ಅತ್ತಾವರ: ವಾರಸುದಾರರಿಲ್ಲದ ಶವ ಪತ್ತೆ
ಮಂಗಳೂರು, ಜು.12: ಅತ್ತಾವರ ಕಟ್ಟೆಯ ಬಳಿ ಜು.10ರಂದು ಸಂಜೆ ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಗಂಡಸು ಅನಾರೋಗ್ಯದಿಂದ ಮತಿ ತಪ್ಪಿಬಿದ್ದಿರುವುದು ಪತ್ತೆಯಾಗಿದ್ದು, ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ವೈದ್ಯರು ಪರೀಕ್ಷಿಸಿದಾಗ ಸಾವನ್ನಪ್ಪಿರುವುದು ಗೊತ್ತಾಗಿದೆ.
ಮೃತ ವ್ಯಕ್ತಿ 5.2 ಅಡಿ ಎತ್ತರ, ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕಪ್ಪು ಬಣ್ಣದ ಉದ್ದ ತೋಳಿನ ಶರ್ಟ್, ತಿಳಿ ಖಾಕಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.
ಮೃತ ದೇಹವನ್ನು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ವಾರಸುದಾರರು ಇದ್ದಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು.
Next Story