ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ
ಬೆಂಗಳೂರು, ಜು.20: ಕರ್ನಾಟಕ ಜಾನಪದ ಅಕಡೆಮಿಯು ಜ.1, 2016 ರಿಂದ ಡಿ.31, 2016 ರವರೆಗೆ ಹಾಗೂ ಜ.1, 2017 ರಿಂದ ಡಿ.31, 2017 ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಜನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕೆ ಆಹ್ವಾನಿಸಲಾಗಿದೆ.
ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ ಹಾಗೂ ಜನಪದ ಸಂಕೀರ್ಣ ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳಿಗೆ ಬಹುಮಾನ ನೀಡಲಾಗುತ್ತದೆ. ಲೇಖಕರು ತಮ್ಮ 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೆ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂ.02 ಇಲ್ಲಿಗೆ ಆ.10ರೊಳಗೆ ಖುದ್ದಾಗಿ, ಕೋರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಲು ಪ್ರಕಟಣೆ ಕೋರಿದೆ.
Next Story





