ಮಂಗಳೂರು: ಷೇರು ಮಾರುಕಟ್ಟೆಯ ಬಗ್ಗೆ ವಿಶೇಷ ಉಪನ್ಯಾಸ

ಮಂಗಳೂರು, ಜು.14: ನಗರದ ರಥಬೀದಿಯ ಡಾ.ಪಿ.ದಯಾನಂದ ಪೈ -ಪಿ. ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿ ಗಳಿಗಾಗಿ ಕಾಲೇಜಿನ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೋಶದ ಆಶ್ರಯದಲ್ಲಿ ಬಂಡವಾಳ ಮಾರುಕಟ್ಟೆಯ ವಿವಿಧ ಚಟುವಟಿಕೆಗಳ ಬಗ್ಗೆ ಮುಂಬೈ ಷೇರು ಮಾರುಕಟ್ಟೆಯ ಸಹಯೋಗದೊಂದಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಶುಕ್ರವಾರ ಜರುಗಿತು.
ಬಂಡವಾಳ ಮಾರುಕಟ್ಟೆಯ ಬಗ್ಗೆ ಕೆ. ರಾಮಚಂದ್ರ ಭಟ್ ಷೇರು ಮಾರುಕಟ್ಟೆಗಳ ಚಟುವಟಿಕೆ ಹಾಗೂ ವಿವಿಧ ಕಂಪನಿಗಳ ಷೇರುಗಳಲ್ಲಿ ಹೂಡಿಕೆ ಮಾಡುವ ವಿಧಾನಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ. ಶಿವರಾಮ ಪಿ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದು ಆಧುನಿಕ ಯುಗದ ಹೊಸ ಉದ್ಯೋಗ ಅವಕಾಶವಾಗಿದೆ. ಷೇರು ಮಾರುಕಟ್ಟೆಯಲ್ಲಿ ಬಂಡವಾಳ ವಿನಿಯೋಗಿಸುವಾಗ ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೋಶದ ಸಂಚಾಲಕ ಪ್ರೊ. ಗೀತಾ ಎಂ.ಎಲ್., ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಅಪ್ಪು, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನಾಗಪ್ಪಗೌಡ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ.ರವಿಕುಮಾರ ಎಂ.ಪಿ, ಅತಿಥಿ ಉಪನ್ಯಾಸಕ ಜಯಲಕ್ಷ್ಮಿ ಪಾಲ್ಗೊಂಡಿದ್ದರು.
ವಿದ್ಯಾರ್ಥಿನಿಯರಾದ ಸ್ವಾತಿ ಸ್ವಾಗತಿಸಿದರು. ವಿನಯ್ ವಂದಿಸಿದರು.





