ಯಾಯಾಧೀಶರ ಪೀಠವು ಹೇಳಿತು.

ತನಗಂಟಿಕೊಂಡಿರುವ ಕಳಂಕದಿಂದಾಗಿ ಎಲ್‌ಜಿಬಿಟಿ ಸಮುದಾಯವು ಮಾನಸಿಕ ಸಮಸ್ಯೆಗಳಿಂದ ನರಳುತ್ತಿದೆ. ಕೇವಲ ಕಲಂ 377ನ್ನು ರದ್ದುಗೊಳಿಸುವುದರಿಂದ ಉದ್ದೇಶವು ಈಡೇರುವುದಿಲ್ಲ ಎಂದು ಅರ್ಜಿದಾರರಲ್ಲೋರ್ವರ ಪರ ವಕೀಲ ಸಿ.ಯು.ಸಿಂಗ್ ಹೇಳಿದ ಬಳಿಕ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿತು.

ನಿಸರ್ಗದಲ್ಲಿ ಪ್ರಕೃತಿ ಮತ್ತು ವಿಕೃತಿ ಒಟ್ಟಾಗಿ ಅಸ್ತಿತ್ವದಲ್ಲಿವೆ ಮತ್ತು ಸಲಿಂಗ ಕಾಮದಲ್ಲಿ ತೊಡಗುವ ನೂರಾರು ಪ್ರಾಣಿಜಾತಿಗಳಿವೆ ಎಂದು ಹೇಳಿದ ನ್ಯಾ.ಇಂದು ಮಲೋತ್ರಾ ಅವರು,ವೈದ್ಯಕೀಯ ಸಮುದಾಯದಲ್ಲಿನ ಹಿಂಜರಿಕೆಯಿಂದಾಗಿ ಎಲ್‌ಜಿಬಿಟಿ ಸಮುದಾಯದ ವ್ಯಕ್ತಿಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆಯೂ ದೊರೆಯುತ್ತಿಲ್ಲ ಎಂದು ಬೆಟ್ಟು ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X