ಮಂಗಳೂರು: ಅಕ್ರಮ ಚಿನ್ನ ಸಾಗಾಟ; ಆರೋಪಿ ಸೆರೆ

ಮಂಗಳೂರು, ಜು.13: ದುಬೈನಿಂದ ವಿಮಾನದ ಮೂಲಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪಿಯೊಬ್ಬನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು ಆತನಿಂದ 697 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಕಾಸರಗೋಡು ನಿವಾಸಿ ಮೊಹ್ಸಿನ್ ಅಬೂಬಕರ್ ಎಂದು ಗುರುತಿಸಲಾಗಿದೆ. ಆತ ಚಿನ್ನವನ್ನು ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿ ಪಡೆದ ಅಧಿಕಾರಿಗಳ ತಂಡ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದೆ.
Next Story





