Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ:...

ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ: ಸಿಎಂ ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ18 July 2018 9:11 PM IST
share
ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ: ಸಿಎಂ ಎಚ್.ಡಿ.ಕುಮಾರಸ್ವಾಮಿ

ಹೊಸದಿಲ್ಲಿ, ಜು.18: ಕೇಂದ್ರ ಸರಕಾರದ ವಿವಿಧ ಇಲಾಖೆಯ ಸಚಿವರೊಂದಿಗೆ ನಡೆಸಿದ ಮಾತುಕತೆಯ ಫಲವಾಗಿ ಸುಮಾರು 2500 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಅನುದಾನವನ್ನು ಪಡೆದುಕೊಳ್ಳುವಲ್ಲಿ ಮತ್ತು ವಿವಿಧ ಯೋಜನೆಗಳಿಗೆ ಅನುಮತಿ ದೊರಕಿಸಿಕೊಳ್ಳುವಲ್ಲಿ ತಮ್ಮ ಎರಡು ದಿನಗಳ ಹೊಸದಿಲ್ಲಿ ಭೇಟಿಯು ಸಂಪೂರ್ಣವಾಗಿ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಣ್ಣಿಸಿದ್ದಾರೆ.

ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯದ ಸಂಸದರು ಮತ್ತು ರಾಜ್ಯಸಭಾ ಸದಸ್ಯರೊಂದಿಗೆ ಚರ್ಚಿಸುವ ಹಿನ್ನೆಲೆಯಲ್ಲಿ ಹೊಸದಿಲ್ಲಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ, ಈ ವೇಳೆಯಲ್ಲಿ ಕೇಂದ್ರ ಸರಕಾರದ ಆಹಾರ ಮತ್ತು ನಾಗರಿಕರ ಸರಬರಾಜು, ಭೂ ಸಾರಿಗೆ ಮತ್ತು ಜಲಸಂಪನ್ಮೂಲ, ಕೃಷಿ, ರೈಲ್ವೆ ಮತ್ತು ಕಲ್ಲಿದ್ದಲು ಹಾಗೂ ರಕ್ಷಣಾ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು.

ಬುಧವಾರ ಹೊಸದಿಲ್ಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಭೇಟಿಯ ವೇಳೆ ರಾಜ್ಯದ ಕೋರಿಕೆಗಳಿಗೆ ಎಲ್ಲ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಸಂತೋಷ ತಂದಿದೆ. ಹಾಗೆಯೇ, ಸಚಿವರೊಂದಿಗೆ ನಡೆಸಿದ ಮಾತುತೆಯೂ ಫಲಪ್ರದವಾಗಿತ್ತು ಎಂದರು.
ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮ್ ವಿಲಾಸ್‌ ಪಾಸ್ವಾನ್ ಅವರೊಂದಿಗೆ ಚರ್ಚಿಸಿದ ವೇಳೆ 2014 ರಿಂದ ಇಂದಿನವರೆಗೆ ರಾಜ್ಯಕ್ಕೆ ಬಿಡುಗಡೆ ಯಾಗಬೇಕಿದ್ದ ಬೆಂಬಲ ಬೆಲೆಯ ಬಾಕಿ ಮೊತ್ತ 954 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಆದೇಶ ನೀಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ರಾಜ್ಯದಲ್ಲಿ 85 ಲಕ್ಷ ಲೀಟರ್‌ಗಳಷ್ಟು ಹಾಲು ಉತ್ಪಾದನೆಯಾಗುತ್ತಿದ್ದು, ರಾಜ್ಯದ ಹಲವಾರು ಜಿಲ್ಲೆಗಳಲ್ಲಿರುವ ಜಿಲ್ಲಾ ಹಾಲು ಉತ್ಪಾದಕರ ಸಂಘಗಳಲ್ಲಿ ಮೆಗಾ ಡೈರಿಗಳನ್ನು ಸ್ಥಾಪಿಸಬೇಕೆನ್ನುವ ರಾಜ್ಯದ ಉದ್ದೇಶವನ್ನು ಮೆಚ್ಚಿಕೊಂಡ ಕೃಷಿ ಸಚಿವ ರಾಧಾ ಮೋಹನ್‌ಸಿಂಗ್, ಇದಕ್ಕಾಗಿ 900 ಕೋಟಿ ರೂ.ಗಳ ಅನುದಾನ ಬಿಡುಗಡೆಗೆ ಸಮ್ಮತಿ ಸೂಚಿಸಿದ್ದಾರೆ. ಈ ಅನುದಾನದಲ್ಲಿ ಹಾಸನ, ಕೋಲಾರ ಮತ್ತು ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೆಗಾ ಡೈರಿಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ರಾಜ್ಯದಲ್ಲಿ ಮಾರುಕಟ್ಟೆಗಳನ್ನು ಉನ್ನತೀಕರಿಸಲು ಅಗತ್ಯವಿರುವ ಅನುದಾನ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಣ್ಣು ಪರೀಕ್ಷಾ ಕೇಂದ್ರಗಳ ಸ್ಥಾಪನೆ, ಆವರ್ತ ನಿಧಿ, ಬೆಂಬಲ ಬೆಲೆ ಹಾಗೂ ಅಡಿಕೆ ಮತ್ತು ತೆಂಗು ಬೆಳೆಗಾರರ ರಕ್ಷಣೆಗಾಗಿ ಅಗತ್ಯವಿರುವ ಕ್ರಮಗಳಿಗೆ ಅನುದಾನವನ್ನು ಒದಗಿಸುವ ಬಗ್ಗೆ ಕೃಷಿ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ಹೇಳಿದರು.

ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ರಾಜ್ಯದಲ್ಲಿರುವ ಪ್ರಮುಖ ಹೆದ್ದಾರಿಗಳ ನಿರ್ಮಾಣಕ್ಕೆ ಇರುವ ಅಡಚಣೆಗಳನ್ನು ಸರಕಾರವು ನಿವಾರಿಸಿದ್ದು, ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ರಾಜ್ಯ ಸರಕಾರ ಕೈಗೊಂಡಿದೆ ಎಂದು ಕುಮಾರಸ್ವಾಮಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಕೊಡುವಂತೆ ಕೇಂದ್ರ ಭೂಸಾರಿಗೆ ಮತ್ತು ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿಗೆ ಮಾಡಿರುವ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಲ್ಲದೆ, ನದಿ ನೀರು ಹಂಚಿಕೆ ಪ್ರಾಧಿಕಾರ ಮತ್ತು ಮೇಕೆದಾಟು ವಿಷಯಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಮೆಟ್ರೋ ವಿಸ್ತರಣೆ ಸಂದರ್ಭದಲ್ಲಿ ನಿಲ್ದಾಣ ಕಾಮಗಾರಿಗಳ ಪೈಕಿ ಕೆಲವೊಂದು ಪ್ರದೇಶದಲ್ಲಿ ಅದು ರಕ್ಷಣಾ ಇಲಾಖೆಯ ವ್ಯಾಪ್ತಿಗೆ ಒಳಪಡುತ್ತದೆ. ಈ ಬಗ್ಗೆ ಅವರಿಂದ ಅನುಮತಿ ಪಡೆದುಕೊಳ್ಳುವ ಸಂಬಂಧವಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚಿಸಿ, ಅನುಮತಿ ಪಡೆದುಕೊಳ್ಳುವ ಸಂಬಂಧ ಅಗತ್ಯವಿರುವ ನೆರವನ್ನು ನೀಡುವುದಾಗಿ ತಿಳಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಕೊಂಕಣ ರೈಲ್ವೆಯಲ್ಲಿರುವ ಪೊಲೀಸ್ ಬಲದ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಹಾಲಿ ಇರುವ 900 ಹುದ್ದೆಗಳ ಜೊತೆಗೆ ಸರಕಾರಿ ರೈಲ್ವೆ ಪೊಲೀಸ್ ದಳದ(ಜಿಆರ್‌ಪಿ) ಸಂಖ್ಯಾಬಲಕ್ಕೆ ಹೆಚ್ಚುವರಿಯಾಗಿ 919ಕ್ಕೆ ಏರಿಕೆ ಮಾಡುವಂತೆ ಮತ್ತು ರಾಜ್ಯದಲ್ಲಿ ಹೊಸ ರೈಲು ಮಾರ್ಗಗಳನ್ನು ನಿರ್ಮಿಸಲು ಆದ್ಯತೆ ನೀಡುವಂತೆ ಕೇಂದ್ರ ರೈಲ್ವೆ ಮತ್ತು ಕಲ್ಲಿದ್ದಲು ಸಚಿವ ಪಿಯೂಷ್ ಗೋಯೆಲ್ ಅವರನ್ನು ಭೇಟಿ ಮಾಡಿ ಮನವರಿಕೆ ಮಾಡಿದ್ದು, ಈ ವೇಳೆ ಅವರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಮುಖ್ಯಮಂತ್ರಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X