ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ: 6033 ಪ್ರಯಾಣಿಕರಿಗೆ ದಂಡ
ಬೆಂಗಳೂರು, ಜು. 20: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ) ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಮಾಣ ಮಾಡುತ್ತಿದ್ದ ಒಟ್ಟು 6033 ಮಂದಿ ಪ್ರಯಾಣಿಕರಿಂದ ಒಟ್ಟು 10.94 ಲಕ್ಷ ರೂ.ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ಹೇಳಿದೆ.
ಸಂಸ್ಥೆಯ ತನಿಖಾ ತಂಡಗಳಿಂದ, ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 40,299 ವಾಹನಗಳನ್ನು ತನಿಖೆಗೊಳಪಡಿಸಿ 4576 ಪ್ರಕರಣಗಳನ್ನು ಪತ್ತೆಹಚ್ಚಿ, 6033 ಟಿಕೆಟ್ ರಹಿತ ಪ್ರಯಾಣಿಕರಿಂದ 10,94,625 ರೂ.ದಂಡ ವಸೂಲಿ ಮಾಡಲಾಗಿದೆ. ಅಲ್ಲದೆ, ಸಂಸ್ಥೆ ಆದಾಯದಲ್ಲಿ ಆಗುತ್ತಿದ್ದ 92,272 ರೂ. ಸೋರಿಕೆಯನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ ಹಾಗೂ ತಪ್ಪಿತಸ್ಥರ ವಿರುದ್ಧ ಕೆಎಸ್ಸಾರ್ಟಿಸಿ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಿದೆ. ಸಾರ್ವಜನಿಕ ಪ್ರಯಾಣಿಕರು, ಸಂಸ್ಥೆ ವಾಹನಗಳಲ್ಲಿ ಪ್ರಯಾಣಿಸುವ ವೇಳೆ ಸೂಕ್ತ ಟಿಕೆಟ್/ಪಾಸ್ ಪಡೆದು ಪ್ರಯಾಣಿಸಬೇಕು ಎಂದು ಕೋರಿದೆ.
Next Story





