Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿವಿಗಳಲ್ಲಿ ಏಕರೂಪ ಪಠ್ಯಕ್ರಮ ಜಾರಿ ನಮ್ಮ...

ವಿವಿಗಳಲ್ಲಿ ಏಕರೂಪ ಪಠ್ಯಕ್ರಮ ಜಾರಿ ನಮ್ಮ ಮುಂದಿಲ್ಲ: ಸಚಿವ ಜಿ.ಟಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ13 July 2018 8:07 PM IST
share

ಬೆಂಗಳೂರು, ಜು.13: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಪ್ರಸ್ತುತ ಏಕರೂಪ ಪಠ್ಯಕ್ರಮವನ್ನು ಜಾರಿಗೆ ತರುವ ಪ್ರಸ್ತಾವನೆ ಸರಕಾರದ ಪರಿಶೀಲನೆಯಲ್ಲಿ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನ ಸದಸ್ಯ ಆರ್.ಪ್ರಸನ್ನಕುಮಾರ್ ಪರಿಷತ್ತಿನಲ್ಲಿಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವರು, ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ ಮಾರ್ಗಸೂಚಿಗಳ ಅನುಸಾರ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ 2000 ರಲ್ಲಿ ಕಲ್ಪಿಸಿದ ಅವಕಾಶಗಳನ್ವಯ ಪ್ರತಿಯೊಂದು ವಿಷಯಕ್ಕೂ ಒಂದು ಅಧ್ಯಯನ ಮಂಡಳಿಯನ್ನು ರಚಿಸಿ ಪಠ್ಯಕ್ರಮಗಳ ನಿಯಮಾವಳಿಯನ್ನು ಸಿದ್ಧಪಡಿಸಲಾಗುತ್ತದೆ. ಸದರಿ ನಿಯಮಾವಳಿಗೆ ವಿಶ್ವವಿದ್ಯಾಲಯಗಳ ವಿದ್ಯಾವಿಷಯಕ ಪರಿಷತ್ತುಗಳ ಅಂಗೀಕಾರ ಪಡೆದು ಅನಂತರ ರಾಜ್ಯಪಾಲರ ಅನುಮೋದನೆಯೊಂದಿಗೆ ಪಠ್ಯಕ್ರಮಗಳನ್ನು ಅಳವಡಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಮಾರ್ಗಸೂಚಿಗಳ ಅನುಸಾರ ಆಯಾ ವಿಶ್ವವಿದ್ಯಾಲಯಗಳ ವಿದ್ಯಾವಿಷಯಕ ಪರಿಷತ್ತುಗಳಲ್ಲಿ ನಿಯಮ ರಚಿಸಿ, ರಾಜ್ಯಪಾಲರ ಅನುಮೋದನೆ ಪಡೆದ ಪಿಎಚ್‌ಡಿ ನಿಯಮಗಳನುಸಾರ ವಿವಿಧ ವಿಷಯಗಳಲ್ಲಿನ ಪಿಎಚ್‌ಡಿ ಪದವಿಗೆ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ.

ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ ಮಾನ್ಯವಿರುವ ವಿಶ್ವವಿದ್ಯಾಲಯಗಳಿಂದ ಪಡೆದ ಸ್ನಾತಕೋತ್ತರ ಪದವಿಯಲ್ಲಿ ಶೇ.55 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದವರು ವಿಶ್ವವಿದ್ಯಾಲಯಗಳ ಪಿಎಚ್‌ಡಿ ಪದವಿಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ, ವರ್ಗ-1 ರ ಹಾಗೂ ವಿಕಲಚೇತನ ಅಭ್ಯರ್ಥಿಗಳು ಶೇಕಡಾ 50 ರಷ್ಟು ಅಂಕಗಳನ್ನು ಪಡೆದಿರಬೇಕು. ಎನ್‌ಇಟಿ ಮತ್ತು ಎಸ್‌ಎಲ್ಇಟಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವವರು ಅಥವಾ ವಿದೇಶ ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಅರ್ಹತಾ ಪರೀಕ್ಷೆಯಿಂದ ವಿನಾಯಿತಿ ಇರುತ್ತದೆ. ಪಿಎಚ್‌ಡಿ ಪದವಿಯ ಪ್ರವೇಶ ಪರೀಕ್ಷೆಯ ಅಂಕ ಹಾಗೂ ಸ್ನಾತಕೋತ್ತರ ಪದವಿಗಳ ಅಂಕ ಮತ್ತು ಸಂದರ್ಶನದಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಅರ್ಹತೆ ಮತ್ತು ಮೀಸಲಾತಿಯನ್ನು ಆಧರಿಸಿ ಖಾಲಿ ಇರುವ ಪಿಎಚ್‌ಡಿ ಸೀಟುಗಳಿಗೆ ಪ್ರವೇಶ ನೀಡಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X