Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಠ್ಯೇತರ ಪುಸ್ತಕಗಳ ಓದು...

ಪಠ್ಯೇತರ ಪುಸ್ತಕಗಳ ಓದು ಬರಹಗಾರನನ್ನಾಗಿಸಿತು: ಲೇಖಕ ಯೋಗೇಶ್ ಮಾಸ್ಟರ್

ವಾರ್ತಾಭಾರತಿವಾರ್ತಾಭಾರತಿ18 July 2018 9:39 PM IST
share
ಪಠ್ಯೇತರ ಪುಸ್ತಕಗಳ ಓದು ಬರಹಗಾರನನ್ನಾಗಿಸಿತು: ಲೇಖಕ ಯೋಗೇಶ್ ಮಾಸ್ಟರ್

ಬೆಂಗಳೂರು, ಜು.18: ಬಾಲ್ಯದಲ್ಲಿಯೆ ಪಠ್ಯೇತರ ಪುಸ್ತಕಗಳ ಓದು ಬರಹಗಾರನಾಗಿ ರೂಪಗೊಳ್ಳಲು ಸಾಧ್ಯವಾಯಿತು ಎಂದು ಲೇಖಕ ಯೋಗೇಶ್ ಮಾಸ್ಟರ್ ತಮ್ಮ ಓದಿನ ಅನುಭವವನ್ನು ಹಂಚಿಕೊಂಡರು.

ಬುಧವಾರ ಕನ್ನಡ ಪುಸ್ತಕ ಪ್ರಾಧಿಕಾರ ನಗರದ ಅಲ್ಲಮ ಕಲಾಶಾಲೆ ಆವರಣದಲ್ಲಿ ಆಯೋಜಿಸಿದ್ದ ಅಚ್ಚುಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಹಾಗೂ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು.

ಶಾಲಾ ದಿನಗಳಲ್ಲಿಯೆ ಮಂಕುತಿಮ್ಮನ ಕಗ್ಗ, ಶರಣರ ವಚನಗಳು ಸೇರಿದಂತೆ ಹಲವು ಪಠ್ಯೇತರ ಪುಸ್ತಕಗಳನ್ನು ಓದಲು ಪ್ರಾರಂಭಿಸಿದ್ದೆ. ಈ ಓದಿನ ಫಲವಾಗಿ 7ನೆ ತರಗತಿಯಲ್ಲಿಯೆ ಕವನಗಳನ್ನು ಬರೆದೆ. 10ನೆ ತರಗತಿಯ ವೇಳೆಗೆ ಕವನ ಸಂಕಲನವನ್ನು ಬಿಡುಗಡೆ ಮಾಡಲು ಸಾಧ್ಯವಾಯಿತು ಎಂದು ಅವರು ತಿಳಿಸಿದರು.

ಶಿಕ್ಷಕರು ಹಾಗೂ ಪೋಷಕರು ತಮ್ಮ ಶಾಲೆ ಹಾಗೂ ಮನೆಗಳಲ್ಲಿ ಓದುವಂತಹ ವಾತಾವರಣವನ್ನು ನಿರ್ಮಿಸಬೇಕು. ಮೊದಲಿಗೆ ಮಕ್ಕಳಿಗೆ ತಪ್ಪಿಲ್ಲದೆ ಓದುವುದು ಹಾಗೂ ಬರೆಯುವುದನ್ನು ಕಲಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ಮೂಡುವಂತೆ ಮಾಡಬೇಕು. ನಂತರ ಪುಸ್ತಕಗಳು ಮಕ್ಕಳಲ್ಲಿ ಕೈಗೆ ಸಿಗುವಂತಾದರೆ ತಾವಾಗಿಯೆ ಓದಲು ಉತ್ಸುಕರಾಗುತ್ತಾರೆ ಎಂದು ಅವರು ಅಭಿಪ್ರಾಯಿಸಿದರು.

ಪೋಷಕರು ಹಾಗೂ ಶಿಕ್ಷಕರು ಮಕ್ಕಳಿಗೆ ಆದರ್ಶಗಳ ಬೋಧನೆಗಿಂತ ಹಾಗೆ ನಡೆದುಕೊಳ್ಳಬೇಕು. ಇದು ಮಕ್ಕಳ ಮೇಲೆ ಪ್ರಭಾವಬೀರುತ್ತದೆ. ಪೋಷಕರು ಮತ್ತು ಶಿಕ್ಷಕರು ಕಲಿಕೆಯಲ್ಲಿ ನಿರತರಾಗಿದ್ದಾಗ ಮಾತ್ರ ಮಕ್ಕಳು ತಮ್ಮ ಹಾದಿಯಲ್ಲಿ ಬರುತ್ತಾರೆ ಎಂದು ಅವರು ತಿಳಿಸಿದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ವಸುಂಧರಾ ಭೂಪತಿ ಮಾತನಾಡಿ, ಶಾಲೆಗಳಲ್ಲಿ ಪುಸ್ತಕಗಳ ಕುರಿತು ಆಸಕ್ತಿ ಹಾಗೂ ಪ್ರೀತಿ ಮೂಡಿಸುವಂತಹ ವಾತಾವರಣ ಮೂಡಿಸುವಂತಹ ಕೆಲಸವಾಗಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿ ಸರಕಾರಿ ಶಾಲೆಯಲ್ಲಿ ಪುಸ್ತಕ ಓದಿನ ಅಭಿರುಚಿ ಹೆಚ್ಚಿಸುವಂತಹ ಕಾರ್ಯಕ್ರಮಗಳನ್ನು ರೂಪಿಸಬೇಕಾಗಿದೆ ಎಂದು ಆಶಿಸಿದರು.

ಶಾಲೆಯ ವಿದ್ಯಾರ್ಥಿಗಳು ತಾವು ಓದಿದ ಪುಸ್ತಕಗಳ ಕುರಿತು ಮಾತನಾಡಿದರು. ಈ ವೇಳೆ ರಂಗಕರ್ಮಿ ಕೆ.ವಿ.ನಾಗರಾಜು, ಶಾಲೆಯ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X