ಸೋಮೇಶ್ವರ ಉಚ್ಚಿಲದಲ್ಲಿ ಕಡಲ್ಕೊರೆತ ತೀವ್ರ: ಮುಂಜಾಗ್ರತಾ ಕ್ರಮಕ್ಕೆ ಸಚಿವ ಖಾದರ್ ಸೂಚನೆ

ಮಂಗಳೂರು, ಜು.14: ಸೋಮೇಶ್ವರ ಉಚ್ಚಿಲ ಪ್ರದೇಶದಲ್ಲಿ ಕಡಲ್ಕೊರೆತ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಕಡಲ್ಕೊರೆತ ತಡೆಗೆ ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿರುವುದಾಗಿ ಸಚಿವರು ಹೇಳಿದ್ದಾರೆ.
ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಸೋಮೇಶ್ವರ ಉಚ್ಚಿಲದಲ್ಲಿ ಕಳೆದೆರಡು ದಿನಗಳಿಂದ ಕಡಲ್ಕೊರೆತ ತೀವ್ರಗೊಂಡಿದೆ. ಭಾರೀ ಗಾತ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಹಲವು ಮರಗಳು ಧರೆಗುರುಳಿವೆ. ಅಲ್ಲದೆ ಈ ಭಾಗದ ಹಲವು ಮನೆಗಳು ಅಪಾಯಕ್ಕೆ ಸಿಲುಕುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಕ್ಕೆ ಸಚಿವರು ಸೂಚನೆ ನೀಡಿದ್ದಾರೆ.
Next Story





