Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಿರುಪತಿ ದೇವಸ್ಥಾನದ ವಿದೇಶಿ ಹಣ ‘ಏಳು...

ತಿರುಪತಿ ದೇವಸ್ಥಾನದ ವಿದೇಶಿ ಹಣ ‘ಏಳು ಬೆಟ್ಟಗಳಿಂದ ಏಳು ದೇಶಗಳಿಗೆ’ !

ವಾರ್ತಾಭಾರತಿವಾರ್ತಾಭಾರತಿ18 July 2018 9:57 PM IST
share
ತಿರುಪತಿ ದೇವಸ್ಥಾನದ ವಿದೇಶಿ ಹಣ ‘ಏಳು ಬೆಟ್ಟಗಳಿಂದ ಏಳು ದೇಶಗಳಿಗೆ’ !

ಹೈದರಾಬಾದ್, ಜು.18: ಭಾರತದ ಅತ್ಯಂತ ಶ್ರೀಮಂತ ದೇವಸ್ಥಾನ ಎನಿಸಿಕೊಂಡಿರುವಆಂಧ್ರಪ್ರದೇಶದ ತಿರುಮಲ ತಿರುಪತಿ ವೆಂಕಟರಮಣ ದೇವಸ್ಥಾನದಲ್ಲಿ ಭಕ್ತಾದಿಗಳು ಕಾಣಿಕೆ ರೂಪದಲ್ಲಿ ಅರ್ಪಿಸಿರುವ ವಿದೇಶಿ ನಾಣ್ಯಗಳ ವಿಲೇವಾರಿ ಸಮಸ್ಯೆಗೆ ಕಡೆಗೂ ಪರಿಹಾರ ದೊರಕಿದೆ. ಆಂಧ್ರ ಸರಕಾರದ ಸಹಾಯ ಪಡೆದಿರುವ ತೆಲುಗು ಅನಿವಾಸಿ ಭಾರತೀಯರ ಸಂಘಟನೆ ‘ಎಪಿ ಅನಿವಾಸಿ ತೆಲುಗು ಸಂಘ(ಎಪಿಎನ್‌ಆರ್‌ಟಿಎಸ್)’ ಇದೀಗ ವೆಂಕಟರಮಣ ದೇವಸ್ಥಾನದಲ್ಲಿ ಸಂಗ್ರಹಗೊಂಡಿರುವ ನಾಣ್ಯಗಳ ನೈಜ ವೆಚ್ಚವನ್ನು ಪಾವತಿಸಿ ಖರೀದಿಸಲಿದೆ.

ವಿದೇಶದ ಕರೆನ್ಸಿ ನೋಟುಗಳನ್ನು ಆರ್‌ಬಿಐಗೆ ಸಲ್ಲಿಸಿ ಭಾರತೀಯ ರೂಪಾಯಿಗೆ ವಿನಿಮಯ ಮಾಡಿಕೊಳ್ಳಬಹುದು. ಆದರೆ ನಾಣ್ಯಗಳ ಮುಖಬೆಲೆ ಕಡಿಮೆಯಾಗಿರುವ ಕಾರಣ ಇವನ್ನು ವಿನಿಮಯ ಮಾಡಿಕೊಳ್ಳಲು ಸಮಸ್ಯೆಯಾಗಿದೆ. ಆರ್‌ಬಿಐ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ ಎಂದು ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಮ್)ಯ ಅಧಿಕಾರಿಗಳು ತಿಳಿಸಿದ್ದಾರೆ. ಹೀಗೆ ರಾಶಿ ಬಿದ್ದಿರುವ ವಿದೇಶಿ ನಾಣ್ಯಗಳನ್ನು ವಿಲೇವಾರಿ ಮಾಡಲು ಬೇರೆ ದಾರಿ ಕಾಣದೆ ಈ ನಾಣ್ಯಗಳನ್ನು ಅವುಗಳ ಮೂಲ ದೇಶಗಳಿಗೆ ಮರಳಿಸುವ ಬಗ್ಗೆಯೂ ಟಿಟಿಡಿ ಅಧಿಕಾರಿಗಳು ಚಿಂತನೆ ನಡೆಸಿದ್ದರು. ಆದರೆ ನಾಣ್ಯಗಳ ಬೆಲೆಗಿಂತ ಸಾಗಾಟ ದರ ಅಧಿಕವಾಗುವ ಕಾರಣ ಈ ಯೋಜನೆ ಕೈಬಿಡಲಾಗಿದೆ.

ದೇವಸ್ಥಾನದಲ್ಲಿ ಸಂಗ್ರಹವಾಗಿರುವ ವಿದೇಶಿ ನಾಣ್ಯಗಳ ಬೆಲೆ ಸುಮಾರು ಒಂದೂವರೆ ಕೋಟಿ ರೂ.ಆಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿರುಮಲ ತಿರುಪತಿ ದೇವಸ್ಥಾನದ ಕಾಣಿಕೆ ಹುಂಡಿಯಿಂದ ಬಂದಿರುವ ನಾಣ್ಯ ಪವಿತ್ರ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ‘ಏಳು ಬೆಟ್ಟಗಳಿಂದ ಏಳು ದೇಶಗಳಿಗೆ’ ಎಂಬ ಪರಿಕಲ್ಪನೆಯಡಿ ಏಳು ಬೆಟ್ಟಗಳ ಒಡೆಯನೆಂಬ ಪ್ರತೀತಿಯ ವೆಂಕಟರಮಣ ದೇವಸ್ಥಾನದಿಂದ ಪಡೆದ ನಾಣ್ಯಗಳನ್ನು ದೇವಸ್ಥಾನದ ಪವಿತ್ರ ಬಟ್ಟೆಯಿಂದ ತಯಾರಿಸಲಾದ ಸಣ್ಣ ಚೀಲದಲ್ಲಿ 20 ಅಮೆರಿಕನ್ ಡಾಲರ್ ಮೊತ್ತಕ್ಕೆ ಸಮಾನವಾದ ನಾಣ್ಯಗಳನ್ನು ತುಂಬಿ, ವಿಶ್ವದಾದ್ಯಂತದ ಆಸಕ್ತರಿಗೆ ಕೊರಿಯರ್ ಮೂಲಕ ತಲುಪಿಸಲಾಗುತ್ತದೆ ಎಂದು ಎಪಿಎನ್‌ಆರ್‌ಟಿ ಅಧ್ಯಕ್ಷ ರವಿಕುಮಾರ್ ವೇಮುರಿ ತಿಳಿಸಿದ್ದಾರೆ. ಸಾಗಣೆ ವೆಚ್ಚ ಸೇರಿದಂತೆ ಪ್ರತೀ ಚೀಲಕ್ಕೆ 2,000 ರೂ. ದರ ವಿಧಿಸಲಾಗುತ್ತದೆ. ಎಪಿಎನ್‌ಆರ್‌ಟಿ ಸೊಸೈಟಿಯಲ್ಲಿ 111 ದೇಶದ 85,000 ಸದಸ್ಯರಿದ್ದಾರೆ. ನಮ್ಮ ಯೋಜನೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೇವಸ್ಥಾನದಲ್ಲಿ ಸಂಗ್ರಹವಾಗಿರುವ ವಿದೇಶಿ ನಾಣ್ಯಗಳಲ್ಲಿ ಅಮೆರಿಕ ಮತ್ತು ಬ್ರಿಟನ್‌ನ ನಾಣ್ಯಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಅಲ್ಲದೆ ಸುಮಾರು 8 ಟನ್‌ಗಳಷ್ಟು ಮಲೇಶ್ಯದ ನಾಣ್ಯಗಳಿದ್ದು ಇವನ್ನು ತಮಿಳುನಾಡಿನ ಭಕ್ತರಿಗೆ ಹರಾಜು ಮೂಲಕ ಹಂಚಲು ನಿರ್ಧರಿಸಿದ್ದೇವೆ ಎಂದವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X