ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆಯ ಗೌರವಾಧ್ಯಕ್ಷನಿಗೆ ಹಲ್ಲೆ
ಮಹಿಳೆಯ ಜೊತೆ ಅನುಚಿತ ವರ್ತನೆಯ ಆರೋಪ

ಉಡುಪಿ, ಜು. 14: ಮಹಿಳೆಯೋರ್ವರ ಜೊತೆ ಅನುಚಿತವಾಗಿ ವರ್ತಿಸಿದ್ದಾಗಿ ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಗೌರವಾಧ್ಯಕ್ಷನಿಗೆ ಹಲ್ಲೆ ನಡೆಸಿದ ಘಟನೆ ಉಡುಪಿಯ ಶಿರ್ವ ಗ್ರಾಮದ ಪಂಜಿಮಾರಿನಲ್ಲಿ ನಡೆದಿದೆ.
ಹಲ್ಲೆಗೊಳಗಾಗ ವ್ಯಕ್ತಿಯನ್ನು ಸಂತೋಷ್ ಶೆಟ್ಟಿ ಪಂಜಿಮಾರ್ ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪರಿಶಿಷ್ಟ ಪಂಗಡದ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದ್ದು, ಮೊಬೈಲ್ ಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿರುವುದಾಗಿ ದೂರಲಾಗಿದೆ.
ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story