ಜು.17: ಮೀನುಗಾರಿಕೆ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ
ಮಂಗಳೂರು, ಜು.13: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾನಿಲಯ ಬೀದರ್ ಇದರ ಅಧೀನದ ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯದ ಸುವರ್ಣ ಮಹೋತ್ಸವವು ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯದ ಆಡಿಟೋರಿಯಂನಲ್ಲಿ ಜು.17ರಂದು ನಡೆಯಲಿದೆ.
ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆಯ ಪ್ರಯುಕ್ತ ನಡೆಯುವ ಈ ಕಾರ್ಯಕ್ರಮದಲ್ಲಿ ಸಮಸ್ಯಾತ್ಮಕ ಮಣ್ಣಿನ ಅನ್ವಯಿಕ ಸಂಶೋಧನಾ ಕೇಂದ್ರ ಹಾಗೂ ಸಂಚಾರಿ ಮಣ್ಣು ಮತ್ತು ನೀರು ಪ್ರಯೋಗಾಲಯದ ಲೋಕಾರ್ಪಣೆಯು ಅಂದು ಬೆಳಗ್ಗೆ 10 ಗಂಟೆಗೆ ಜರುಗಲಿದೆ.
ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಸಮಸ್ಯಾತ್ಮಕ ಮಣ್ಣಿನ ಅನ್ವಯಿಕ ಸಂಶೋಧನಾ ಕೇಂದ್ರದ ಲೋಕಾರ್ಪಣೆ ಮಾಡಲಿದ್ದಾರೆ. ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ ಖಾದರ್ ಸಂಚಾರಿ ಮಣ್ಣು ಮತ್ತು ನೀರು ಪ್ರಯೋಗಾಲಯದ ಲೋಕಾರ್ಪಣೆ ಮಾಡುವರು ಎಂದು ಪ್ರಕಟನೆ ತಿಳಿಸಿದೆ.
Next Story





