ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಿ.ಎ.ಮೊಹಿದೀನ್ ರಿಗೆ ಸಂತಾಪ ಸಭೆ
ಮಂಗಳೂರು, ಜು.17: ಕಳೆದ ಮಂಗಳವಾರ ನಿಧನರಾದ ಮಾಜಿ ಸಚಿವ, ಹಿರಿಯ ಮುತ್ಸದ್ದಿ ಬಿ.ಎ.ಮೊಹಿದೀನ್ ಅವರಿಗೆ ಮಂಗಳವಾರ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಸಂತಾಪ ಸಭೆಯು ಡಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್‌ರ ಅಧ್ಯಕ್ಷತೆಯಲ್ಲಿ ಜರುಗಿತು.
ದ.ಕ.ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ ದಿ.ಬಿ.ಎ. ಮೊಹಿದೀನ್ ಅವರು ತನ್ನ ಸಾರ್ವಜನಿಕ ಜೀವನದಲ್ಲಿ ನಾಡಿನ ಉತ್ತಮ ನಾಯಕನಾಗಿ, ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಿ ಮತ್ತು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಸಮಸ್ಯೆಗಳಿಗೆ ಸ್ಪಂದಿಸಿಕೊಂಡು ಜಿಲ್ಲೆ ಮತ್ತು ರಾಜ್ಯದ ಅಭಿವೃದ್ಧಿಗೆ ಹಾಗು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿ ಗಮನ ಸೆಳೆದವರು. ಬಿ.ಎ.ಮೊಹಿದೀನ್ ಅವರ ಶ್ರಮದಿಂದಾಗಿಯೇ ಮುಸ್ಲಿಂ ಸಮುದಾಯದ ಪ್ರತಿಯೊಂದು ಕುಟುಂಬದ ಮಕ್ಕಳು ವಿದ್ಯಾವಂತರಾಗಲು ಸಾಧ್ಯವಾಗಿದೆ ಎಂದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ ಬಿ.ಎ.ಮೊಹಿದೀನ್ ಅವರು ಜಿಲ್ಲೆಗೆ ಮತ್ತು ರಾಜ್ಯಕ್ಕೆ ನೀಡಿದ ಸೇವೆ ಅಪಾರ. ಜನರೊಂದಿಗೆ ಅವರ ಒಡನಾಟವು ಅವಿಸ್ಮರಣೀಯ ಎಂದರು.
ಮಾಜಿ ರಾಜ್ಯಸಭಾ ಸದಸ್ಯ ಬಿ. ಇಬ್ರಾೀಹಿಂ, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಜೆ.ಆರ್.ಲೊಬೊ, ಮುಡಾದ ಮಾಜಿ ಅಧ್ಯಕ್ಷ ಇಬ್ರಾೀಹೀಂ ಕೋಡಿಜಾಲ್ ನುಡಿನಮನ ಸಲ್ಲಿಸಿದರು. ಸಭೆಯಲ್ಲಿ ಮೇಯರ್ ಭಾಸ್ಕರ್ ಕೆ., ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪೀಂಟೊ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂತೋಷ ಕುಮಾರ್ ಶೆಟ್ಟಿ, ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್, ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಆರ್.ಕೆ. ಪೃಥ್ವಿರಾಜ್, ಲೊಕೇಶ್ ಹೆಗ್ಡೆ, ಸಂತೋಷ ಕುಮಾರ್ ಶೆಟ್ಟಿ ಅಸೈಗೊಲಿ, ದಿವಾಕರ ಗೌಡ, ವೆಲೇರಿಯನ್ ಸಿಕ್ವೇರಾ, ಜೆ. ಅಬ್ದುಲ್ ಸಲೀಂ, ಮಾಯಿಲಪ್ಪಸಾಲ್ಯಾನ್, ವಿಶ್ವಾಸ ಕುಮಾರ್ ದಾಸ್, ಪ್ರೇಮನಾಥ ಪಿ.ಬಿ., ನೀರಜ್ ಪಾಲ್, ಸುರೇಂದ್ರ ಕಂಬಳಿ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಉಳ್ಳಾಲ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಎ. ಮುಹಮ್ಮದ್ ಹನೀಫ್ ವಂದಿಸಿದರು.







