Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೆರಿಯೊಟ್ಟು: ವಿಷ ಸೇವಿಸಿ ವೃದ್ಧ ದಂಪತಿ...

ಪೆರಿಯೊಟ್ಟು: ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ

ಅನಾರೋಗದಿಂದ ಬೇಸತ್ತು ಕೃತ್ಯ ಶಂಕೆ

ವಾರ್ತಾಭಾರತಿವಾರ್ತಾಭಾರತಿ16 July 2018 10:44 PM IST
share
ಪೆರಿಯೊಟ್ಟು: ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ

ಉಪ್ಪಿನಂಗಡಿ, ಜು.16: ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಪೆರಿಯೊಟ್ಟು ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಬಾರ್ಯ ಗ್ರಾಮದ ಪೆರಿಯೊಟ್ಟು ನಿವಾಸಿ ಸಂಜೀವ ಪೂಜಾರಿ (60) ಹಾಗೂ ಅವರ ಪತ್ನಿ ಸೀತಾ (57) ಆತ್ಮಹತ್ಯೆ ಮಾಡಿಕೊಂಡವರು. ಇವರಿಬ್ಬರು ಮನೆಯ ಕೊಠಡಿಯೊಳಗೆ ಬಾಗಿಲು ಹಾಕಿ ವಿಷ ಸೇವಿಸಿದ್ದು, ಸಂಜೀವ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೀವನ್ಮರಣ ಸ್ಥಿತಿಯಲ್ಲಿದ್ದ ಸೀತಾ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.

ಸಂಜೀವ ಪೂಜಾರಿ ಕೆಲ ಸಮಯದಿಂದ ಅಸ್ತಮಾ ಮತ್ತು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಅವರಿಗೆ ಅನಾರೋಗ್ಯ ಕಾರಣ ಕೆಲ ಸಮಯದಿಂದ ಕೆಲಸಕ್ಕೂ ಹೋಗಲಾಗುತ್ತಿರಲಿಲ್ಲ. ಈ ಮಧ್ಯೆ ಪತ್ನಿ ಸೀತಾ ಅವರ ಆರೋಗ್ಯವೂ ಸರಿ ಇರಲಿಲ್ಲ. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ದಂಪತಿಗೆ ಮೂವರು ಮಕ್ಕಳಿದ್ದು, ಈ ಪೈಕಿ ಇಬ್ಬರು ಪುತ್ರಿಯರನ್ನು ವಿವಾಹ ಮಾಡಿಕೊಡಲಾಗಿದೆ. ಓರ್ವ ಪುತ್ರ ಜನಾರ್ದನ ಪೂಜಾರಿಗೂ ವಿವಾಹವಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ತಂದೆ-ತಾಯಿ ಜೊತೆ ಒಂದೇ ಮನೆಯಲ್ಲಿ ವಾಸವಾಗಿದ್ದರು.

ಘಟನೆ ನಡೆಯುವಾಗ ಜನಾರ್ದನರ ಪತ್ನಿ ಮೋಹಿನಿ ಮನೆಯಲ್ಲಿದ್ದರು. ‘‘ಮಾವ ಅನಾರೋಗ್ಯದ ಕಾರಣ ಕೋಣೆಯೊಳಗೇ ಇರುತ್ತಿದ್ದರು. ಕೆಲವೊಮ್ಮೆ ಅತ್ತೆಯೂ ಅಲ್ಲೇ ಇರುತ್ತಿದ್ದರು. ಇಂದು ಮಧ್ಯಾಹ್ನದ ವೇಳೆ ಅಲ್ಲೇ ಇದ್ದರು. ಕೆಲ ಹೊತ್ತಿನ ಬಳಿಕ ಕೋಣೆಯೊಳಗಿಂದ ನರಳಾಟ ಕೇಳಿಸಿತು. ಬಾಗಿಲ ಬಳಿ ಬಂದಾಗ ಒಳಗಡೆಯಿಂದ ಚಿಲಕ ಹಾಕಿತ್ತು. ಕೂಡಲೇ ನಾನು ಅಟ್ಟವನ್ನೇರಿ ನೋಡುವಾಗ ಇಬ್ಬರೂ ನರಳಾಡುತ್ತಿದ್ದರು. ಬಳಿಕ ಪಕ್ಕದ ಮನೆಯವರನ್ನು ಕರೆದು ಬಾಗಿಲ ಚಿಲಕ ಮುರಿದು ಒಳ ಪ್ರವೇಶಿಸುವಷ್ಟರಲ್ಲಿ ಮಾವ ಮೃತಪಟ್ಟಿದ್ದರು. ಅತ್ತೆ ಗಂಭೀರ ಸ್ಥಿತಿಯಲ್ಲಿದ್ದರು’’ ಎಂದು ಮೋಹಿನಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕೆಲವೊಮ್ಮೆ ಆರೋಗ್ಯ ತೀರಾ ಕೈಕೊಟ್ಟಾಗ ಸಂಜೀವ ಪೂಜಾರಿ ಪತ್ನಿಯೊಂದಿಗೆ ಮಾತನಾಡುತ್ತಾ ಸಾಯುವುದಾದರೆ ನಾವಿಬ್ಬರು ಜೊತೆಯಾಗಿಯೇ ಎಂದು ಹೇಳಿಕೊಳ್ಳುತ್ತಿದ್ದರೆನ್ನಲಾಗಿದ್ದು, ಆದರೆ ಮನೆಯವರು ಇದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ ಎಂದು ಅವರು ಹೇಳಿದರು.

ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಎಸ್ಸೈ ನಂದಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X