Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನಲ್ಲಿ ಮಳೆ ಶಾಂತ: ಭಾಗಮಂಡಲದಲ್ಲಿ...

ಕೊಡಗಿನಲ್ಲಿ ಮಳೆ ಶಾಂತ: ಭಾಗಮಂಡಲದಲ್ಲಿ ತಗ್ಗಿದ ಪ್ರವಾಹ

ವಾರ್ತಾಭಾರತಿವಾರ್ತಾಭಾರತಿ18 July 2018 7:09 PM IST
share
ಕೊಡಗಿನಲ್ಲಿ ಮಳೆ ಶಾಂತ: ಭಾಗಮಂಡಲದಲ್ಲಿ ತಗ್ಗಿದ ಪ್ರವಾಹ

ಮಡಿಕೇರಿ, ಜು.18: ಕೊಡಗಿನಲ್ಲಿ ಗಾಳಿ, ಮಳೆ ಶಾಂತವಾಗಿದ್ದರೂ ಮನೆ ಹಾಗೂ ರಸ್ತೆಗಳು ಹಾನಿಗೊಳಗಾಗುತ್ತಿರುವ ಘಟನೆಗಳು ಮುಂದುವರಿದಿದೆ. ಭಾಗಮಂಡಲದಲ್ಲಿ ಮಳೆ ಕಡಿಮೆಯಾಗಿದ್ದು, ಪ್ರವಾಹ ತಗ್ಗಿದೆ. ಗ್ರಾಮಸ್ಥರು ಹಾಗೂ ಪ್ರವಾಸಿಗರ ಸಂಚಾರಕ್ಕೆ ಈ ಭಾಗದ ರಸ್ತೆಗಳು ಮುಕ್ತವಾಗಿದೆ.

ಮಡಿಕೇರಿಯ ಮಂಗಳೂರು ರಸ್ತೆಯ ಕಾಟಕೇರಿ ಜಂಕ್ಷನ್ ಬಳಿ ರಸ್ತೆಯ ಒಂದು ಪಾರ್ಶ್ವದಲ್ಲಿ ಮಂಗಳವಾರ ರಾತ್ರಿ ಭಾರೀ ಪ್ರಮಾಣದ ಬಿರುಕು ಮೂಡಿದೆ. ಕೆಲವು ದಿನಗಳ ಹಿಂದೆ ಇದೇ ಮಾರ್ಗದ ಮತ್ತೊಂದು ಸ್ಥಳದಲ್ಲಿ ಭಾರೀ ಬಿರುಕು ಕಂಡು ಬಂದು ಆತಂಕ ಎದುರಾಗಿತ್ತು. ಇದೀಗ ಇದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗದೊಂದು ಬಿರುಕು ಕಂಡು ಬಂದಿದ್ದು, ರಸ್ತೆಯ ಬದಿಯಲ್ಲೇ ಕಂದಕವಿದ್ದು, ನೀರಿನ ಹರಿವೂ ಇದೆ. ಮಳೆಯ ಪ್ರಮಾಣ ಹೆಚ್ಚಿ ರಸ್ತೆ ಕುಸಿದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆ ಎದುರಾಗಲಿದೆ. ಈಗಾಗಲೆ ಬಿರುಕು ಬಿಟ್ಟ ರಸ್ತೆಯ ಭಾಗದಲ್ಲಿ ಬ್ಯಾರಿಕೇಡ್‍ಗಳನ್ನು ಅಳವಡಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಳೆಯ ನಡುವೆ ದುರಸ್ತಿ ಕಾರ್ಯವನ್ನು ಸಮರ್ಪಕವಾಗಿ ನಡೆಸಲು ಸಾಧ್ಯವಾಗದಿರುವುದು, ಆಡಳಿತ ವ್ಯವಸ್ಥೆಗೆ ದೊಡ್ಡ ಹಿನ್ನಡೆಯಾಗಿದೆ. ಇದೀಗ ಬಿರುಕು ಬಿಟ್ಟ ಸ್ಥಳದಲ್ಲಿ ಏಕ ಕಾಲಕ್ಕೆ ರಸ್ತೆಯ ಎರಡು ಬದಿಗಳಲ್ಲಿ ವಾಹನ ಚಾಲನೆಗೆ ಅವಕಾಶವಿಲ್ಲದಂತಾಗಿದೆ. 

ಮಡಿಕೇರಿ ನಗರದ ಕೆಲವು ಬಡಾವಣೆಗಳಲ್ಲಿ ಮನೆ ಬಿರುಕು ಕಾಣಿಸಿಕೊಂಡಿದೆ. ಡಿಎಆರ್ ವಸತಿ ಗೃಹದ ಬಳಿ ಮಕ್ಬುಲ್ ಹಾಗೂ ಹನೀಫ್ ಎಂಬುವವರ ಮನೆಗಳು ಕುಸಿದು ಬಿದ್ದಿವೆ. ಸ್ಥಳಕ್ಕೆ ನಗರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಎಸ್‍ಡಿಪಿಐ ನಗರಾಧ್ಯಕ್ಷ ಕಲೀಲ್ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಶ್ರಮದಾನದ ಮೂಲಕ ಮನೆ ಕಳೆದುಕೊಂಡವರಿಗೆ ನೆರವಾದರು.

ಮಕ್ಕಂದೂರು ಗ್ರಾಮದಲ್ಲಿ ಮಂಜುನಾಥ್ ಎಂಬುವವರಿಗೆ ಸೇರಿದ ಮನೆಯಲ್ಲಿ ಜಲ ಉಕ್ಕುತ್ತಿರುವುದರಿಂದ ಮನೆಯಲ್ಲಿ ಬಿರುಕು ಕಾಣಿಸಿಕೊಂಡು ಕುಸಿಯುವ ಹಂತ ತಲುಪಿದೆ. ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗೆ ಉರುಳಿದ ಪರಿಣಾಮ ಜಿಲ್ಲೆಯ ಗ್ರಾಮೀಣ ಪ್ರದೇಶದ ಬಹುತೇಕ ಪ್ರದೇಶಗಳಲ್ಲಿ ಕಾರ್ಗತ್ತಲು ಮುಂದುವರಿದಿದೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಚೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮಳೆ ವಿವರ 
ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 36.94 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 29.37 ಮಿ.ಮೀ.ಮಳೆಯಾಗಿತ್ತು, ಜನವರಿಯಿಂದ ಇಲ್ಲಿಯವರೆಗಿನ ಮಳೆ 2236.82 ಮಿ.ಮೀ ಮಳೆಯಾಗಿದೆ, ಕಳೆದ ವರ್ಷ ಇದೇ ಅವಧಿಯಲ್ಲಿ 914.80 ಮಿ.ಮೀ ಮಳೆಯಾಗಿತ್ತು.                         

share
ವಾರ್ತಾಭಾರತಿ
ವಾರ್ತಾಭಾರತಿ
Next Story
X