Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೌಡರ ಕೊಡುಗೆಗಳ ಬಗ್ಗೆ ಹುಬ್ಬಳ್ಳಿಯಲ್ಲೆ...

ಗೌಡರ ಕೊಡುಗೆಗಳ ಬಗ್ಗೆ ಹುಬ್ಬಳ್ಳಿಯಲ್ಲೆ ಬಹಿರಂಗ ಚರ್ಚೆಗೆ ಸಿದ್ಧ: ಮಾಜಿ ಶಾಸಕ ವೈಎಸ್‌ವಿ ದತ್ತ

ವಾರ್ತಾಭಾರತಿವಾರ್ತಾಭಾರತಿ19 July 2018 6:42 PM IST
share
ಗೌಡರ ಕೊಡುಗೆಗಳ ಬಗ್ಗೆ ಹುಬ್ಬಳ್ಳಿಯಲ್ಲೆ ಬಹಿರಂಗ ಚರ್ಚೆಗೆ ಸಿದ್ಧ: ಮಾಜಿ ಶಾಸಕ ವೈಎಸ್‌ವಿ ದತ್ತ

ಬೆಂಗಳೂರು, ಜು. 19: ಉತ್ತರ ಕರ್ನಾಟಕಕ್ಕೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ನೀಡಿರುವ ಕೊಡುಗೆಗಳ ಬಗ್ಗೆ ಹುಬ್ಬಳ್ಳಿಯಲ್ಲೆ ಬಹಿರಂಗ ಚರ್ಚೆಗೆ ಸಿದ್ಧ. ಅನ್ಯಾಯ ಮಾಡಿದ್ದಾರೆಂದು ಆರೋಪಿಸುವವರು ಚರ್ಚೆಗೆ ಬರಲಿ ಎಂದು ಮಾಜಿ ಶಾಸಕ ವೈಎಸ್‌ವಿ ದತ್ತ ಪಂಥಾಹ್ವಾನ ನೀಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿನ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉ.ಕ.ದ ಅಭಿವೃದ್ದಿಯ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಶೆಟ್ಟರ್ ಆಗ್ರಹವನ್ನು ಸ್ವಾಗತಿಸುವೆ. ಕೇಂದ್ರದಲ್ಲಿದ್ದ ಎನ್‌ಡಿಎ ಸರಕಾರದ ಅವಧಿಯಲ್ಲಿ ಉತ್ತರ ಕರ್ನಾಟಕಕ್ಕೆ ಮಾಡಿರುವ ಅನ್ಯಾಯ ಎಷ್ಟೆಂಬ ಬಗ್ಗೆ ಕಪ್ಪು ಪತ್ರ ನೀಡಲು ಸಿದ್ಧ ಎಂದು ಹೇಳಿದರು.

ಗೌಡರು ನೀರಾವರಿ ಸಚಿವರಾಗಿ, ಮುಖ್ಯಮಂತ್ರಿಯಾಗಿ ಹಾಗೂ ಪ್ರಧಾನಿಯಾಗಿ ಉತ್ತರ ಕರ್ನಾಟಕ ಭಾಗಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ 50 ಪುಟಗಳ ಬಹಿರಂಗ ಪತ್ರ ಅಥವಾ ಉತ್ತರ ಪತ್ರವನ್ನು ಬಿಡುಗಡೆ ಮಾಡಿದ ಅವರು, ಉ.ಕ. ಭಾಗಕ್ಕೆ ಗೌಡರಿಂದ ಅನ್ಯಾಯವಾಗಿದೆ ಎಂಬ ಆರೋಪಕ್ಕೆ ಇದು ಉತ್ತರವಾಗಲಿದೆ ಎಂದರು.

ಉತ್ತರ ಪತ್ರದಲ್ಲಿರುವ ಅಂಕಿ-ಅಂಶಗಳು, ಆದೇಶಗಳು, ವಾಸ್ತವವಾಗಿದ್ದು, ಆಧಾರ ಸಹಿತವಾಗಿವೆ. ವೈಯಕ್ತಿಕ ನೆಲೆಗಟ್ಟಿನಲ್ಲಿ ಉತ್ತರ ಪತ್ರವನ್ನು ಬಿಡುಗಡೆ ಮಾಡಿದ್ದೇನೆ ಎಂದ ಅವರು, ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆ ಸೇರಿ ಎನ್‌ಡಿಎ ಅವಧಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ ಕಪ್ಪುಪತ್ರ ಹೊರತರಲಾಗುವುದು ಎಂದು ಎಚ್ಚರಿಸಿದರು.

ರಾಜ್ಯಕ್ಕೆ ಪ್ರತ್ಯೇಕ ರೈಲ್ವೆ ವಲಯಕ್ಕಾಗಿ ಹೋರಾಟ ಮಾಡಿದವರು ಗೌಡರು. ಅದರ ಪರಿಣಾಮ ಬೆಂಗಳೂರಿನಲ್ಲಿ ರೈಲ್ವೆ ವಲಯ ಸ್ಥಾಪನೆಯಾಯಿತು. ಹುಬ್ಬಳ್ಳಿಯ ರೈಲ್ವೆ ವರ್ಕ್ ಶಾಪ್‌ಗೂ ಪ್ರಧಾನಿಯಾಗಿದ್ದಾಗ ಕಾಯಕಲ್ಪಕೊಟ್ಟರು. ಹುಬ್ಬಳ್ಳಿ-ಅಂಕೋಲ ರೈಲ್ವೆ ಮಾರ್ಗ ಅಧಿಕಾರದಲ್ಲಿದ್ದಾಗ ಹಣ ನೀಡಿದ್ದರೂ, ಇದುವರೆಗೂ ಕಾರ್ಯಗತ ಆಗಿಲ್ಲ ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X