Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಎರಡನೇ ದಿನವೂ ಮುದುವರಿದ...

ಬೆಳ್ತಂಗಡಿ: ಎರಡನೇ ದಿನವೂ ಮುದುವರಿದ ಪೌರಕಾರ್ಮಿಕರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ14 July 2018 9:15 PM IST
share
ಬೆಳ್ತಂಗಡಿ: ಎರಡನೇ ದಿನವೂ ಮುದುವರಿದ ಪೌರಕಾರ್ಮಿಕರ ಪ್ರತಿಭಟನೆ

ಬೆಳ್ತಂಗಡಿ, ಜು. 14: ಪಟ್ಟಣ ಪಂಚಾಯತ್‌ನಲ್ಲಿ ಕಸ ವಿಲೇವಾರಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಶುಕ್ರವಾರದಿಂದ ಕೆಲಸಕ್ಕೆ ಹಾಜರಾಗದೇ ಮುಷ್ಕರ ಹೂಡಿದ್ದು,  2ನೇ ದಿನವೂ ಮುಂದುವರಿದಿದೆ.

ಪೌರ ಕಾರ್ಮಿಕರ ಮುಷ್ಕರದಿಂದ, ನಗರದ ಅಲ್ಲಲ್ಲಿ ಕಸ ರಾಶಿ ಬಿದ್ದಿದೆ. ನಿರಂತರ ಮಳೆಯಾಗುತ್ತಿದ್ದು ದುರ್ನಾತ ಬೀರಲಾರಂಭಿಸಿದೆ. ಪ್ರತಿಭಟನೆ ನಡೆಸುತ್ತಿರುವ 12 ಮಂದಿ ಕಾರ್ಮಿಕರು ಶನಿವಾರ ಪಟ್ಟಣ ಪಂಚಾಯತ್ ಕಚೇರಿಯ ಮುಂಭಾಗದಲ್ಲಿ ಮುಷ್ಕರ ನಡೆಸಿದರು. ಆದರೆ 2ನೇ ಶನಿವಾರ ಆದ ಕಾರಣ ಸರ್ಕಾರಿ ರಜೆಯಾಗಿದ್ದು, ಅಧಿಕಾರಿಗಳು ಯಾರೂ ಬಂದಿಲ್ಲ.

ಶಾಸಕ ಪೂಂಜ ಭೇಟಿ: ಪಟ್ಟಣ ಪಂಚಾಯತ್ ಕಚೇರಿಯಲ್ಲಿ ಮುಷ್ಕರ ನಿರತ ಪೌರ ಕಾರ್ಮಿಕರನ್ನು ಶಾಸಕ ಹರೀಶ ಪೂಂಜ ಹಾಗೂ ತಹಶೀಲ್ದಾರ್ ಮದನ್ ಮೋಹನ್ ಸ್ಥಳಕ್ಕೆ ಭೇಟಿ ಅವರ ಸಮಸ್ಯೆಯನ್ನು ಆಲಿಸಿದರು. ತಮ್ಮ ಬೇಡಿಕೆಯುಳ್ಳ ಮನವಿಯನ್ನು ಶಾಸಕರಿಗೆ ಪೌರ ಕಾರ್ಮಿಕರು ನೀಡಿದರು. ತಕ್ಷಣ ಇವರ ಸಮಸ್ಯೆಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳುವಂತೆ ಶಾಸಕರು ತಹಶೀಲ್ದಾರಿಗೆ ಸೂಚಿಸಿದರು. ತಮ್ಮ ಸಮಸ್ಯೆಗೆ ಪರಿಹಾರ ದೊರಕುವವರೆಗೆ ಕೆಲಸಕ್ಕೆ ಹಾಜರಾಗದೇ ಮುಷ್ಕರ ಮುಂದುವರಿಸುವುದಾಗಿ ಕಾರ್ಮಿಕರು ತಿಳಿಸಿದರು.

ಮಾಹಿತಿ ಕೊರತೆಯಿಂದಾಗಿ ಸಮಸ್ಯೆ: ಪೌರ ಕಾರ್ಮಿಕರಿಗೆ ಮಾರ್ಚ್ ತನಕ ಗುತ್ತಿಗೆದಾರರ ಮೂಲಕ ವೇತನ ಪಾವತಿಯಾಗುತ್ತಿದ್ದು, ಪ್ರಸ್ತುತ ಎಪ್ರಿಲ್ ಬಳಿಕ ಪಟ್ಟಣ ಪಂಚಾಯತ್ ನೇರವಾಗಿ ವೇತನ ನೀಡುತ್ತಿದೆ. ಹೀಗಾಗಿ ಮುಖ್ಯಾಧಿಕಾರಿಗಳ ಖಾತೆಗೆ ಜಮೆಯಾಗಿ ವಾರದೊಳಗೆ ಅವರ ಹಣ ಖಾತೆಗೆ ಬೀಳುತ್ತದೆ. ಇಎಸ್‌ಐ ಹಾಗೂ ಪಿಎಫ್ ಕಟ್ಟಲಾಗಿದೆ. ಸರಕಾರದ ಮಾನದಂಡದಂತೆ ವೇತನ ನೀಡಲಾಗುತ್ತಿದೆ ಹಾಗೂ ಇತರ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ವೇತನದ ಬಗ್ಗೆ ಇರುವ ಮಾಹಿತಿಯ ಕೊರತೆಯಿಂದಾಗಿ ಸಮಸ್ಯೆಯಾಗಿದೆ. ಈ ಕುರಿತು ಕಾರ್ಮಿಕರಿಗೆ ಮನವರಿಕೆ ಮಾಡಲಾಗಿದ್ದು, ಕೆಲಸಕ್ಕೆ ಬರುವಂತೆ ಮನವಿ ಮಾಡಿದ್ದೇನೆ ಎಂದು ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X