Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಸ್ಲಿಮರ ಕುರಿತಂತೆ ನಮ್ಮಲ್ಲಿನ...

ಮುಸ್ಲಿಮರ ಕುರಿತಂತೆ ನಮ್ಮಲ್ಲಿನ ಮನೋಭಾವನೆಗಳನ್ನು ಬದಲಿಸಿಕೊಳ್ಳಬೇಕು: ಜಯಶ್ರೀ ಮೊಗೇರ್

ವಾರ್ತಾಭಾರತಿವಾರ್ತಾಭಾರತಿ17 July 2018 7:54 PM IST
share
ಮುಸ್ಲಿಮರ ಕುರಿತಂತೆ ನಮ್ಮಲ್ಲಿನ ಮನೋಭಾವನೆಗಳನ್ನು ಬದಲಿಸಿಕೊಳ್ಳಬೇಕು: ಜಯಶ್ರೀ ಮೊಗೇರ್

ಭಟ್ಕಳ, ಜು. 17: ಮುಸ್ಲಿಮರ ಕುರಿತಂತೆ ನಮ್ಮಲ್ಲಿನ ಮನೋಭಾವನೆಗಳನ್ನು ಬದಲಿಸಿಕೊಳ್ಳಬೇಕೆಂದು ಉತ್ತರಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ್ ಕರೆ ನೀಡಿದರು.

ಅವರು ಮಂಗಳವಾರ ಮುರುಡೇಶ್ವರದ ಹ್ಯೂಮನ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಬ್ಲಾಂಕೇಟ್ ವಿತರಣೆ ಮಾಡಿ ಮಾತನಾಡುತ್ತಿದ್ದರು. ಹಿಂದೂ-ಮುಸ್ಲಿಮ್ ಮಹಿಳೆಯರು ಸ್ವಸಹಾಯ ಸಂಘಗಳ ಮೂಲಕ ಪರಸ್ಪರ ಬೆರೆತುಕೊಂಡು ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಬಹುತೇಕ ಹಿಂದೂಗಳಲ್ಲಿ ಮುಸ್ಲಿಮರ ಕುರಿತಂತೆ ಬಹಳಷ್ಟು ತಪ್ಪು ಕಲ್ಪನೆಗಳಿದ್ದು ಮಹಿಳೆಯರು ಕೂಡ ಇದಕ್ಕೆ ಹೊರತಾಗಿಲ್ಲಿ. ಈ ನಿಟ್ಟಿನಲ್ಲಿ ನಾವು ನಮ್ಮ ಮನೋಭಾವನೆಗಳನ್ನು ಬದಲಾಯಿಸಿಕೊಂಡು ಎಲ್ಲರೊಂದಿಗೆ ಬೆರೆತು ಸೌಹಾರ್ದ ಸಮಾಜ ನಿರ್ಮಾಣ ಮಾಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪತ್ರಕರ್ತ ಎಂ.ಆರ್.ಮಾನ್ವಿ, ಹಿಂದೂ-ಮುಸ್ಲಿಮ್ ಎಂಬ ನೆಲೆಯಲ್ಲಿ ದೇಶವನ್ನು ಛಿದ್ರಗೊಳಿಸುವ ಷಡ್ಯಂತ್ರವು ಬಹಳ ವ್ಯವಸ್ಥಿತವಾಗಿ ನಡೆಯುತ್ತಿದ್ದು ಇದಕ್ಕೆ ಉತ್ತರವಾಗಿ ನಾವು ಸಹೋದರತೆ, ಮಾನವೀಯತೆ, ಬ್ರಾತೃತ್ವವನ್ನು ಬೆಳೆಸಲು ಪ್ರತಿ ತಂತ್ರ ರೂಪಿಸಬೇಕು ಎಂದರು. ಕೇವಲ ಟೊಪ್ಪಿ, ಜುಬ್ಬಾ ಉಡುಗೆಯೊಂದೆ ಧರ್ಮವಲ್ಲ ಮನುಷ್ಯರ ಸೇವೆ, ಸಮಾಜಿಕ ಕಳಕಳಿಯು ಕೂಡ ಧರ್ಮದ ಭಾಗವೇ ಅಗಿದೆ, ಇಸ್ಲಾಮ್ ಯಾವತ್ತು ಧರ್ಮ,ಜಾತಿ-ಬೇಧಗಳಿಗೆ ಆಸ್ಪದನೆ ನೀಡಿಲ್ಲ. ಎಲ್ಲ ಮನುಷ್ಯರ ಸೇವೆಯೇ ಅದರ ಪ್ರಮುಖ ಗುರಿಯಾಗಿದೆ ಎಂದರು.

ನೀನಾದ ಸಂಸ್ಥೆಯ ಉಮೇಶ ನಾಯ್ಕ ಮುಂಡಳ್ಳಿ ಮಾತನಾಡಿ, ಬೆಳಕಿನ ಮೂಲ ಯಾವುದೇ ಇರಬಹುದು ಆದರ ಅದು ಕತ್ತಲೆಯನ್ನು ಹೊಡೆದೋಡಿಸಿ ಬೆಳಕನ್ನು ನೀಡುತ್ತದೆ. ಸೇವೆಯಿಂದ ತೃಪ್ತಿ ಸಿಗುತ್ತದೆ ಎಂದರು.

ಜಮಾಅತೆ ಇಸ್ಲಾಮಿ ಹಿಂದ್ ಉತ್ತರಕನ್ನಡ ಜಿಲ್ಲಾ ಸಂಚಾಲಕ ತಲ್ಹಾ ಸಿದ್ದಿಬಾಪ ಮಾತನಾಡಿ, ಓರ್ವ ಮುಸ್ಲಿಮನಾದವನು ತನ್ನ ಚಾರಿತ್ರ್ಯವನ್ನು ಹೇಗೆ ಬೆಳೆಸಿಕೊಳ್ಳಬೇಕೆಂಬುದು ಕುರಾನ್ ಹೇಳಿಕೊಟ್ಟಿದೆ. ಪರಸ್ಪರರೊಂದಿಗೆ ಪ್ರೀತಿ, ಸ್ನೇಹದಿಂದ ಜೀವಿಸುವುದೆ ನಮ್ಮ ಗುರಿಯಾಗಬೇಕು ಎಂದರು. ಜಿ.ಪಂ.ಸದ್ಯಸ್ಯೆ ಸಿಂಧೂ ಭಾಸ್ಕರ್ ನಾಯ್ಕ, ವೆಲ್ಫೇರ್ ಟ್ರಸ್ಟ್ ನ ಕ್ರಾಫ್ಟ್ ಶಿಕ್ಷಕಿ ನಯನಾ ನಾಯ್ಕ ಮಾತನಾಡಿದರು.

ಹ್ಯೂಮನ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಡಾ.ಅಮೀನುದ್ದೀನ್ ಗೌಡ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಿಕ್ಷಕ ಇಮ್ತಿಯಾರ್ ಮುಲ್ಲಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ವೇದಿಕೆಯಲ್ಲಿ ತನ್ವಿರುಲ್ ಇಸ್ಲಾಮ್ ಶಿಕ್ಷಣ ಸಂಸ್ಥೆಯ ಝುಬೇರ್ ಮನ್ನಾ, ಗೋಪಾಲ್ ನಾಯ್ಕ, ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X