Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧಾರವಾಹಿಗಳಲ್ಲಿ ಸ್ತ್ರೀಯರಿಗೆ ಅಗೌರವ:...

ಧಾರವಾಹಿಗಳಲ್ಲಿ ಸ್ತ್ರೀಯರಿಗೆ ಅಗೌರವ: ಪ್ರೊ.ಎಸ್.ಜಿ.ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ17 July 2018 10:39 PM IST
share
ಧಾರವಾಹಿಗಳಲ್ಲಿ ಸ್ತ್ರೀಯರಿಗೆ ಅಗೌರವ: ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಹುಳಿಯಾರು,ಜು.17: ಧಾರವಾಹಿಗಳಲ್ಲಿ ಸ್ತ್ರೀಯರಿಗೆ ಅಗೌರವ ಉಂಟಾಗುತ್ತಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಹುಳಿಯಾರು ಕೋಡಿಪಾಳ್ಯದ ಸೇವಾಲಾಲ್ ಸಾಂಸ್ಕೃತಿಕ ಸದನದಲ್ಲಿ ಬೆಂಗಳೂರಿನ ರಂಗಚೇತನ ಸಂಸ್ಕೃತಿ ಕೇಂದ್ರ ಹಾಗೂ ಹುಳಿಯಾರಿನ ಶ್ರೀಮಾತಾ ಚಾರಿಟಬಲ್ ಟ್ರಸ್ಟ್ ಸಹಯೋಗದೊಂದಿಗೆ 3 ದಿನಗಳ ಕಾಲ ಏರ್ಪಡಿಸಿದ್ದ ಚಲನ ಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಸಕ್ತ ದಿನಗಳಲ್ಲಿ ಮೂಡಿ ಬರುತ್ತಿರುವ ಧಾರವಾಹಿಗಳಲ್ಲಿ ಬಹುತೇಕ ಸ್ತ್ರೀ ಪಾತ್ರಗಳನ್ನು ಹೊಟ್ಟೆಕಿಚ್ಚಿನ ಮೊಟ್ಟೆಗಳಾಗಿ, ಒಬ್ಬರಿಗೊಬ್ಬರು ಕಾಲೆಳೆಯುವವರಾಗಿ, ಕುಟುಂಬವನ್ನು ಹೊಡೆಯುವವರಾಗಿ ತೋರಿಸಲಾಗುತ್ತಿದೆ. ಒಟ್ಟಾರೆ ಸ್ತ್ರೀಯರನ್ನು ಕೇಡಿ ಲೇಡಿಗಳನ್ನಾಗಿ ಬಿಂಬಿಸಿ ವೀಕ್ಷಕರಲ್ಲಿ ಕೆಟ್ಟ ಅಭಿರುಚಿ, ಅಮಾನವೀಯ ಆಲೋಚನೆ ಬಿತ್ತುತ್ತಿದ್ದಾರೆ. ಹಾಗಾಗಿಯೇ ಇಂದು ಕೂಡು ಕುಟುಂಬಗಳು ಕಾಣಸಿಗದಾಗಿವೆ. ಸಂಸ್ಕಾರಗಳು ಮರೆಯಾಗುತ್ತಿವೆ ಎಂದರು.

ರಂಗಭೂಮಿಯ ರೀತಿ ಸಿನಿಮಾವೂ ಒಂದು ಶಿಕ್ಷಣವಾಗಿದ್ದು, ಒಂದು ಸಿನಿಮಾ ನೋಡುವುದರಿಂದ 10 ಪುಸ್ತಕಗಳನ್ನು ಓದಿದ ಅನುಭವ ನೀಡುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಫೈಟಿಂಗ್, ಧ್ವಂದಾರ್ಥದ ಸಿನಿಮಾಗಳು ಹೆಚ್ಚಾಗಿ ಕೆಟ್ಟ ಮತ್ತು ಕೀಳು ಮನೋಧರ್ಮವನ್ನು ಪ್ರೇರೇಪಿಸುತ್ತಿವೆ. ಹಾಗಾಗಿ ಮಕ್ಕಳಿಗೆ ತೋರಿಸುವ ಸಿನಿಮಾಗಳಾವುವು ಎನ್ನುವುದನ್ನು ಪೋಷಕರು ಮೊದಲು ನಿರ್ಧರಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಹಳ್ಳಿಹಳ್ಳಿಗಳಲ್ಲಿ ಕಲಾತ್ಮಕ ಸಿನಿಮಾಗಳ ಪ್ರದರ್ಶನಗಳಾಗಬೇಕಿದೆ ಎಂದರು.

ಸಾರ್ವಜನಿಕ ಗ್ರಂಥಾಲಯ ನಿರ್ದೇಶಕ ಡಾ.ಸತೀಶ್‍ ಕುಮಾರ್, ಸಿನಿಮಾ ನಿರ್ಮಾಪಕ ಎಸ್.ಪುಟ್ಟರಾಜು, ಹುಳಿಯಾರು ಗ್ರಾಪಂ ಅಧ್ಯಕ್ಷೆ ಗೀತಾಪ್ರದೀಪ್, ಕೆಂಕೆರೆ ಗ್ರಾಪಂ ಅಧ್ಯಕ್ಷೆ ಆಶಾ ಉಮೇಶ್, ತಾಪಂ ಸದಸ್ಯ ಏಜೆಂಟ್ ಕುಮಾರ್, ಹಿರಿಯ ಸಿನಿಮಾ ಸಹಾಯಕ ನಿರ್ದೆಶಕ ಹುಳಿಯಾರ್ ಮಂಜು, ನಿರ್ದೆಶಕರುಗಳಾದ ಎಸ್.ಆರ್.ನಂಜುಂಡೇಗೌಡ, ಸಿರಿವರರವಿ, ಉಮಾಶಂಕರಸ್ವಾಮಿ, ಕಲಾವಿದ ಗೌಡಿ, ರಂಗಚೇತನ ಸಂಸ್ಕೃತಿ ಕೇಂದ್ರದ ವ್ಯವಸ್ಥಾಪಕ ಧರ್ಮದರ್ಶಿ ತೊಟ್ಟವಾಡಿ ನಂಜುಂಡಸ್ವಾಮಿ, ಮಾತಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಗಂಗಾಧರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X