Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಎಚ್‌ಐವಿ ಸೋಂಕಿತರ ಸೌಲಭ್ಯಗಳಿಗೆ...

‘ಎಚ್‌ಐವಿ ಸೋಂಕಿತರ ಸೌಲಭ್ಯಗಳಿಗೆ ಎಆರ್‌ಟಿ ಮೂಲಕ ಅರ್ಜಿ’

ಜಿಲ್ಲಾಧಿಕಾರಿ ಪ್ರಿಯಾಂಕ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 July 2018 10:18 PM IST
share
‘ಎಚ್‌ಐವಿ ಸೋಂಕಿತರ ಸೌಲಭ್ಯಗಳಿಗೆ ಎಆರ್‌ಟಿ ಮೂಲಕ ಅರ್ಜಿ’

ಉಡುಪಿ, ಜು.16: ಎಚ್‌ಐವಿ ಸೋಂಕಿತರು ಸರಕಾರದ ವಿವಿಧ ಸೌಲಭ್ಯಗಳಿಗಾಗಿ ವಿವಿಧ ಇಲಾಖೆಗಳಿಗೆ ಪದೇ ಪದೇ ಅಲೆಯುವ ಬದಲು ತಾವು ಚಿಕಿತ್ಸೆ ಒಡೆಯುವ ಎಆರ್‌ಟಿ ಸೆಂಟರ್‌ಗಳಲ್ಲೇ ಅರ್ಜಿ ಸಲ್ಲಿಸಿದಲ್ಲಿ, ಅವುಗಳನ್ನು ಸಂಬಂದಪಟ್ಟ ಇಲಾಖೆಗಳಿಗೆ ಕಳುಹಿಸಿ ಸೋಂಕಿತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚಿಸಿದ್ದಾರೆ.

ಸೋಮವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿರುವ ಎಚ್‌ಐವಿ ಸೋಂಕಿತ ಮತ್ತು ಬಾಧಿತರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಎಚ್‌ಐವಿ ಪೀಡಿತರು ಸರಕಾರಿ ಸೌಲಭ್ಯಗಳಿಗೆ ಸರಕಾರಿ ಕಚೇರಿಗಳಿಗೆ ತೆರಳಿದಾಗ ಅವರಿಗೆ ಸೋಂಕು ಇರುವುದು ಬಹಿರಂಗವಾಗುವ ಸಾದ್ಯತೆ ಇದೆ. ಅಲ್ಲದೇ ಅನಾರೋಗ್ಯದಿಂದ ಬಳಲುವ ಅವರು ಕಚೇರಿಗೆ ಅಲೆದಾಡುವುದು ತ್ರಾಸದಾಯಕವಾಗಿದ್ದು, ಇದನ್ನು ತಪ್ಪಿಸುವ ಸಲುವಾಗಿ ಅವರು ಚಿಕಿತ್ಸೆಗೆ ಹಾಜರಾಗುವ ಎಆರ್‌ಟಿ ಸೆಂಟರ್‌ಗಳಲ್ಲಿ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳ ಕಚೇರಿಯಲ್ಲಿ ತಮಗೆ ಅಗತ್ಯವಿರುವ ಸೌಲ್ಯಗಳಿಗೆ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ, ಈ ಅರ್ಜಿಗಳನ್ನು ಸಂಬಂದಪಟ್ಟ ಇಲಾಖೆಗಳಿಗೆ ಕಳುಹಿಸಿ ಅವರಿಗೆ ಸೂಕ್ತ ಸೌಲ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗೆ ಸೂಚಿಸಿದರು.

ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ ಧನಶ್ರೀ ಯೋಜನೆಯಡಿ 2016-17ರಲ್ಲಿ 26 ಮಂದಿಗೆ ಮತ್ತು 2017-18ರಲ್ಲಿ ಅರ್ಜಿ ಸಲ್ಲಿಸಿರುವ 38 ಮಂದಿಗೆ ಸಾಲ ಮಂಜೂರು ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ತಿಳಿಸಿದರು. ಹೆಚ್ಚಿನ ಸೋಂಕಿತರು ಅನಾರೋಗ್ಯದ ಕಾರಣದಿಂದ ಸಾಲ ಮರುಪಾವತಿ ಮಾಡಲು ಶಕ್ತರಿಲ್ಲದ ಕಾರಣ, ರೈತರಿಗೆ ಕೃಷಿ ಸಾಲ ಮನ್ನಾ ಮಾಡಿದ ರೀತಿಯಲ್ಲಿ ತಮ್ಮ ಸಾಲವನ್ನೂ ಮನ್ನಾ ಮಾಡುವಂತೆ ಸೋಂಕಿತರು ಜಿಲ್ಲಾಧಿಕಾರಿಗಳನ್ನು ಕೋರಿದರು. ಸಾಲ ಮನ್ನಾ ಮಾಡುವ ಕುರಿತಂತೆ ನಿಗಮಕ್ಕೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ವಿಶೇಷ ವರ್ಗ ಯೋಜನೆಯಡಿಯಲ್ಲಿ ಎಚ್‌ಐವಿ ಸೋಂಕಿತ ಕುಟುಂಬ ದವರಿಗೆ ಜಿಲ್ಲಾಡಳಿತ ಮತ್ತು ರಾಜೀವ್‌ಗಾಂಧಿ ಗ್ರಾಮೀಣ ವಸತಿ ನಿಗಮದ ಸಹಯೋಗದಲ್ಲಿ 2014-15ರಲ್ಲಿ 36 ಮಂದಿಗೆ, 2016-17ರಲ್ಲಿ 63 ಮಂದಿಗೆ, 2017-18ರಲ್ಲಿ 33 ಮಂದಿಗೆ ವಸತಿ ಸೌಲ್ಯ ನೀಡಲಾಗಿದೆ. ಅರ್ಹರಿಗೆ ನಿವೇಶನ ಗುರುತಿಸುವ ಕುರಿತಂತೆ ಹಾಗೂ ಆರ್‌ಟಿಸಿಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಎಲ್ಲಾ ತಹಶೀಲ್ದಾರ್‌ಗಳಿಗೆ ಸೂಚಿಸಿದ ಡಿಸಿ, ಜಿಲ್ಲೆಯಲ್ಲಿ ಪ್ರಸ್ತುತ ನಿವೇಶನ ರಹಿತರು ಮತ್ತು ವಸತಿ ರಹಿತರ ಸಮೀಕ್ಷೆ ನಡೆಯುತ್ತಿದ್ದು, ನಿವೇಶನ ಮತ್ತು ವಸತಿ ರಹಿತ ಎಲ್ಲಾ ಎಚ್‌ಐವಿ ಸೋಂಕಿತರು ಸಂಬಂಧಪಟ್ಟ ಗ್ರಾಪಂ ವ್ಯಾಪ್ತಿಯಲ್ಲಿ ಹೆಸರು ಸೇರ್ಪಡೆ ಮಾಡುವಂತೆ ತಿಳಿಸಿದರು.

ಉಡುಪಿ ಹಾಗೂ ಕುಂದಾಪುರದ ಎಆರ್‌ಟಿ ಸೆಂಟರ್‌ಗಳಲ್ಲಿ ಎಚ್‌ಐವಿ ಸೋಂಕಿತರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಉಚಿತ ಕಾನೂನು ನೆರವು ನೀಡಲಾಗುತ್ತಿದ್ದು, ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಆರೋಗ್ಯ ಕರ್ನಾಟಕ ಯೋಜನೆಯಲ್ಲಿ, ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ಪಡೆಯುವ ಕುರಿತಂತೆ ಸೋಂಕಿತರಿಗೆ ವಿವರಿಸಿದ ಜಿಲ್ಲಾಧಿಕಾರಿಗಳು ನೊಂದಾಯಿತ ಆಸ್ಪತ್ರೆಗಳ ಪಟ್ಟಿ ಮತ್ತು ವಿವರಗಳನ್ನು ಎಲ್ಲ ಎನ್‌ಜಿಓಗಳಿಗೆ ಮತ್ತು ಎಆರ್‌ಟಿ ಸೆಂಟರ್‌ಗಳ ಮೂಲಕ ವಿತರಿಸುವಂತೆ ಸೂಚಿಸಿದರು.

ಜಿಲ್ಲೆಯ ಖಾಸಗಿ ಬಸ್‌ಗಳಲ್ಲಿ ಎಚ್‌ಐವಿ ಸೋಂಕಿತರಿಗೆ ನೀಡುತ್ತಿರುವ ರಿಯಾಯತಿ ಬಸ್ ಪಾಸ್‌ನಲ್ಲಿ ಅವರ ಸೊಂಕಿನ ಕುರಿತು ಗೋಪ್ಯತೆ ಕಾಪಾಡುವಂತೆ ಹಾಗೂ ವಿಶೇಷ ವಿನ್ಯಾಸದ, ಉತ್ತಮ ಗುಣಮಟ್ಟದ ಪಾಸ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲಾ ಇಲಾಖೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಡಿ ಗ್ರೂಪ್ ನೌಕರರ ನೇಮಕ ಸಂದಭರ್ದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುವಂತೆ ಎಲ್ಲಾ ಇಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯ ಎಲ್ಲಾ ಇಲಾಖೆಗಳಲ್ಲಿ ಗುತ್ತಿಗೆ ಆಾರದಲ್ಲಿಡಿಗ್ರೂಪ್‌ನೌಕರರನೇಮಕಸಂದರ್ದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುವಂತೆ ಎಲ್ಲಾ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು. ಸಭೆಯಲ್ಲಿದ್ದ ಪ್ರತಿಯೊಬ್ಬ ಎಚ್‌ಐವಿ ಸೊಂಕಿತರ ಸಮಸ್ಯೆಗಳನ್ನು ವಿವರವಾಗಿ ಆಲಿಸಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆಗಳ ವಿವರಗಳನ್ನು ನೀಡಿ ಕ್ರಮ ಕೈಗೊಳ್ಳು ವಂತೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ, ಜಿಪಂ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಚ್‌ಐವಿ ನಿಯಂತ್ರಣದಲ್ಲಿ ತೊಡಗಿರುವ ವಿವಿಧ ಎನ್‌ಜಿಓ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X