ಕೊಡಗು: ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಪ್ರವೀಣ್ ಕುಮಾರ್ ಅಧಿಕಾರ ಸ್ವೀಕಾರ

ಮಡಿಕೇರಿ, ಜು.18: ಕೊಡಗು ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಜಿ.ಎಲ್.ಪ್ರವೀಣ್ ಕುಮಾರ್ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಡಾ.ಜಿ.ಎಲ್.ಪ್ರವೀಣ್ ಕುಮಾರ್ ಅವರು ಈ ಹಿಂದೆ ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ, ಸಾಗರ ಉಪ ವಿಭಾಗದಲ್ಲಿ ಉಪ ವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
Next Story





