ಸಚಿವೆ ಜಯಮಾಲಗೆ ಯುವವಾಹಿನಿಯಿಂದ ಸನ್ಮಾನ

ಮಂಗಳೂರು, ಜು.13: ಯುವವಾಹಿನಿ ಕೇಂದ್ರ ಸಮಿತಿಯ ತಂಡವು ಬೆಂಗಳೂರಿಗೆ ತೆರಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆ ಡಾ.ಜಯಮಾಲ ಅವರನ್ನು ವಿಧಾನಸೌಧದಲ್ಲಿ ಭೇಟಿಯಾಗಿ, ಸನ್ಮಾನಿಸಲಾಯಿತು.
ಈ ಸಂದರ್ಭ ಮಾತನಾಡಿದ ಸಚಿವೆ, ಆ.5ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆಷನ್ ಸೆಂಟರ್‌ನಲ್ಲಿ ನಡೆಯುತ್ತಿರುವ ಯುವವಾಹಿನಿಯ 31ನೇ ವಾರ್ಷಿಕ ಸಮಾವೇಶದಲ್ಲಿ ತಾನೂ ಪಾಲ್ಗೊಳ್ಳುತ್ತಿದ್ದು, ಎಲ್ಲರೂ ಸಮಾವೇಶ ಯಶಸ್ವಿಗೊಳಿಸೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ಉಪಾಧ್ಯಕ್ಷ ಜಯಂತ ನಡುಬೈಲು, ನರೇಶ್ ಕುಮಾರ್ ಸಸಿಹಿತ್ಲು, ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಸಮಾವೇಶ ನಿರ್ದೇಶಕ ಹರೀಶ್ ಕೆ.ಪೂಜಾರಿ ಹಾಗೂ ಸುಧೀರ್ ಪೂಜಾರಿ ಉಪಸ್ಥಿತರಿದ್ದರು.
Next Story





