ಗಾಂಜಾ ಮಾರಾಟ: ಆರೋಪಿ ಸೆರೆ; ಸೊತ್ತು ವಶ

ಮಂಗಳೂರು, ಜು.13: ನರಿಂಗಾನ ಗ್ರಾಮದ ಕಲ್ಲರಕೋಡಿ ಕ್ರಾಸ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಅಝೀಝ್ ಬಂಧಿತ ಆರೋಪಿ. ಈತ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ಆತನಿಂದ 1 ಕೆಜಿ 300 ಗ್ರಾಂ ತೂಕದ ಗಾಂಜಾ, ನಗದು 22,030 ರೂ., 1 ಮೊಬೈಲ್ ಹ್ಯಾಂಡ್‌ಸೆಟ್, ಸ್ಕೂಟರ್ ಸೇರಿದಂತೆ ಒಟ್ಟು 80 ಸಾವಿರ ರೂ. ಮೌಲ್ಯದ ಸೊತ್ತು ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿ ವಿಚಾರಣೆ ವೇಳೆ ಕೋಲಾರದಿಂದ ಗಾಂಜಾ ತಂದು ಮಾರಾಟ ಮಾಡುತ್ತಿರುವುದಾಗಿ ಹೇಳಿದ್ದಾನೆ. ಆರೋಪಿಯ ವಿರುದ್ಧ ಈಗಾಗಲೇ ನಗರದಲ್ಲಿ 4 ಗಾಂಜಾ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್, ಡಿಸಿಪಿಗಳಾದ ಹನುಮಂತರಾಯ, ಉಮಾಪ್ರಶಾಂತ್ ಮಾರ್ಗದರ್ಶನದಂತೆ ದಕ್ಷಿಣ ಉಪವಿಭಾಗದ ಎಸಿಪಿ ರಾಮರಾವ್ ನೇತೃತ್ವದಲ್ಲಿ ಕೋಣಾಜೆ ಪೊಲೀಸ್ ನಿರೀಕ್ಷಕ ಅಶೋಕ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಆರೋಪಿ ಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.





