Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜು.19: ವಿವೇಕಾನಂದ ಎಂಜಿನಿಯರಿಂಗ್...

ಜು.19: ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಉದ್ಯೋಗ ಮೇಳ

ವಾರ್ತಾಭಾರತಿವಾರ್ತಾಭಾರತಿ17 July 2018 7:17 PM IST
share

ಪುತ್ತೂರು, ಜು. 17: ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಉದ್ಯೋಗ ಮಾಹಿತಿ ಮತ್ತು ತರಬೇತಿ ಸಂಸ್ಥೆಯ ವತಿಯಿಂದ ಸ್ಥಳೀಯ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಜು.19ರಂದು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ವಿವೇಕ ಉದ್ಯೋಗ ಮೇಳ’ ಆಯೋಜಿಸಲಾಗಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ತಿಳಿಸಿದ್ದಾರೆ.

ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಎಂಜಿನಿಯರಿಂಗ್ ಪದವಿ ಸೇರಿದಂತೆ ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪೂರ್ಣಗೊಳಿಸಿದ ಪುತ್ತೂರು ತಾಲ್ಲೂಕು ಹಾಗೂ ಆಸುಪಾಸಿನ ತಾಲ್ಲೂಕುಗಳ ಯುವಕ ಯುವತಿಯರನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯ ಉದ್ಯೋಗ ಮೇಳವನ್ನು ಸ್ಥಳೀಯ ಆದ್ಯತೆಯೊಂದಿಗೆ ಆಯೋಜಿಸಲಾಗಿದೆ. ರಾಜ್ಯದ 40ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿದ್ದು, ಒಂದು ಸಾವಿರ ಅಭ್ಯರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಈಗಾಗಲೇ 600ಕ್ಕೂ ಹೆಚ್ಚು ಅಭ್ಯರ್ಥಿಗಳು ತಮ್ಮ ಹೆಸರುಗಳನ್ನು ಆನ್‌ಲೈನ್ ಮೂಲಕ ನೋಂದಾಯಿಸಿಕೊಂಡಿದ್ದಾರೆ ಎಂದರು.

ಜು. 19ರಂದು ಬೆಳಿಗ್ಗೆ 10ಗಂಟೆಗೆ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭ ನಡೆಯುವುದು. ಶಾಸಕ ಸಂಜೀವ ಮಠಂದೂರು ಅವರು ಉದ್ಘಾಟಿಸುವರು. ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಬಸವರಾಜ್.ಎಸ್.ಜವುಳಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುವರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು ಅಧ್ಯಕ್ಷತೆ ವಹಿಸುವರು ಎಂದು ಅವರು ತಿಳಿಸಿದರು.

 ವಿವೇಕಾನಂದ ವಿದ್ಯಾವರ್ಧಕ ಸಂಘ ಈ ಹಿಂದೆಯೂ ಅನೇಕ ಬಾರಿ ಉದ್ಯೋಗ ಮೇಳಗಳನ್ನು ಆಯೋಜಿಸಿದೆ. ಕಳೆದ 2017ರ ಜನವರಿ 12ರಂದು ನಡೆದಿದ್ದ ಬೃಹತ್ ಉದ್ಯೋಗ ಮೇಳದಲ್ಲಿ 124 ಕಂಪನಿಗಳು ಭಾಗವಹಿಸಿ 3 ಸಾವಿರಕ್ಕೂ ಅಧಿಕ ಮಂದಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಆ ಪೈಕಿ 584 ಮಂದಿ ಉದ್ಯೋಗ ಅವಕಾಶ ಪಡೆದುಕೊಂಡಿದ್ದರು ಎಂದ ಅವರು ವಿವೇಕಾನಂದ ಮಾಹಿತಿ ತರಬೇತಿ ಕೇಂದ್ರದ ಉದ್ಯೋಗಾಕಾಂಕ್ಷಿಗಳು ತಮ್ಮ ಹೆಸರು ನೋಂದಾಯಿಸಿಕೊಳ್ಳಬುಹುದು. ನೋಂದಾವಣೆ ಮಾಡಿಕೊಂಡ ಅಭ್ಯರ್ಥಿಗಳಿಗೆ ತರಬೇತಿ ಶಿಬಿರಗಳನ್ನು ಹಾಗೂ ಉದ್ಯೋಗ ಮೇಳಗಳನ್ನು ಆಯೋಜಿಸುವ ಕೆಲಸವನ್ನು ವಿವೇಕಾನಂದ ಉದ್ಯೋಗ ಮಾಹಿತಿ ಮತ್ತು ತರಬೇತಿ ಸಂಸ್ಥೆ ಮಾಡುತ್ತಿದೆ ಎಂದು ಡಾ. ಕೆ.ಎಂ.ಕೃಷ್ಣಭಟ್ ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉದ್ಯೋಗ ಮೇಳದ ಸಂಚಾಲಕ ವಿವೇಕ್‌ರಂಜನ್ ಭಂಡಾರಿ, ವಿವೇಕಾನಂದ ಎಂಜಿನಿರಿಂಗ್ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪಿ. ಸತೀಶ್ ರಾವ್, ಉದ್ಯೋಗ ಮಾಹಿತಿ ಕೇಂದ್ರದ ನಿರ್ದೇಶಕ ನಿರೀಕ್ಷಿತ್, ವಿಶೇಷಾಧಿಕಾರಿ ವೆಂಕಟೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X