ಕಾರ್ಕಳ; ನಿಯಂತ್ರಣ ತಪ್ಪಿ ಬಸ್ ಪಲ್ಟಿ : 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಕಾರ್ಕಳ,ಜು.12: ಕಾರ್ಕಳದಿಂದ ಪಡುಬಿದ್ರಿ ಕಡೆ ಸಾಗುತ್ತಿದ್ದ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಉರುಳಿದ ಪರಿಣಾಮ ಬಸ್ಸಿನಲ್ಲಿದ್ದ 20 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ
ನಂದಳಿಕೆ ತಿರುವು ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್, ರಸ್ತೆ ಬದಿಯ ಮಣ್ಣಿನ ಗುಡ್ಡಕ್ಕೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಮಣಿಪಾಲ ಹಾಗೂ ಕಾರ್ಕಳ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯಲ್ಲಿ ಕಂಡಕ್ಟರ್ ರಾಜೇಶ್ ಹಾಗೂ ಓರ್ವ ಪ್ರಯಾಣಿಕ ಗಂಭೀರ ಗಾಯಗೊಂಡಿದ್ದಾರೆ. ಚಾಲಕ ಚೇತನ್, ಪ್ರಯಾಣಿಕರಾದ ಕಾರ್ಕಳ ಸಾಣೂರಿನ ಮುಕ್ತ ಪ್ರಭು, ಬಜಗೋಳಿ ನಿವಾಸಿ ಸೂರಾಜ್ ಹಾಗೂ ಸೂಡ ನಿವಾಸಿ ದೀಕ್ಷಾ, ಭಾಸ್ಕರ್, ಆರತಿ ಹಾಗೂ ನಾಗೇಶ್ ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆಯಲ್ಲಿ ಸುಮಾರು 20 ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





