Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಸಂಸದರು-ಶಾಸಕರ ನೇತೃತ್ವದಲ್ಲಿ...

ದಾವಣಗೆರೆ: ಸಂಸದರು-ಶಾಸಕರ ನೇತೃತ್ವದಲ್ಲಿ ಸಭೆ; ರೈಲ್ವೆ ಮೇಲ್ಸೆತುವೆಗೆ ಅಂತಿಮ ನಕ್ಷೆ ನೀಡಲು 15 ದಿನ ಗಡುವು

ವಾರ್ತಾಭಾರತಿವಾರ್ತಾಭಾರತಿ16 July 2018 10:47 PM IST
share
ದಾವಣಗೆರೆ: ಸಂಸದರು-ಶಾಸಕರ ನೇತೃತ್ವದಲ್ಲಿ ಸಭೆ; ರೈಲ್ವೆ ಮೇಲ್ಸೆತುವೆಗೆ ಅಂತಿಮ ನಕ್ಷೆ ನೀಡಲು 15 ದಿನ ಗಡುವು

ದಾವಣಗೆರೆ,ಜು.16: ಅಶೋಕ ಚಿತ್ರಮಂದಿರದ ರಸ್ತೆ ಬಳಿಯಲ್ಲಿರುವ ರೈಲ್ವೆ ಕ್ರಾಸಿಂಗ್‍ನಲ್ಲಿ ಮೇಲ್ಸೇತುವೆ ನಿರ್ಮಿಸಲು ರೈಲ್ವೆ ಇಲಾಖೆ ಪ್ರಸ್ತುತ ನೀಡಿರುವ ನಕ್ಷೆಗೆ ಕೆಲವೊಂದು ಮಾರ್ಪಾಡುಗಳನ್ನು ಮಾಡಿ, ಭೂಸ್ವಾಧೀನ ಮತ್ತು ನಿರ್ಮಾಣದ ಅಂದಾಜು ವೆಚ್ಚ ಸೇರಿದಂತೆ ಸಂಪೂರ್ಣವಾದ ವರದಿಯೊಂದಿಗೆ ನಕ್ಷೆಯನ್ನು ಇನ್ನು 15 ದಿನಗಳ ಒಳಗಾಗಿ ತಯಾರಿಸಿ ನೀಡುವಂತೆ ಸಂಸದ ಜಿ.ಎಂ ಸಿದ್ದೇಶ್ವರ ಅಧಿಕಾರಿಗಳಿಗೆ ತಾಕೀತು ಮಾಡಿದರು.  

ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ  2014-15 ರಿಂದ ನೆನೆಗುದಿಗೆ ಬಿದ್ದಿರುವ ಅಶೋಕ ಟಾಕೀಸ್ ಬಳಿಯ ರೇಲ್ವೇ ಮೇಲ್ಸುತುವೆ ಕಾಮಗಾರಿ ಹಾಗೂ ನಗರಮಟ್ಟದ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಚರ್ಚಿಸಲು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
ಚರ್ಚೆಯಲ್ಲಿ ಪಿಡಬ್ಲ್ಯುಡಿ, ಮಹಾನಗರಪಾಲಿಕೆ ಹಾಗೂ ರೈಲ್ವೇ ಇಲಾಖೆಯವರು ಸರ್ವೇ ಮಾಡಿ ತಯಾರಿಸಿದ್ದ ನಕ್ಷೆಗಳ ಸಾಧಕ-ಬಾಧಕಗಳ ಕುರಿತು ಕೂಲಂಕಷವಾಗಿ ಚರ್ಚಿಸಿದ ಬಳಿಕ ರೈಲ್ವೇ ಇಲಾಖೆ ಸಿದ್ದಪಡಿಸಿದ್ದ ಗಾಂಧಿ ಸರ್ಕಲ್‍ನಿಂದ ಅಶೋಕ ಟಾಕಿಸ್ ಮಾರ್ಗವಾಗಿ ಕೆಆರ್ ರಸ್ತೆವರೆಗೆ ರೇಲ್ವೇ ಮೇಲ್ಸೆತುವೆ ನಿರ್ಮಿಸುವ ನಕ್ಷೆಯನ್ನು ಕೆಲವೊಂದು ಮಾರ್ಪಾಡುಗಳೊಂದಿಗೆ ಅನುಷ್ಟಾನಗೊಳಿಸಲು ಸಭೆ ನಿರ್ಧರಿಸಿ, ಇನ್ನು 15 ದಿನಗಳ ಒಳಗೆ ಕೆಲವು ಮಾರ್ಪಾಡುಗಳೊಂದಿಗೆ ಭೂಸ್ವಾಧೀನ ಮತ್ತು ನಿರ್ಮಾಣ ವೆಚ್ಚದ ಅಂದಾಜು ಪಟ್ಟಿಯೊಂದಿಗೆ ನಕ್ಷೆಯನ್ನು ನೀಡಲು ಸೂಚಿಸಲಾಯಿತು. 

ಪ್ರಸ್ತುತ ಮಂಜೂರಾಗಿರುವ ರೂ. 35 ಕೋಟಿಗೂ ಅಧಿಕ ಅನುದಾನ ಬೇಕಾಗಬಬಹುದೆಂದು ಅಂದಾಜಿಸಲಾಯಿತು. ಮಾಯಕೊಂಡದ ಗ್ರಾಮಸ್ಥರಾದ ಎಂ.ಎಸ್.ಸಿ ಶಾಸ್ತ್ರಿ ಸೇರಿದಂತೆ ಹಲವು ಗ್ರಾಮಸ್ಥರು, ಸ್ಥಳೀಯರು ಸಭೆಗೆ ಹಾಜರಾಗಿ ರೈಲ್ವೇ ಮೇಲ್ಸೇತುವೆ ನಿರ್ಮಾಣ ಕುರಿತು ತಮ್ಮ ಸಲಹೆ-ಸೂಚನೆಗಳನ್ನು ನೀಡಿದರು.

ನಗರದ ರೈಲ್ವೇ ಸ್ಟೇಷನ್ ಸುಮಾರು 80 ವರ್ಷಕ್ಕೂ ಹಳೆಯದಾಗಿದ್ದು ಹೊಸ ರೈಲ್ವೇ ಸ್ಟೇಷನ್ ಕಟ್ಟಿಸುವ ಕುರಿತು ಕಳೆದ ಸಭೆಯಲ್ಲಿ ಪ್ರಸ್ತಾಪಿಸಲಾಗಿತ್ತು. ಈ ಬಗ್ಗೆ ಏನು ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸದರು ಪ್ರಶ್ನಿಸಿದರು. ಸಹಾಯಕ ವಿಭಾಗೀಯ ಅಭಿಯಂತರರು ಮಾತನಾಡಿ, ಹೊಸ ರೈಲ್ವೇ ಸ್ಟೇಷನ್ ನಿರ್ಮಿಸಲು ಅಂದಾಜು ರೂ.11 ಕೋಟಿ ಅನುದಾನಕ್ಕಾಗಿ ಉನ್ನತ ಅಧಿಕಾರಿಗಳ ಕಚೇರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ನಗರದ ಡಿಸಿಎಂ ಟೌನ್‍ಷಿಪ್ ಬಳಿಯ ಎಲ್ ಸಿ 197 ರ ಆರ್‍ಯುಬಿ ಕೆಲಸ ಜನರಲ್ ಅಲೈನ್‍ಮೆಂಟ್ ಲೈನ್ ಪ್ರಕಾರ ಆಗಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಜರುಗಿಸಿ 61 ಮೀಟರ್ ಜಾಗ ಬಿಟ್ಟು ಮಾಡಬೇಕೆಂದು ಸೂಚಿಸಿದರು. ಹಾಗೂ ಮಾಯಕೊಂಡ ಕಬ್ಬೂರು ರಸ್ತೆಯಲ್ಲಿ ಡಬ್ಲಿಂಗ್ ಕಾಮಗಾರಿಯಿಂದ ಸಾರ್ವಜನಿಕರು ಓಡಾಡುವ ರಸ್ತೆ ಸಂಪೂರ್ಣ ಹಾಳಾಗಿದೆ. ಪೂರಕ ರಸ್ತೆ ಮಾಡಬೇಕೆಂದರು.   

ಶಾಸಕರಾದ ಎಸ್ ಎ ರವೀಂದ್ರನಾಥ, ಕೆ.ಕರುಣಾಕರ ರೆಡ್ಡಿ, ಎಸ್ ವಿ ರಾಮಚಂದ್ರ, ಜಿಲ್ಲಾಧಿಕಾರಿ ಡಿ ಎಸ್ ರಮೇಶ್ ಇತರರು ಇದ್ದರು.   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X