ಪೌರ ಕಾರ್ಮಿಕ ಸುಬ್ರಮಣಿ ನಿವಾಸಕ್ಕೆ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗ ಭೇಟಿ
ಬೆಂಗಳೂರು, ಜು.19: ವೇತನ ವಿಳಂಬ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ ಪೌರ ಕಾರ್ಮಿಕ ಸುಬ್ರಮಣಿ ಅವರ ನಿವಾಸಕ್ಕೆ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರು ಭೇಟಿ ನೀಡಿದರು.
ಗುರುವಾರ ನಗರದ ಪ್ಯಾಲೇಸ್ ಗುಟ್ಟಹಳ್ಳಿ ಮುನೇಶ್ವರ ಬ್ಲಾಕ್‌ನಲ್ಲಿರುವ ಸುಬ್ರಮಣಿ ನಿವಾಸಕ್ಕೆ ಭೇಟಿ ನೀಡಿದ ಆಯೋಗದ ಸದಸ್ಯರು, ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಸುದ್ದಿಗಾರರೊಂದಿಗೆ ಆಯೋಗದ ಸದಸ್ಯ ಜಗದೀಶ್ ಹಿರೇಮಣಿ ಮಾತನಾಡಿ, ಈ ದುರಂತ ನಡೆಯಬಾರದಿತ್ತು. ಆದರೆ ನಡೆದು ಹೋಗಿದೆ. ಇನ್ನು ಮುಂದೆ ಹೀಗೆ ಆಗದಂತೆ ಬಿಬಿಎಂಪಿ ಎಚ್ಚರ ವಹಿಸಬೇಕು ಎಂದರು.
ಸದ್ಯ ಅವರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ. ಅವರಿಗೆ ಸೂಕ್ತ ರೀತಿಯ ಸೌಲಭ್ಯ ಒದಗಿಸುವಂತೆ ಬಿಬಿಎಂಪಿಗೆ ಹೇಳಲಾಗಿದ್ದು, ಮುಂದೆ ಇಂತಹ ದುರ್ಘಟನೆ ನಡೆಯದಂತೆ ಅಧಿಕಾರಿಗಳು ಸೂಕ್ತ ಕ್ರಮವಹಿಸಲಿ ಎಂದು ಹೇಳಿದರು. ಈ ವೇಳೆ ಬಿಬಿಎಂಪಿ ಮೇಯರ್ ಸಂಪತ್‌ರಾಜ್, ಸರ್ಫರಾಜ್‌ಖಾನ್ ಉಪಸ್ಥಿತರಿದ್ದರು.
Next Story





