Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗು ಜಿಲ್ಲೆಗೆ ಮೊದಲ ಹಂತದಲ್ಲಿ 100...

ಕೊಡಗು ಜಿಲ್ಲೆಗೆ ಮೊದಲ ಹಂತದಲ್ಲಿ 100 ಕೋಟಿ ರೂ. ಪರಿಹಾರ: ಸಿಎಂ ಕುಮಾರಸ್ವಾಮಿ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ19 July 2018 9:48 PM IST
share
ಕೊಡಗು ಜಿಲ್ಲೆಗೆ ಮೊದಲ ಹಂತದಲ್ಲಿ 100 ಕೋಟಿ ರೂ. ಪರಿಹಾರ: ಸಿಎಂ ಕುಮಾರಸ್ವಾಮಿ ಘೋಷಣೆ

ಮಡಿಕೇರಿ, ಜು.19: ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳ ಕಾಲ ಸುರಿದ ಧಾರಾಕಾರ ಮಳೆಗೆ ಸುಮಾರು 329 ಕೋಟಿ ರೂ.ಗಳಷ್ಟು ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದ್ದು, ಮೊದಲ ಹಂತದಲ್ಲಿ 100 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಳೆ ಹಾನಿ ಮತ್ತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಜಿಲ್ಲೆಯ ಆಗು ಹೋಗುಗಳ ಬಗ್ಗೆ ಸಮಗ್ರ ಮಾಹಿತಿ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗನ್ನು ಎಂದಿಗೂ ಸರ್ಕಾರ ಕಡೆಗಣಿಸಿಲ್ಲ. ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಜಿಲ್ಲೆಯ ಜನತೆ ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದೆಂದು ತಿಳಿಸಿದರು. ಮಳೆ ಹಾನಿ ಪರಿಹಾರವಾಗಿ ಮೊದಲ ಹಂತದಲ್ಲಿ 100 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.

ಗಾಳಿ ಮಳೆಯಿಂದ ಮನೆ ಕಳೆದುಕೊಂಡವರಿಗೆ ಇಲ್ಲಿಯವರೆಗೆ ಕೇವಲ 5 ಸಾವಿರ ರೂ. ಪರಿಹಾರವಾಗಿ ನೀಡಲಾಗುತ್ತಿತ್ತು. ಆದರೆ, ಇನ್ನು ಮುಂದೆ ಮನೆ ಸಂಪೂರ್ಣವಾಗಿ ನಾಶವಾದರೆ ಅದರ ಮಾಲೀಕರಿಗೆ 95 ಸಾವಿರ ರೂ. ಪರಿಹಾರಧನ ಮತ್ತು ಆಶ್ರಯ ಮನೆ ನಿರ್ಮಿಸಿಕೊಡಲಾಗುವುದೆಂದು ಮುಖ್ಯಮಂತ್ರಿಗಳು ಇದೇ ಸಂದರ್ಭ ತಿಳಿಸಿದರು.

ಜಲಾವೃತಗೊಂಡು ಭತ್ತದ ಕೃಷಿ ನಾಶವಾಗಿ ನಷ್ಟ ಅನುಭವಿಸುತ್ತಿರುವ ಕೃಷಿಕರಿಗೆ ಉಚಿತವಾಗಿ ಬಿತ್ತನೆ ಬೀಜ ವಿತರಿಸಲಾಗುವುದು. ಹಾನಿಗೊಳಗಾಗಿರುವ ಲೋಕೋಪಯೋಗಿ ಇಲಾಖೆಯ ರಸ್ತೆಗಳ ದುರಸ್ತಿಗೆ ಅಗತ್ಯವಿರುವ ಕ್ರಿಯಾಯೋಜನೆ ಮತ್ತು ಟೆಂಡರ್ ಪ್ರಕ್ರಿಯೆಯನ್ನು ಮುಂದಿನ 15 ದಿನಗಳ ಒಳಗೆ ಪೂರ್ಣಗೊಳಿಸುವಂತೆ ಈಗಾಗಲೆ ಲೋಕೋಪಯೋಗಿ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

ಕಾಫಿ ಬೆಳೆ ಹಾನಿಯ ವರದಿಯನ್ನು ತಯಾರಿಸಲು ಕಾಫಿ ಮಂಡಳಿ ಕನಿಷ್ಠ ಒಂದು ತಿಂಗಳ ಕಾಲಾವಕಾಶ ಕೋರಿದ್ದಾರೆಂದು ಅವರು ಇದೇ ಸಂದರ್ಭ ತಿಳಿಸಿದರು. ಲೋಕೋಪಯೋಗಿ ಇಲಾಖಾ ವ್ಯಾಪ್ತಿಯಲ್ಲಿ 139 ಕೋಟಿ ರೂ.ಗಳಷ್ಟು ನಷ್ಟ ಸಂಭವಿಸಿದ್ದು, ಮೊದಲ ಹಂತದಲ್ಲಿ 12 ಕೊಟಿ ರೂ.ಗಳಿಗೆ ಕೋರಿಕೆ ಇದೆ. ಜಿಲ್ಲಾ ಪಂಚಾಯತ್ 48 ಕೋಟಿ ರೂ.ಗಳ ಬೇಡಿಕೆಯನ್ನಿಟ್ಟಿದೆ. ಹೀಗೆ ಒಟ್ಟು ಜಿಲ್ಲಾ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದಾಗಿ 329 ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎನ್ನುವ ವರದಿ ಬಂದಿದ್ದು, ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಲಿದೆಯೆಂದು ಮುಖ್ಯ ಮಂತ್ರಿಗಳು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಸುಮಾರು 2 ಸಾವಿರ ವಿದ್ಯುತ್ ಕಂಬಗಳು ನಾಶವಾಗಿದ್ದು, ನೆರೆಯ ಹಾಸನ ಮತ್ತು ಮೈಸೂರು ಜಿಲ್ಲೆಗಳಿಂದ ತಾತ್ಕಾಲಿಕವಾಗಿ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಿ ಸರಿಪಡಿಸುವ ಮೂಲಕ ವಿದ್ಯುಚ್ಛಕ್ತಿ ಸಂಪರ್ಕವನ್ನು ತ್ವರಿತಗತಿಯಲ್ಲಿ ನೀಡಲಾಗುವುದು ಎಂದರು. 

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಾಕಷ್ಟು ಸಂಕಷ್ಟ ಎದುರಾಗಿದ್ದು, ಇದನ್ನು ಖುದ್ದು ಪರಿಶೀಲಿಸುವುದಕ್ಕಾಗಿ ನಾನು ಕೊಡಗಿಗೆ ಆಗಮಿಸಿದ್ದೇನೆ. ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸದ್ಯದಲ್ಲೆ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ವಿಶೇಷ ಸಭೆಯನ್ನು ನಡೆಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭ ಉಪಸ್ಥಿತರಿದ್ದ ಕೆ.ಜಿ.ಬೋಪಯ್ಯ, ಜಿಲ್ಲೆಗೆ ಉಳಿದ ಪರಿಹಾರದ ಮೊತ್ತವನ್ನು ಶೀಘ್ರ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ನಂತರ ಮುಖ್ಯಮಂತ್ರಿಗಳು ಸಂಘ ಸಂಸ್ಥೆಗಳಿಂದ ಹಾಗೂ ಸಾರ್ವಜನಿಕರಿಂದ ಮನವಿ ಪತ್ರ ಸ್ವೀಕರಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X