ವೇಶ್ಯಾವಾಟಿಕೆ ದಂಧೆ: ಇಬ್ಬರ ಬಂಧನ

ಬೆಂಗಳೂರು, ಜು.13: ಇಲ್ಲಿನ ಕಲ್ಯಾಣನಗರದ ಪೈಪ್‌ಲೇನ್ ರಸ್ತೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಲ್ಯಾಣ ನಗರದ ರಮ್ಯಾ(22), ನವೀನ್(23) ಬಂಧಿತ ಆರೋಪಿಗಳಾಗಿದ್ದು, ಇವರು ನಡೆಸುತ್ತಿದ್ದ ದಂಧೆಯಲ್ಲಿದ್ದ ಯುವತಿಯೊಬ್ಬಳನ್ನು ರಕ್ಷಿಸಿ 2 ಸಾವಿರ ರೂ.ನಗದು, 2 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಜಾಟ: ಗಂಗಾ ನಗರದ ಲಾಡ್ಜ್‌ವೊಂದರಲ್ಲಿ ಅಂದರ್‌ಬಾಹರ್ ಜೂಜಾಟವಾಡುತ್ತಿದ್ದ 8 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 85,200 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರ್‌ಟಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





