Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ನೀರಜ್ ಪಾಂಡೆಯ ಹೊಸ ಚಿತ್ರದಲ್ಲಿ ಈ ಖ್ಯಾತ...

ನೀರಜ್ ಪಾಂಡೆಯ ಹೊಸ ಚಿತ್ರದಲ್ಲಿ ಈ ಖ್ಯಾತ ನಟ ಆಗಲಿದ್ದಾರೆ ಚಾಣಕ್ಯ

ವಾರ್ತಾಭಾರತಿವಾರ್ತಾಭಾರತಿ13 July 2018 9:54 PM IST
share
ನೀರಜ್ ಪಾಂಡೆಯ ಹೊಸ ಚಿತ್ರದಲ್ಲಿ ಈ ಖ್ಯಾತ ನಟ ಆಗಲಿದ್ದಾರೆ ಚಾಣಕ್ಯ

ಅಜಯ್ ದೇವಗನ್ ಕಳೆದ ಎರಡು ದಶಕಗಳಿಂದ ತೆರೆ ಮೇಲೆ ವಿಭಿನ್ನ ಪಾತ್ರಗಳ ಮೂಲಕ ನಮ್ಮನ್ನು ರಂಜಿಸುತ್ತಿದ್ದಾರೆ. ಹದಿಹರೆಯದ ಪ್ರೇಮಿಯಿಂದ ಹಿಡಿದು ಆ್ಯಕ್ಷನ್ ಹೀರೊತನಕ ಯಾವ ಪಾತ್ರವೇ ಆಗಲಿ, ಪಾತ್ರದ ಆಳಕ್ಕಿಳಿದು ಪರಿಪೂರ್ಣ ಪ್ರದರ್ಶನ ನೀಡುವುದು ಅವರ ವೈಶಿಷ್ಠ್ಯ. 'ರೈಡ್' ಚಿತ್ರದಲ್ಲಿ ಆದಾಯ ತೆರಿಗೆ ಅಧಿಕಾರಿಯ ಪಾತ್ರದಲ್ಲಿ ಮಿಂಚಿದ ಬಳಿಕ 'ಸ್ಪೆಷಲ್ 26', 'ವೆಡ್‍ನಸ್‍ಡೇ' ಮತ್ತು 'ಬೇಬಿ'ಯಂಥ ಚಿತ್ರಗಳಲ್ಲಿ ಗಮನ ಸೆಳೆದಿದ್ದಾರೆ.

ವಿಷ್ಣುಗುಪ್ತ ಅಥವಾ ಕೌಟಿಲ್ಯ ಎಂದೂ ಕರೆಯಲ್ಪಡುವ ಚಾಣಕ್ಯನನ್ನು ಭಾರತದ ಅಪೂರ್ವ ಶಿಕ್ಷಕ, ತತ್ವಜ್ಞಾನಿ, ಅರ್ಥಶಾಸ್ತ್ರಜ್ಞ, ನ್ಯಾಯತಜ್ಞ ಹಾಗೂ ಚಕ್ರವರ್ತಿಯ ಸಲಹೆಗಾರ ಎಂದೂ ಗುರುತಿಸಲಾಗುತ್ತದೆ. ಚಂದ್ರಗುಪ್ತ ಮೌರ್ಯನ ಯಶಸ್ಸಿನಲ್ಲಿ ಚಾಣಕ್ಯನ ಕೊಡುಗೆ ಅಪಾರ. ಮೌರ್ಯಸಾಮ್ರಾಜ್ಯ ವಿಸ್ತರಣೆಗೆ ಚಾಣಕ್ಯನ ಸಲಹೆಗಳೇ ಮೂಲ ಕಾರಣ ಎನ್ನಲಾಗುತ್ತಿದೆ. ಪ್ರಾಚೀನ ಭಾರತದ ರಾಜನೀತಿ ಶಾಸ್ತ್ರದ ಪಿತಾಮಹ ಎಂದೂ ಚಾಣಕ್ಯನನ್ನು ಗುರುತಿಸಲಾಗುತ್ತದೆ.

ಇದೀಗ ಚಾಣಕ್ಯನ ಜೀವನ- ಬೋಧನೆಗಳ ಕುರಿತಾದ ಚಿತ್ರ ಬೆಳ್ಳಿತೆರೆಯ ಮೇಲೆ ಬರಲಿದೆ. ಚಿತ್ರದ ಬಗ್ಗೆ ಮಾತನಾಡಿದ ದೇವಗನ್, "ಚಾಣಕ್ಯನ ಪಾತ್ರ ನಿರ್ವಹಿಸುವುದನ್ನು ನಾನು ಎದುರು ನೋಡುತ್ತಿದ್ದೇನೆ. ನೀರಜ್ ಪಾಂಡೆಯವರ ಕೃತಿಯನ್ನು ತೀರಾ ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದೇನೆ. ಈ ಕಥೆಯನ್ನು ನೀರಜ್ ಹೆಚ್ಚು ಸ್ಪಷ್ಟ ಹಾಗೂ ಪ್ರೀತಿಯಿಂದ ಬಣ್ಣಿಸುತ್ತಾರೆ. ಅದನ್ನು ಹಾಗೆಯೇ ಹೇಳಬೇಕು ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ" ಎಂದು ಹೇಳಿದರು.

ಚಿತ್ರದ ನಿರ್ದೇಶಕ ನೀರಜ್ ಪಾಂಡೆ ಈ ಬಗ್ಗೆ ಕೇಳಿಕೆ ನೀಡಿ, "ಚಾಣಕ್ಯನ ಕುರಿತ ಚಿತ್ರ ನಿರ್ಮಿಸುವಲ್ಲಿ ಶ್ರಮ ವಹಿಸಿದ್ದೇನೆ. ಇದು ಅದ್ಭುತ ಚಿತ್ರವಾಗಲಿದ್ದು, ಅಜಯ್ ಪಾತ್ರವನ್ನು ಪ್ರೇಕ್ಷಕರು ಮೆಚ್ಚುತ್ತಾರೆ ಎಂಬ ವಿಶ್ವಾಸವಿದೆ" ಎಂದು ಹೇಳಿದ್ದಾರೆ.

ರಿಲಯನ್ಸ್ ಎಂಟರ್‍ಟೈನ್‍ಮೆಂಟ್ ಈ ಚಿತ್ರ ನಿರ್ಮಿಸುತ್ತಿದೆ. ಇತರ ಪಾತ್ರಗಳ ಹೆಸರು ಬಹಿರಂಗವಾಗಿಲ್ಲ.

Looking forward to playing #Chanakya, a film about one of the greatest thinkers in Indian History, directed by @neerajpofficial.@RelianceEnt @FFW_Official @PlanC_Studios @ShitalBhatiaFFW

— Ajay Devgn (@ajaydevgn) July 11, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X