ಉಡುಪಿ: ನಿವೇಶನ ಮತ್ತು ವಸತಿ ರಹಿತರ ನೊಂದಣಿ ಅಭಿಯಾನ
ಉಡುಪಿ, ಜು.13: ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾ) ಅಡಿಯಲ್ಲಿ ವಸತಿ ರಹಿತರ ಮತ್ತು ನಿವೇಶನ ರಹಿತರನ್ನು ಶಾಶ್ವತ ಪಟ್ಟಿಗೆ ಸೇರಿಸುವ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನ ಗ್ರಾಮೀಣ ಪ್ರದೇಶದ ನಿವೇಶನ/ವಸತಿ ರಹಿತರನ್ನು ಗುರುತಿಸಿ ಅರ್ಹ ಫಲಾನುಭವಿಯ ಹೆಸರನ್ನು ಶಾಶ್ವತ ಪಟ್ಟಿಗೆ ಸೇರ್ಪಡೆಗೊಳಿಸುವ ಅವಧಿಯನ್ನು ಜು.31ರವರೆಗೆ ವಿಸ್ತರಿಸಲಾಗಿದೆ.
ನಿವೇಶನ ಮತ್ತು ವಸತಿ ಇಲ್ಲದ ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಪಂಗಳನ್ನು ಆಧಾರ್ ಕಾರ್ಡ್ ಮತ್ತು ಪಾಸ್‌ಪೋರ್ಟ್ ಗಾತ್ರದ ಪೋಟೋ ದೊಂದಿಗೆ ಜು.31ರೊಳಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೊಂದಾಯಿಸಿ ಕೊಳ್ಳುವಂತೆ ಕಾರ್ಕಳ ತಾಪಂನ ಕಾರ್ಯನಿರ್ವಹಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





