ಮಡಿಕೇರಿ: ನಿತಂತ್ರಣ ತಪ್ಪಿ ತೋಟಕ್ಕೆ ಮಗುಚಿದ ಕಾರು

ಮಡಿಕೇರಿ, ಜು.14: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತೋಟದೊಳಗೆ ಮಗುಚಿಕೊಂಡ ಘಟನೆ ಸುಂಟಿಕೊಪ್ಪ ಸಮೀಪದ ಬಾಳೆಕಾಡು ಬಳಿಯ ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಶನಿವಾರ ನಡೆದಿದೆ.
ಕುಶಾಲನಗರದಿಂದ ಮಡಿಕೇರಿಯತ್ತ ತೆರಳುತ್ತಿದ್ದ ನಾಲ್ವರು ಪ್ರವಾಸಿಗರಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ ಬಲಭಾಗದ ತೋಟದೊಳಗೆ ಮಗುಚಿಕೊಂಡಿದೆ. ಅದೃಷ್ಟವಶಾತ್ ಪ್ರವಾಸಿಗರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಸುಂಟಿಕೊಪ್ಪದ ಗ್ಯಾಸ್ ಏಜೆನ್ಸಿಯ ಸಮೀಪದಲ್ಲಿ ನಿಲ್ಲಿಸಿದ್ದ ಕಾರೊಂದಕ್ಕೆ ತಾಗಿಸಿಕೊಂಡು ಹೋಗಿದ್ದ ಈ ಕಾರು ತಮ್ಮನ್ನು ಬೆನ್ನಟ್ಟಬಹುದೆನ್ನುವ ಭೀತಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಈ ಅಪಘಾತ ಸಂಭವಿಸಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





