Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ತವರಿಗೆ ಮರಳಿದ ದರ್ಶನ್...

ಮಂಡ್ಯ: ತವರಿಗೆ ಮರಳಿದ ದರ್ಶನ್ ಪುಟ್ಟಣ್ಣಯ್ಯಗೆ ಭವ್ಯ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ13 July 2018 10:20 PM IST
share
ಮಂಡ್ಯ: ತವರಿಗೆ ಮರಳಿದ ದರ್ಶನ್ ಪುಟ್ಟಣ್ಣಯ್ಯಗೆ ಭವ್ಯ ಸ್ವಾಗತ

ಮಂಡ್ಯ, ಜು.13: ಚುನಾವಣಾ ಸಂದರ್ಭದಲ್ಲಿ ಘೋಷಿಸಿದಂತೆ ದಿವಂಗತ ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ, ಅಮೆರಿಕಾದ ತನ್ನ ಕಂಪನಿಯನ್ನು ಮಾರಾಟ ಮಾಡಿ ಶುಕ್ರವಾರ ಸ್ವದೇಶಕ್ಕೆ ಮರಳಿದ್ದಾರೆ.

ಪಾಂಡವಪುರದಲ್ಲಿ ರೈತಸಂಘದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಭವ್ಯ ಸ್ವಾಗತ ಸ್ವೀಕರಿಸಿ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ತಂದೆಯ ಹೋರಾಟವನ್ನು ಮುಂದುವರೆಸುವುದಕ್ಕಾಗಿ ಅಮೇರಿಕದಿಂದ ನಮ್ಮೂರಿಗೆ ಆಗಮಿಸಿದ್ದೇನೆ ಎಂದರು.

ನನ್ನನ್ನು ಇಷ್ಟೊಂದು ಅದ್ದೂರಿಯಾಗಿ ಸ್ವಾಗತ ಮಾಡಿದ ಎಲ್ಲಾ ಕಾರ್ಯಕರ್ತರಿಗೆ, ಕ್ಷೇತ್ರದ ಮತದಾರರಿಗೆ ಅಭಿನಂದನೆಗಳು. ನಿಮ್ಮ ನಡುವೆಯೇ ಇರುತ್ತೇನೆಂದು ಭರವಸೆ ಕೊಟ್ಟಿದ್ದೆ. ಮಾತು ಉಳಿಸಿಕೊಂಡಿದ್ದೇನೆ ಎಂದು ಅವರು ಭಾವುಕರಾದರು. ಅಮೇರಿಕದ ನನ್ನ ಕಂಪನಿಗಳನ್ನು ಮಾರಾಟ ಮಾಡಿ ಮತ್ತೆ ತವರಿಗೆ ವಾಪಸ್ಸಾಗಿದ್ದೇನೆ. ಇನ್ನೂ ಸ್ವಲ್ಪ ಕಂಪನಿ ಮಾರಾಟ ಮಾಡುವುದಿದೆ. ನನ್ನ ಕುಟುಂಬವು ಸಹ ಅಮೇರಿಕದಲ್ಲಿದೆ. ರೈತ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ಚಳವಳಿಗೂ ದುಮುಕುತ್ತೇನೆ. ನನ್ನ ತಂದೆಯ ಹಾದಿಯಲ್ಲಿಯೇ ಸಾಗುತ್ತೇನೆ ಎಂದು ಅವರು ಹೇಳಿದರು.

ನಾನು ಯಾವುದೇ ಬೇರೆ ಪಕ್ಷಗಳಿಗೂ ಹೋಗೋದಿಲ್ಲ. ಲೋಕಸಭಾ ಚುನಾವಣೆಗೂ ನಿಲ್ಲೋದಿಲ್ಲ. ನಾನು ಮೊದಲು ಸ್ವರಾಜ್ ಇಂಡಿಯಾ ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡುತ್ತೇನೆ. ಚುನಾವಣೆಯ ಸಂದರ್ಭದಲ್ಲಿ ಎದುರಾದ ಕೆಲವು ಸಮಸ್ಯೆಗಳ ಬಗ್ಗೆ ಪಾಠಕಲಿತಿದ್ದೇನೆ ಎಂದು ಅವರು ತಿಳಿಸಿದರು.

ಕಳೆದ ಬಾರಿ ಚುನಾವಣೆಯಲ್ಲಿ ಕ್ಷೇತ್ರದ ಜನತೆ ನನಗೆ ಮತಕೊಟ್ಟಿದ್ದಾರೆ. ಅವರಿಗೆ ಕೃತಜ್ಞತೆ ತಿಳಿಸಬೇಕಿದೆ. ಆದ್ದರಿಂದ ನಾಳೆಯಿಂದಲೇ ಅದರ ಬಗ್ಗೆ ಚರ್ಚೆ ನಡೆಸಿ ಕಾರ್ಯಕ್ರಮ ರೂಪಿಸುತ್ತೇನೆ. ಕ್ಷೇತ್ರದ ಎಲ್ಲಾ ಹಳ್ಳಿಗಳಿಗೂ ತೆರಳಿ ಮತದಾರರಿಗೆ ಕೃತಜ್ಞತೆಸಲ್ಲಿಸುತ್ತೇನೆ ಎಂದು ಅವರು ಹೇಳಿದರು.

ತಾಯಿ, ಸುನೀತ ಪುಟ್ಟಣ್ಣಯ್ಯ, ಸೋದರಿ ಅಕ್ಷತಾ ಪುಟ್ಟಣ್ಣಯ್ಯ, ರೈತಸಂಘದ ತಾಲೂಕು ಅಧ್ಯಕ್ಷ ಎ.ಎಲ್.ಕೆಂಪೂಗೌಡ, ಪಿಎಸ್‍ಎಸ್‍ಕೆ ಉಪಾಧ್ಯಕ್ಷ ಹರವು ಪ್ರಕಾಶ್, ಜಿಪಂ ಮಾಜಿ ಸದಸ್ಯ ಕೆ.ಟಿ.ಗೋವಿಂದೇಗೌಡ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X