Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ...

ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ19 July 2018 8:01 PM IST
share
ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಮಡಿಕೇರಿ, ಜು.19: ಅವಧಿಗೆ ಮುನ್ನವೇ ಜಲಾಶಯಗಳು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಹರ್ಷಚಿತ್ತರಾಗಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಜಿಲ್ಲೆಯ ಪ್ರಮುಖ ಜಲಾಶಯವಾಗಿರುವ ಹಾರಂಗಿಗೆ ಆಗಮಿಸಿ ಬಾಗಿನ ಅರ್ಪಿಸಿದರು.

ಕೊಡಗಿನ ಮುಖ್ಯ ಜಲಾಶಯವಾದ ಹಾರಂಗಿ ಅಣೆಕಟ್ಟು ಭರ್ತಿಯಾಗಿದ್ದು, ಒಳಹರಿವು ಹೆಚ್ಚಾದ ಹಿನ್ನೆಯಲ್ಲಿ ಕಾವೇರಿ ನದಿಗೆ ಕಳೆದ 10 ದಿನಗಳ ಹಿಂದೆಯೇ ಸುಮಾರು 22 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಯಬಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಬೃಹತ್ ಮತ್ತು ಮಧ್ಯಮ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ಅವರುಗಳೊಂದಿಗೆ ಗುರುವಾರ ಸಂಜೆ ಹಾರಂಗಿಗೆ ಆಗಮಿಸಿ ಬಾಗಿನ ಸಮರ್ಪಿಸಿದರು. ಪಿರಿಯಾಪಟ್ಟಣದಿಂದ ರಸ್ತೆ ಮೂಲಕ ಹಾರಂಗಿಗೆ ಆಗಮಿಸಿದ ಕುಮಾರಸ್ವಾಮಿ ಜಲಾಶಯದ ಬಳಿ ಇರುವ ಕಾವೇರಿ ಮಾತೆಗೆ ಮೊದಲು ಪೂಜೆ ಸಲ್ಲಿಸಿದರು.

ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಕುಮಾರಸ್ವಾಮಿ, ಕಳೆದ 35 ವರ್ಷಗಳ ಬಳಿಕ ಕೊಡಗಿನಲ್ಲಿ ಉತ್ತಮ ಮಳೆಯಾಗಿದೆ. ಇದರಿಂದ ಕಾವೇರಿ ತುಂಬಿ ಹರಿದಿದ್ದು, ರಾಜ್ಯದ ಎಲ್ಲಾ ಅಣೆಕಟ್ಟುಗಳು, ಕೆರೆಗಳು ಸಂಪೂರ್ಣ ತುಂಬಿ ತುಳುಕುತ್ತಿರುವುದರಿಂದ ರಾಜ್ಯದ ಜನತೆ ಹರ್ಷಗೊಂಡಿದ್ದಾರೆ. ಆದರೆ ಈ ಮಳೆ ಕೊಡಗು ಜಿಲ್ಲೆಯ ಮಟ್ಟಿಗೆ ಸಾಕಷ್ಟು ನಷ್ಟವನ್ನೂ ಉಂಟು ಮಾಡಿರುವುದು ಸರಕಾರದ ಗಮನಕ್ಕೆ ಬಂದಿದೆ. ನಾಡಿನ ಜನರಿಗೆ ನೀರುಣಿಸುವ ಕೊಡಗಿನ ಜನರ ಕಷ್ಟಗಳಿಗೆ ಸರ್ಕಾರ ಸ್ಪಂದಿಸಲಿದೆ ಎಂದರು.

ಕೊಡಗು ಜಿಲ್ಲೆಯಲ್ಲಿ ಮಳೆಯಿಂದಾದ ನಷ್ಟಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳ ಜೊತೆ ಚರ್ಚಿಸಿ ಸೂಕ್ತ ಪರಿಹಾರ ಕಲ್ಪಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ನುಡಿದರು.

ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ಮನೆಗಳು ಮಳೆಯಿಂದ ಕುಸಿದಿವೆ .ಜನ ಜಾನುವಾರುಗಳಿಗೆ ತೊಂದರೆಯಾಗಿದೆ. ವಿದ್ಯುಚ್ಛಕ್ತಿ ಅಡಚಣೆಯಾಗಿದೆ ವಿದ್ಯುತ್ ಸಂಪರ್ಕದ ಅನೇಕ ಕಂಬಗಳು ನೆಲಕಚ್ಚಿ ಸಾಕಷ್ಟು ನಷ್ಟವಾಗಿದೆ. ಇವೆಲ್ಲವುಗಳ ಬಗ್ಗೆ ಅಧಿಕಾರಿಗಳ ಮೂಲಕ ಮಾಹಿತಿ ಪಡೆದಿದ್ದೇನೆ. ಕೊಡಗು ಜಿಲ್ಲೆ ಮಾತ್ರವಲ್ಲದೆ ಹಾಸನ, ಮೈಸೂರು, ಮಂಗಳೂರು ಮುಂತಾದ ಕೆಲವು ಜಿಲ್ಲೆಗಳಲ್ಲೂ ಭಾರೀ ಮಳೆಯಿಂದ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ನಷ್ಟದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವುದರೊಂದಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೊಡಗಿನಲ್ಲಿ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆಯಲ್ಲಿ ಪಕ್ಕದ ಮೈಸೂರು, ಹಾಸನ ಜಿಲ್ಲೆಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ನುಡಿದರು.

ಈ ಸಂದರ್ಭ ಮುಖ್ಯಮಂತ್ರಿ ಹಾಗೂ ಸಚಿವರುಗಳೊಂದಿಗೆ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಡಾ.ಎ.ಟಿ.ರಾಮಸ್ವಾಮಿ, ಕೆ.ಮಹದೇವ, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್.ಭೋಜೇಗೌಡ, ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ.ಸದಸ್ಯೆ  ಕೆ.ಆರ್.ಮಂಜುಳಾ, ಸೋಮವಾರಪೇಟೆ ತಾ.ಪಂ.ಅಧ್ಯಕ್ಷೆ ಪುಷ್ಪಾ ರಾಜೇಶ್, ಉಪಾಧ್ಯಕ್ಷ  ಅಭಿಮನ್ಯು ಕುಮಾರ್, ಕೂಡುಮಂಗಳೂರು ಗ್ರಾ.ಪಂ.ಅಧ್ಯಕ್ಷೆ ಲಕ್ಷ್ಮೀ ರವಿ, ಉಪಾಧ್ಯಕ್ಷ  ಕೆ.ವಿ.ಸಣ್ಣಪ್ಪ ಇತರರು ಇದ್ದರು.

ಜೆಡಿಎಸ್ ಕಾರ್ಯಕರ್ತರ ಹೈಡ್ರಾಮ
ಜಲಾಶಯದ ಅತಿಥಿ ಗೃಹಕ್ಕೆ ಮುಖ್ಯಮಂತ್ರಿ ಹಾಗೂ  ಸಚಿವರುಗಳು ಆಗಮಿಸುವ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಭೇಟಿ ಮಾಡಲು ಮುಂದಾದಾಗ ಹೊರಗಡೆ ಮಳೆಯಲ್ಲೇ ನೆನೆದುಕೊಂಡು ಕಾಯುತ್ತಿದ್ದ ಜಿಲ್ಲೆಯ ಹಲವು ಜೆಡಿಎಸ್ ಕಾರ್ಯಕರ್ತರು ಮುಖ್ಯಮಂತ್ರಿಗಳ ಎದುರಿನಲ್ಲೇ ಅಧ್ಯಕ್ಷರ ವಿರುದ್ಧ ಧಿಕ್ಕಾರ ಕೂಗಿದ ಘಟನೆ ನಡೆಯಿತು.

ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಬೆಳವಣಿಗೆಯತ್ತ ಗಮನಹರಿಸದೆ ತಮ್ಮ ವೈಯಕ್ತಿಕ ಬೆಳವಣಿಗೆಗೆ ಪೂರಕವಾಗಿ ನಡೆದುಕೊಳ್ಳುತ್ತಿದ್ದಾರೆ. ಯಾವುದೇ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಯುವ ಕಾರ್ಯಕರ್ತರನ್ನು ಮುಂದೆಬರಲು ಬಿಡುತ್ತಿಲ್ಲ ಎಂದು ಆರೋಪಿಸಿದ ಕಾರ್ಯಕರ್ತರು ಸಂಕೇತ್‍ ಪೂವಯ್ಯ ವಿರುದ್ಧ ಘೋಷಣೆಗಳನ್ನು ಕೂಗಿದರು.

ಜಿಲ್ಲಾಡಳಿತದ ಅವ್ಯವಸ್ಥೆಯಿಂದಾಗಿ ನೆರೆದಿದ್ದ ರೈತರು ಹಾಗೂ ಸಾವಿರಾರು ಸಾರ್ವಜನಿಕರಿಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಲು ಅನಾನುಕೂಲವಾಗಿತ್ತು. ವಿಪರೀತ ಮಳೆಯೂ ಇದ್ದುದರಿಂದ ನೂಕುನುಗ್ಗಲು ಹೆಚ್ಚಾಗಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X