ಮುಂಡಗೋಡ: ಹಲ್ಲೆ ನಡೆಸಿ ಜಾತಿ ನಿಂದನೆ; ಪ್ರಕರಣ ದಾಖಲು
ಮುಂಡಗೋಡ,ಜು.19: ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಜಮೀನಿನ ವಿಷಯಯಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಲ್ಲಪ್ಪ ಯಮನಪ್ಪ ಹರಿಜನ ಎಂಬಾತನೇ ಹಲ್ಲೆಗೀಡಾದ ವ್ಯಕ್ತಿಯಾಗಿದ್ದಾನೆ. ಪರಶುರಾಮ ಹೊಸಮನೆ, ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ ಆರೋಪಿ.
'ಈತ ಜಮೀನಿನ ವಿಷಯಕ್ಕೆ ಸಂಬಂಧಿಸಿದಂತೆ ಜುಲೈ 1 ರಂದು ನನ್ನ ಜಮೀನಿನಲ್ಲಿ ಹಲ್ಲೆ ಮತ್ತು ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈಯ್ದಿದ್ದಾನೆ; ಎಂದು ಹಲ್ಲೆಗೀಡಾದ ಯಲ್ಲಪ್ಪ ಯಮನಪ್ಪ ಹರಿಜನ ಬುಧವಾರ ಇಲ್ಲಿನ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story