ಟ್ರಕ್ ಢಿಕ್ಕಿ ಹೊಡೆದು ಐವರು ಶಾಲಾಮಕ್ಕಳು ಮೃತ್ಯು

ಓಡಿಶಾ,ಜು.20: ಭದ್ರಕ್ ಜಿಲ್ಲೆಯ ರನಿತಾಲಾದಲ್ಲಿ ರಾ.ಹೆ.16ರಲ್ಲಿ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ ಐವರು ಶಾಲಾಮಕ್ಕಳು ಸಾವನ್ನಪ್ಪಿದ್ದು,ಇತರ ಆರು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದಾರೆ. ಗುರುವಾರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮಕ್ಕಳು ತಮ್ಮ ಸೈಕಲ್‌ಗಳಲ್ಲಿ ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನೆಯ ಬಳಿಕ ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಿಂದ ಪರಾರಿಯಾಗಿದ್ದಾರೆ.
ಮೃತ ಮಕ್ಕಳ ಕುಟುಂಬಕ್ಕೆ ತಲಾ ಎರಡು ಲ.ರೂ.ಪರಿಹಾರವನ್ನು ಘೋಷಿಸಿರುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಗಾಯಾಳುಗಳಿಗೆ ಉಚಿತ ಚಿಕಿತ್ಸೆಯನ್ನು ಒದಗಿಸುವುದಾಗಿ ಹೇಳಿದ್ದಾರೆ.
ಈ ದುರ್ಘಟನೆಯಿಂದ ಕುಪಿತ ಜನರು ಟ್ರಕ್‌ಗೆ ಬೆಂಕಿ ಹಚ್ಚಿದ್ದು,ಪೊಲೀಸ್ ವಾಹನಗಳ ಮೇಲೂ ದಾಳಿ ನಡೆಸಿದ್ದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು
Next Story





