Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ಸೈಬರ್ ಕ್ರೈಂ ಮತ್ತು ಪತ್ರಿಕೆ...

ಬಂಟ್ವಾಳ: ಸೈಬರ್ ಕ್ರೈಂ ಮತ್ತು ಪತ್ರಿಕೆ ಮಾಹಿತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ20 July 2018 6:05 PM IST
share
ಬಂಟ್ವಾಳ: ಸೈಬರ್ ಕ್ರೈಂ ಮತ್ತು ಪತ್ರಿಕೆ ಮಾಹಿತಿ ಕಾರ್ಯಾಗಾರ

ಬಂಟ್ವಾಳ, ಜು. 20: ಆಧುನಿಕ ಸಮಾಜದಲ್ಲಿ ಯುವ ಜನತೆ ಮೊಬೈಲ್ ಮೂಲಕ ಫೇಸ್‍ಬುಕ್, ವಾಟ್ಸ್ ಆಪ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ತಪ್ಪು ಸಂದೇಶ ಮತ್ತು ನಕಲಿ ಚಿತ್ರಗಳನ್ನು ಸೃಷ್ಟಿ ಸಹಿತ ರವಾನಿಸುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಎಎಸ್ಪಿ ಋಷಿಕೇಶ್ ಸೊನವಾಣೆ ಹೇಳಿದ್ದಾರೆ. 

ಬಂಟ್ವಾಳ ತಾಲೂಕಿನ ಕರ್ನಾಟಕ ಪತ್ರಕರ್ತರ ಸಂಘ ಮತ್ತು ಎಸ್‍ವಿಎಸ್ ಕಾಲೇಜಿನ ಎನ್‍ಎಸ್‍ಎಸ್ ಘಟಕ ವತಿಯಿಂದ ಪತ್ರಿಕಾ ದಿನಾಚರಣೆ ಪ್ರಯುಕ್ತ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ "ಸೈಬರ್ ಕ್ರೈಂ ಮತ್ತು ಪತ್ರಿಕೆ" ಮಾಹಿತಿ ಕಾರ್ಯಾಗಾರದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.
ಮಾಹಿತಿ ಹಂಚಿಕೊಳ್ಳುವ ಭರದಲ್ಲಿ ಯಾವುದೇ ಜಾತಿ, ಧರ್ಮ, ದೇವರ ನಿಂದನೆ ಮತ್ತು ದೇಶ ವಿರೋಧಿ ವಿಚಾರಗಳ ಸೃಷ್ಠಿ ಮತ್ತು ರವಾನೆ ಕೂಡಾ ದಂಡ ವಸೂಲಿ ಮತ್ತು ಜೈಲು ಶಿಕ್ಷೆ ವಿಧಿಸುವಂತಹ ಕಠಿಣ ಕಾನೂನು ವ್ಯಾಪ್ತಿಗೆ ಒಳಪಡುತ್ತದೆ ಎಂದರು. 

ಇಂದು ಬಹುತೇಕ ಸಂದರ್ಭದಲ್ಲಿ ಸುಳ್ಳು ಮಾಹಿತಿ ರವಾನಿಸುವ ಮೂಲಕ ಸಮಾಜದಲ್ಲಿ ಅನಗತ್ಯ ಗೊಂದಲ ಸೃಷ್ಟಿಯಾಗುತ್ತಿದ್ದು, ಬ್ಲಾಕ್‍ಮೇಲ್, ಬ್ಯಾಂಕಿಂಗ್ ವ್ಯವಹಾರ ಮತ್ತು ಕೆಲವೊಂದು ಆನ್‍ಲೈನ್ ಸಾಮಾಗ್ರಿ ಮಾರಾಟಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಪಾಸ್‍ವರ್ಡ್ ಪಡೆದು ಖಾತೆಯಿಂದ ಹಣ ಲಪಟಾಯಿಸುತ್ತಿರುವ ಬಗ್ಗೆಯೂ ಪ್ರಕರಣ ಹೆಚ್ಚಳವಾಗಿದೆ. ಇವೆಲ್ಲವೂ ವಿದೇಶದಲ್ಲಿದ್ದು, ಕಾರ್ಯಾಚರಿಸಿದರೂ ಅಂತಿಮವಾಗಿ ಪೊಲೀಸರ ತನಿಖಾ ತಂಡಕ್ಕೆ ಸಿಕ್ಕಿ ಬೀಳುತ್ತಾರೆ ಎಂದು ಎಚ್ಚರಿಸಿದರು. 

ಕಾಲೇಜಿನ ಉಪಪ್ರಾಂಶುಪಾಲೆ ಡಾ. ಸುಜಾತ ಎಚ್.ಆರ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಯುವ ಸಮೂಹಕ್ಕೆ ಸೈಬರ್ ಕ್ರೈಂ ಕೆಡುಕಿನ ಬಗ್ಗೆ ಪತ್ರಕರ್ತರ ಸಂಘಟನೆ ಮಾಹಿತಿ ಕಾರ್ಯಾಗಾರ ಆಯೋಜಿಸಿರುವುದು ಸಮಯೋಚಿತ ಮತ್ತು ಔಚಿತ್ಯಪೂರ್ಣವಾಗಿದೆ ಎಂದರು.

ಬಂಟ್ವಾಳ ಗ್ರಾಮಾಂತರ ಠಾಣಾಧಿಕಾರಿ ಪ್ರಸನ್ನ ಎಂ. ಮಾತನಾಡಿ, ಪೊಲೀಸ್ ದಂಡ ಸಂಹಿತೆ ಸಹಿತ ವಿವಿಧ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಿದರು. 

ಜೇಸಿ ರಾಜ್ಯ ತರಬೇತುದಾರ, ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಪತ್ರಿಕಾ ದಿನಾಚರಣೆ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. 

ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್, ಎನ್ನೆಸ್ಸೆಸ್ ಘಟಕ ಯೋಜನಾಧಿಕಾರಿ ಕಿಟ್ಟು ಕೆ. ರಾಮಕುಂಜ ಶುಭ ಹಾರೈಸಿದರು. 

ಪತ್ರಕರ್ತರಾದ ದತ್ತಾತ್ರೇಯ ಹೆಗ್ಡೆ, ಸಂದೀಪ್ ಸಾಲ್ಯಾನ್, ದೀಪಕ್ ಸಾಲ್ಯಾನ್, ಪತ್ರಿಕಾ ಛಾಯಾಗ್ರಾಹಕ ಸತೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.  

ಸಂಘದ ಅಧ್ಯಕ್ಷ ಮೋಹನ್ ಕೆ. ಶ್ರೀಯಾನ್ ರಾಯಿ ಸ್ವಾಗತಿಸಿದರು. ಹಿರಿಯ ಪತ್ರಕರ್ತ ರಾಜಾ ಬಂಟ್ವಾಳ್ ಪ್ರಾಸ್ತಾವಿಕ ಮಾತನಾಡಿದರು. ಸಂಘದ ಕಾರ್ಯದರ್ಶಿ ಲತೀಫ್ ನೇರಳಕಟ್ಟೆ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X