Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಕ್ಷಭೇದ ಮರೆತು ಕಾವೇರಿಗಾಗಿ ಒಗ್ಗೂಡಲು...

ಪಕ್ಷಭೇದ ಮರೆತು ಕಾವೇರಿಗಾಗಿ ಒಗ್ಗೂಡಲು ಮುಖ್ಯಮಂತ್ರಿ ಮನವಿ

ವಾರ್ತಾಭಾರತಿವಾರ್ತಾಭಾರತಿ18 July 2018 10:16 PM IST
share
ಪಕ್ಷಭೇದ ಮರೆತು ಕಾವೇರಿಗಾಗಿ ಒಗ್ಗೂಡಲು ಮುಖ್ಯಮಂತ್ರಿ ಮನವಿ

ನವದೆಹಲಿ, ಜು. 18: ಕಾವೇರಿ ನಿರ್ವಹಣಾ ಮಂಡಳಿ ವಿಚಾರದಿಂದ ರಾಜ್ಯಕ್ಕೆ ಕ್ಲಿಷ್ಟ ಪರಿಸ್ಥಿತಿ ಒದಗಿದೆ. ಈ ಬಗ್ಗೆ ಎಲ್ಲರೂ ಒಗ್ಗೂಡಿ ಪಕ್ಷಭೇದ ಮರೆತು ನಮ್ಮ ಬಲವನ್ನು ತೋರಿಸಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಇಲ್ಲಿ ರಾಜ್ಯದ ಸಂಸದರು ಮತ್ತು ರಾಜ್ಯಸಭಾ ಸದಸ್ಯರಲ್ಲಿ ಮನವಿ ಮಾಡಿದರು.

ಮುಂಬರುವ ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯದ ಸಂಸದರು ಮತ್ತು ರಾಜ್ಯಸಭಾ ಸದಸ್ಯರೊಂದಿಗೆ ಮಾಹಿತಿ ಹಂಚಿಕೊಳ್ಳಲು ದೆಹಲಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದ ನೆಲ-ಜಲ, ಸಂಪನ್ಮೂಲಗಳ ರಕ್ಷಣೆಯ ವಿಚಾರದಲ್ಲಿ ರಾಜ್ಯದ ಸಂಸದರು ಪಕ್ಷಭೇದ ಮರೆತು ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಕೈಜೋಡಿಸಿದ್ದನ್ನು ಸ್ಮರಿಸಿದರು. ಅಲ್ಲದೆ, ಈಗ ಕಾವೇರಿ ನಿರ್ವಹಣಾ ಮಂಡಳಿ ವಿಚಾರದಿಂದ ರಾಜ್ಯವು ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದೆ. ನಮ್ಮ ಹಕ್ಕಿನ ನೀರನ್ನು ನಾವು ನ್ಯಾಯಯುತವಾಗಿ ಪಡೆದುಕೊಳ್ಳುವ ದಿಶೆಯಲ್ಲಿ ಎಲ್ಲರೂ ಒಗ್ಗೂಡಿ ಧ್ವನಿ ಎತ್ತುವಂತೆ ಮುಖ್ಯಮಂತ್ರಿಗಳು ಸಂಸದರಲ್ಲಿ ಮನವಿ ಮಾಡಿದರು.

ಸಂಸತ್ ಅಧಿವೇಶನದ ಸಮಯದಲ್ಲಿ ರಾಜ್ಯದ ಎಲ್ಲಾ ಸಂಸದರ ಸಭೆ ನಡೆಸಿ, ರಾಜ್ಯಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿ ಕೇಂದ್ರ ಸರಕಾರದ ಮಟ್ಟದಲ್ಲಿ ರಾಜ್ಯದ ಪ್ರಸ್ತಾವನೆಗಳ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳುವುದು, ಒಂದು ಸತ್ಸಂಪ್ರದಾಯವಾಗಿ ನಡೆದು ಬಂದಿದ್ದು, ಈ ಹಿನ್ನೆಲೆಯಲ್ಲಿ ಇಂದಿನ ಈ ಸಭೆ ಕರೆಯಲಾಗಿದೆ ಎಂದು ಸಭೆಯ ಆರಂಭದಲ್ಲಿ ಮುಖ್ಯಮಂತ್ರಿಗಳು ಸಭೆಗೆ ಮನವರಿಕೆ ಮಾಡಿಕೊಟ್ಟರು.

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಮೈತ್ರಿ ಸರಕಾರ ತನ್ನ ಚೊಚ್ಚಲ ಬಜೆಟ್‌ಗೆ ಅಧಿವೇಶನದಲ್ಲಿ ಅನುಮೋದನೆಯನ್ನು ಪಡೆದುಕೊಂಡಿದೆ. ಹಿಂದಿನ ಜನಪರ ಯೋಜನೆಗಳನ್ನು ಮುಂದುವರೆಸುವುದರ ಜೊತೆಗೆ, ಮತ್ತಷ್ಟು ಜನಪರ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಉದ್ದೇಶವನ್ನು ಸರಕಾರ ಹೊಂದಿದೆ. ಈ ಎಲ್ಲಾ ಜನಪರ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯವಾದ ಆರ್ಥಿಕ ಸಂಪನ್ಮೂಲದ ಕ್ರೋಡೀಕರಣಕ್ಕಾಗಿ ರಾಜ್ಯದ ಪ್ರಸ್ತಾವನೆಗಳ ಶೀಘ್ರ ವಿಲೇವಾರಿಯ ಗುರುತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕೇಂದ್ರದಲ್ಲಿ ಬಾಕಿ ಉಳಿದಿರುವ ವಿಷಯಗಳು ಮತ್ತು ಯೋಜನೆಗಳ ಬಗ್ಗೆ ಕೇಂದ್ರದ ಗಮನ ಸೆಳೆಯುವಂತೆ ರಾಜ್ಯದ ಸಂಸದರು ಮತ್ತು ರಾಜ್ಯಸಭಾ ಸದಸ್ಯರುಗಳಿಗೆ ಕುಮಾರಸ್ವಾಮಿ ಅವರು ಮನವಿ ಮಾಡಿದರು.

ರಾಜ್ಯದಲ್ಲಿ ರೈತರ ಪರಿಸ್ಥಿತಿ, ಪ್ರಕೃತಿ ವಿಕೋಪ ಪರಿಹಾರ, ರೈತರ ಸಾಲ ಮನ್ನಾ, ನೀರಾವರಿ ಯೋಜನೆಗಳು, ಕಾವೇರಿ-ಕೃಷ್ಣ ನದಿ ವಿವಾದ ಹೀಗೆ ಹತ್ತು ಹಲವು ವಿಷಯಗಳ ಮೇಲೆ ಮುಂಗಾರು ಅಧಿವೇಶನದಲ್ಲಿ ಚರ್ಚೆ ನಡೆಯಬೇಕಿದೆ. ಈ ದಿಸೆಯಲ್ಲಿ ಸಂಸದರ ಸಹಾಯ, ಸಹಕಾರ ಹಾಗೂ ಮಾರ್ಗದರ್ಶನವನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕೋರಿದರು.

ಮಾಜಿ ಪ್ರಧಾನಿ ದೇವೆಗೌಡ, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವರುಗಳಾದ ಅನಂತ ಕುಮಾರ್, ಸದಾನಂದಗೌಡ, ರಮೇಶ್ ಜಿಗಜಿಣಗಿ ಹಾಗೂ ಅನಂತಕುಮಾರ್ ಹೆಗಡೆ, ಹಿರಿಯ ಸಂಸದರಾದ ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ, ಆಸ್ಕರ್ ಫೆರ್ನಾಂಡಿಸ್ ಸೇರಿದಂತೆ ಕರ್ನಾಟಕದ ರಾಜ್ಯ ಸಭಾ ಹಾಗೂ ಲೋಕಸಭಾ ಸದಸ್ಯರುಗಳು ಸಭೆಯಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X