Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೀನುಗಾರರಿಗೆ ಡೆಲಿವರಿ ಪಾಯಿಂಟ್‌ನಲ್ಲಿ...

ಮೀನುಗಾರರಿಗೆ ಡೆಲಿವರಿ ಪಾಯಿಂಟ್‌ನಲ್ಲಿ ಡೀಸೆಲ್: ಸಚಿವ ನಾಡಗೌಡ

ವಾರ್ತಾಭಾರತಿವಾರ್ತಾಭಾರತಿ18 July 2018 9:52 PM IST
share

ಮಲ್ಪೆ, ಜು.18: ಯಾಂತ್ರಿಕ ಮೀನುಗಾರಿಕೆ ದೋಣಿಗಳಿಗೆ ಈ ಹಿಂದೆ ಡೆಲಿವರಿ ಪಾಯಿಂಟ್‌ನಲ್ಲಿ ನೀಡುತ್ತಿದ್ದ ಮಾರಾಟ ತೆರಿಗೆ ರಹಿತ ಡೀಸೆಲ್‌ನ್ನು ಈಗ ಯಾವ ಕಾರಣಕ್ಕೆ ಬದಲಾವಣೆಗೊಳಿಸಲಾಗಿದೆ ಎಂಬುವುದರ ಬಗ್ಗೆ ಇಲಾಖೆಯ ಕಾರ್ಯದರ್ಶಿಗಳ ಜತೆಯಲ್ಲಿ ಚರ್ಚಿಸಿ, ಅಗತ್ಯ ಬಿದ್ದರೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಹಿಂದಿನಂತೆ ಡೆಲಿವರಿ ಪಾಯಿಂಟ್ ನಲ್ಲಿಯೇ ತೆರಿಗೆ ರಹಿತ ಡೀಸೆಲ್ ಕಲ್ಪಿಸುವ ಪ್ರಯತ್ನ ಮಾಡಲಾಗುವುದು ಎಂದು ರಾಜ್ಯ ಪಶುಸಂಗೋಪನಾ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.

ಬುಧವಾರ ಮಲ್ಪೆಮೀನುಗಾರಿಕಾ ಬಂದರಿಗೆ ಭೇಟಿ ನೀಡಿ ಬಳಿಕ ಮಲ್ಪೆ ಮೀನುಗಾರರ ಸಂಘದ ಸಭಾಭವನದಲ್ಲಿ ಮೀನುಗಾರರ ವಿವಿಧ ಬೇಡಿಕೆಗಳ ಮನವಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.

ಮಲ್ಪೆಬಾಪುತೋಟದ ಬಳಿ ಇರುವ ಸ್ಲೀಪ್‌ವೇ ನಿರ್ವಹಣೆ ಮಾಡುವ ಬಗ್ಗೆ ಕಡತಗಳನ್ನು ಪರಿಶೀಲನೆ ನಡೆಸಿ ಮೀನುಗಾರ ಸಂಘಕ್ಕೆ ನಿರ್ವಹಣೆಗೆ ಅವಕಾಶ ಮಾಡಿ ಕೊಡಲಾಗುವುದು ಎಂದರು.

ಬಡ ಮೀನುಗಾರ ಮಹಿಳೆಯರಿಗೆ ಬಡ್ಡಿ ರಹಿತವಾಗಿ 50ಸಾವಿರ ರೂ.ವರೆಗೆ ಸಾಲ ನೀಡುವ ತೀರ್ಮಾನ ಕೈಗೊಳ್ಳಲಾಗುತ್ತಿದೆ. ಇದನ್ನು ಗುಂಪಿಗೆ ಅಥವಾ ವೈಯಕ್ತಿಕವಾಗಿ ಕೊಡುವ ಬಗ್ಗೆ ತಮ್ಮ ಸಲಹೆ ಮೇರೆಗೆ ನಿರ್ಧರಿಸಲಾಗುತ್ತದೆ. ಕುಮಾರಸ್ವಾಮಿ ಸರಕಾರ ಬಡವರ,ಮೀನುಗಾರರ ಪರವಾಗಿದ್ದು ಮೀನುಗಾರರ ಎಲ್ಲಾ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಮುಂದಿನ ದಿನಗಳಲ್ಲಿ ಒಮ್ಮೆಲೆ ಸೀಮೆಎಣ್ಣೆಯ ಸಮಸ್ಯೆ ಎದುರಾದರೆ ಮೀನುಗಾರರಿಕೆ ಸಮಸ್ಯೆ ಉಂಟಾಗಬಾರದು ಎಂಬ ನೆಲೆಯಲ್ಲಿ ಬದಲಿ ವ್ಯವಸ್ಥೆಯಾಗಿ ಎಲೆಕ್ಟ್ರಿಕ್ ದೋಣಿಗಳನ್ನು ಪ್ರಾಯೋಗಿಕವಾಗಿ ಸಿದ್ದಪಡಿಸಲಾಗಿದೆ. ಈ ಪ್ರಯೋಗ ಯಶಸ್ವಿಯಾದರೆ ಮುಂದೆ ನಿರ್ಧಾರವನ್ನು ತೆಗೆದುಕೊಳ್ಳ ಲಾಗುತ್ತದೆ. ಆಲ್ಲಿಯವರೆಗೆ ಮೀನುಗಾರರಿಗೆ ಸೀಮೆಎಣ್ಣೆಯ ಸಮಸ್ಯೆ ಆಗದು ಎಂದರು.

ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ಮೀನುಗಾರರಿಗೆ ಕೊಡುವ ಡೀಸೆಲ್ ಪ್ರಮಾಣವನ್ನು ವಾರ್ಷಿಕ 1.5 ಲಕ್ಷ ಕಿ. ಲೀಟರ್‌ನಿಂದ 2 ಲಕ್ಷ ಕಿ.ಲೀ.ಗೆ ಏರಿಸುವ ಬಗ್ಗೆ, ಸಾಲ ಮನ್ನಾ ಯೋಜನೆಯನ್ನು ಮೀನುಗಾರರಿಗೂ ನೀಡುವಂತೆ, ಮೀನುಗಾರ ಮಹಿಳೆಯರಿಗೆ ನೀಡುವ ಒಂದು ಲಕ್ಷ ರೂ. ವರೆಗಿನ ಸಾಲವನ್ನು ಬಡ್ಡಿ ರಹಿತವಾಗಿ ನೀಡುವಂತೆ, ಒಣಮೀನು ಮಾರಾಟಗಾರರಿಗೆ ಜಾಗ ಒದಗಿಸುವುದು ಸೇರಿದಂತೆ ಮೀನುಗಾರರ ವಿವಿಧ ಸಮಸ್ಯೆ, ಬೇಡಿಕೆಗಳ ಕುರಿತು ಸಚಿವರ ಗಮನ ಸೆಳೆದರು.

ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್, ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ವಿವಿಧ ಮೀನುಗಾರಿಕಾ ಸಂಘಟನೆಗಳ ಪದಾಧಿಕಾರಿಗಳು, ಮೀನುಗಾರಿಕಾ ನಿರ್ದೇಶಕ ಹೆಚ್. ಎಸ್. ವೀರಪ್ಪ ಗೌಡ, ಜಂಟಿ ನಿರ್ದೇಶಕ ದೊಡ್ಡಮನಿ, ಉಪ ನಿರ್ದೇಶಕ ಪಾರ್ಶ್ವನಾಥ್, ಸಚಿವರ ಆಪ್ತ ಕಾರ್ಯದರ್ಶಿ ವಿರೂಪಾಕ್ಷ, ಮಲ್ಪೆಯ ಮೀನುಗಾರ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X