Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಧಿಕಾರ ಕಳೆದುಕೊಳ್ಳುವ ಮೌಢ್ಯದ ಬಗ್ಗೆ...

ಅಧಿಕಾರ ಕಳೆದುಕೊಳ್ಳುವ ಮೌಢ್ಯದ ಬಗ್ಗೆ ನಂಬಿಕೆ ಇಲ್ಲ: ಸಿಎಂ ಕುಮಾರಸ್ವಾಮಿ

19 ವರ್ಷಗಳ ಬಳಿಕ ಮುಖ್ಯಮಂತ್ರಿಯಿಂದ ತಲಕಾವೇರಿಯಲ್ಲಿ ಪೂಜೆ

ವಾರ್ತಾಭಾರತಿವಾರ್ತಾಭಾರತಿ20 July 2018 10:47 PM IST
share
ಅಧಿಕಾರ ಕಳೆದುಕೊಳ್ಳುವ ಮೌಢ್ಯದ ಬಗ್ಗೆ ನಂಬಿಕೆ ಇಲ್ಲ: ಸಿಎಂ ಕುಮಾರಸ್ವಾಮಿ

ಮಡಿಕೇರಿ, ಜು.20: ತಲಕಾವೇರಿಗೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುವ ಮೌಢ್ಯದ ಬಗ್ಗೆ ನನಗೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಖಾರವಾಗಿ ನುಡಿದಿದ್ದಾರೆ.

ಕಾವೇರಿಯ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲರು ತಲಕಾವೇರಿಗೆ ಬಂದು ಅಧಿಕಾರ ಕಳೆದುಕೊಂಡಿದ್ದರು ಎಂದು ಬಿಂಬಿಸಿರುವುದನ್ನು ನಾನು ನೋಡಿದ್ದೇನೆ. ದೇವರು ಕೊಟ್ಟಿರುವ ಅಧಿಕಾರಿವನ್ನು ದೇವರೇ ಕಾಪಾಡುತ್ತಾನೆ. ನಾನು ಮೊದಲಿನಿಂದಲೂ ಯಾವುದೇ ಮೂಢ ನಂಬಿಕೆ ಆಚರಿಸಿಕೊಂಡು ಬಂದಿಲ್ಲ. ಒಂದು ವಿಶ್ವಾಸ ಅಷ್ಟೇ, ಕಾಕತಾಳಿಯವನ್ನೇ ನಿಜವೆಂದು ಬಾವಿಸಬಾರದು. ದೇವರ ಅನುಗ್ರಹದಲ್ಲಿ ನಾವಿರಬೇಕು. ಮೂಢ ನಂಬಿಕೆಗಳು ನಾವು ಸೃಷ್ಟಿ ಮಾಡಿಕೊಂಡಿರುವಂತದ್ದು ಎಂದು ಅವರು ಅಭಿಪ್ರಾಯಪಟ್ಟರು.

ನಾವೆಲ್ಲ ಮಾನವರು, ಭಯ ಭಕ್ತಿಯಿಂದ ದೇವರಿಗೆ ಪೂಜೆ ಸಲ್ಲಿಸಬೇಕು. ನಾನು ನಾಡಿನ ಜನತೆಗೆ ಸುಭಿಕ್ಷೆ ನೀಡುವಂತೆ ಪ್ರಾರ್ಥಿಸಲು ಇಲ್ಲಿಗೆ ಬಂದಿದ್ದೇನೆ. ನಾಲ್ಕು ಜಲಾಶಯಗಳಿಗೂ ತೆರಳಿ ಪ್ರಕೃತಿ ಮಾತೆಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು.

ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ಉತ್ತಮ ಮಳೆಯಿಂದಾಗಿ ನಾಡಿನ ನದಿಗಳು ತುಂಬಿ ಹರಿಯುತ್ತಿದ್ದು, ಮುಖ್ಯಮಂತ್ರಿಗಳು ತಲಕಾವೇರಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ಕಾವೇರಿ ಮಾತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಧರ್ಮವನ್ನು ಯಾರು ಕಾಪಾಡುತ್ತಾರೋ ಅವರನ್ನು ಧರ್ಮ ಕಾಪಾಡುತ್ತದೆ ಎಂದು ತಲಕಾವೇರಿಯಲ್ಲಿ ಹೇಳಿದರು.

ನಾಡಿನ ಜನ ಸುಭಿಕ್ಷೆಯಿಂದ ಇರಬೇಕು ಮತ್ತು ಉತ್ತಮ ಆಡಳಿತವನ್ನು ನೀಡಬೇಕೆನ್ನುವ ಗುರಿ ಸಮ್ಮಿಶ್ರ ಸರಕಾರದ್ದು. ಚಾಮುಂಡಿ ಬೆಟ್ಟ ಮತ್ತು ಎಲ್ಲಾ ಜಲಾಶಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ರಾಜ್ಯದ ಒಳಿತಿಗಾಗಿ ಪ್ರಾರ್ಥಿಸಲಾಗುವುದು ಎಂದು ಶಿವಕುಮಾರ್ ತಿಳಿಸಿದರು.

ಬಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯ ಹಾಗೂ ತಲಕಾವೇರಿಯಲ್ಲಿ ಮುಖ್ಯಮಂತ್ರಿಗಳು ವಿಶೇಷ ಪೂಜೆ ಸಲ್ಲಿಸಿದ ಸಂದರ್ಭ ಪತ್ನಿ ಅನಿತಾ ಕುಮಾರಸ್ವಾಮಿ, ರೇಷ್ಮೆ ಸಚಿವ ಸಾ.ರಾ. ಮಹೇಶ್, ಶಾಸಕ ಕೆ.ಜಿ. ಬೋಪಯ್ಯ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಮತ್ತಿತರರು ಹಾಜರಿದ್ದರು.

ಹಲವು ವರ್ಷಗಳ ನಂತರ ಕಾವೇರಿ ಮಾತೆಯ ಅನುಗ್ರಹದಿಂದ ಕಾವೇರಿ ಭಾಗದ 4 ಜಲಾಶ ಯಗಳು ಭರ್ತಿಯಾಗಿವೆ. ಕರ್ನಾಟಕ ಹಾಗೂ ತಮಿಳುನಾಡು ನಡುವಿನ ನೀರಿನ ಸಮಸ್ಯೆಗೆ ಕಾವೇರಿ ತಾಯಿಯೇ ಪರಿಹಾರ ನೀಡಿದ್ದಾಳೆ. ನ್ಯಾಯಾಲಯದ ತೀರ್ಪಿಗಿಂತ ಕಾವೇರಿ ತಾಯಿ ಕೊಡುವ ತೀರ್ಪು ಸಮಾಧಾನಕರವಾದುದು. ಈ ಹಿನ್ನೆಲೆಯಲ್ಲಿ ಕಾವೇರಿ ಸನ್ನಿಧಾನಕ್ಕೆ ಭೇಟಿ ನೀಡಿ ಪೂಜಾ ಕಾರ್ಯದಲ್ಲಿ ಭಾಗಿಯಾಗಿದ್ದೇನೆ.
-ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

ಶಿರೂರು ಶ್ರೀಗಳ ನಿಗೂಢ ಸಾವಿನ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಶ್ರೀಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಆ ವಿಚಾರ ಪ್ರಸ್ತಾಪಿಸುವುದು ಸರಿಯಲ್ಲ ಎಂದು ಪ್ರತಿಕ್ರಿಯೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X